Rameshwaram Cafe: ಬಾಂಬರ್‌ಗಾಗಿ ನೆರೆ ರಾಜ್ಯಗಳಿಗೆ ಪೊಲೀಸ್‌

Team Udayavani, Mar 4, 2024, 10:26 AM IST

Rameshwaram Cafe: ಬಾಂಬರ್‌ಗಾಗಿ ನೆರೆ ರಾಜ್ಯಗಳಿಗೆ ಪೊಲೀಸ್‌

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಪ್ರಕರಣ ಸಂಬಂಧ ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಹಾಗೂ ಇತರೆ ತನಿಖಾ ಸಂಸ್ಥೆಗಳು ಶಂಕಿತನ ಪತ್ತೆಗಾಗಿ ನೆರೆ ರಾಜ್ಯಗಳಿಗೆ ತನಿಖಾ ತಂಡ ತೆರಳಿದ್ದು, ಅಲ್ಲಿ ಈ ಹಿಂದೆ ನಡೆದ ಸ್ಫೋಟ ಪ್ರಕರಣಗಳ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಇನ್ನು ನೆರೆಯ ಆಂಧ್ರಪ್ರದೇಶ, ತೆಲಂಗಾಣ, ಕೇರಳ, ತಮಿಳುನಾಡು ರಾಜ್ಯಗಳಿಗೆ ತನಿಖಾ ತಂಡಗಳು ಭೇಟಿ ನೀಡಿ ಮಾಹಿತಿ ಸಂಗ್ರಹಣೆ ಮಾಡುತ್ತಿವೆ. ಈ ಹಿಂದೆ ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ, ತಮಿಳುನಾಡಿನ ಕೊಯ ಮತ್ತೂರಿನಲ್ಲಿ ನಡೆದ ಬಾಂಬ್‌ ಸ್ಫೋಟ ಪ್ರಕರಣ ಗಳಿಗೂ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್‌ ಸ್ಫೋಟ ಪ್ರಕರಣಗಳಲ್ಲಿ ಕೆಲವು ಸಾಮ್ಯತೆಗಳಿವೆ ಎಂದು ಹೇಳಲಾಗಿದೆ. ಹೀಗಾಗಿ ನೆರೆ ರಾಜ್ಯಗಳಿಗೆ ತೆರಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಶೀಘ್ರದಲ್ಲೇ ರೇಖಾಚಿತ್ರ ಬಿಡುಗಡೆ: ರಾಮೇಶ್ವರಂ ಕೆಫೆಯ ಸಿಸಿ ಕ್ಯಾಮೆರಾ ಹಾಗೂ ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ಸೆರೆಯಾಗಿರುವ ಸಿಸಿ ಕ್ಯಾಮೆರಾ ದೃಶ್ಯಾವಳಿಗಳನ್ನು ಆಧರಿಸಿ ನುರಿತ ವ್ಯಕ್ತಿಗಳಿಂದ ರೇಖಾ ಚಿತ್ರ ಬಿಡಿಸಲು ಸಿದ್ಧತೆ ನಡೆಸಲಾಗಿದೆ.

ಶಂಕಿತ ಗಡ್ಡಧಾರಿಯಾಗಿದ್ದರೆ, ಗಡ್ಡ ಇಲ್ಲದಿದ್ದರೆ, ಮೀಸೆ ಇದ್ದರೆ, ಮೀಸೆ ಇಲ್ಲದಿದ್ದರೆ, ತಲೆಯಲ್ಲಿ ಕೂದಲು ಇದ್ದರೆ, ಬೋಳು ತಲೆಯಾಗಿದ್ದರೆ, ಕನ್ನಡಕ ಧರಿಸಿದರೆ, ಧರಿಸದಿದ್ದರೆ ಹೇಗೆ ಕಾಣಬಹುದು ಎಂಬುದನ್ನು ರೇಖಾಚಿತ್ರದಲ್ಲಿ ಮೂಡಿಸಲಾಗುತ್ತದೆ. ಈ ರೇಖಾಚಿತ್ರ ಬಳಸಿಕೊಂಡು ಶಂಕಿತನ ಪತ್ತೆ ಕಾರ್ಯ ನಡೆಯಲಿದೆ. ಈ ಹಿಂದೆಯೂ ಎರಡ್ಮೂರು ಪ್ರಕರಣಗಳಲ್ಲಿ ರೇಖಾ ಚಿತ್ರದ ಸಹಾಯದಿಂದಲೇ ಆರೋಪಿಗಳ ಮುಖ ಚಹರೆ ಪತ್ತೆ ಹಚ್ಚಲಾಗಿತ್ತು ಎಂದು ಮೂಲಗಳು ತಿಳಿಸಿವೆ.

ನೆರೆ ರಾಜ್ಯಕ್ಕೆ ಪರಾರಿಯಾದನಾ ಶಂಕಿತ?: ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಪ್ರಕರಣದ ಶಂಕಿತ ಘಟನೆ ಬಳಿಕ ರಾಜ್ಯಕ್ಕೆ ಪರಾರಿಯಾಗಿರುವ ಸಾಧ್ಯತೆಯಿದೆ. ಶುಕ್ರವಾರ ಮಧ್ಯಾಹ್ನ 12.56ಕ್ಕೆ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟಕ್ಕೂ ಮುನ್ನ ಶಂಕಿತ ವ್ಯಕ್ತಿ ರಾಜ್ಯದ ಗಡಿದಾಡಿರುವ ಶಂಕೆ ವ್ಯಕ್ತವಾಗಿದೆ. ಬೆಳಗ್ಗೆ 11.40ಕ್ಕೆ ಕೆಫೆಗೆ ಭೇಟಿ ನೀಡಿರುವ ಶಂಕಿತ, ಹಲವು ಬಾರಿ ವಾಚ್‌ನಲ್ಲಿ ಸಮಯ ನೋಡಿಕೊಂಡು ರವೆ ಇಡ್ಲಿ ತಿಂದು, ಕೈತೊಳೆಯುವ ಸ್ಥಳದಲ್ಲಿ ಬ್ಯಾಗ್‌ ಇಟ್ಟು ಹೋಟೆಲ್‌ ನಿಂದ ತೆರಳಿದ್ದಾನೆ. ಬಳಿಕ ಮಧ್ಯಾಹ್ನ 12.56ಕ್ಕೆ ಆ ಸ್ಫೋಟಕವಿದ್ದ ಬ್ಯಾಗ್‌ ಸ್ಫೋಟಗೊಂಡಿದೆ. ಈ ಸಮಯದ ಅಂತರದಲ್ಲಿ ಆರೋಪಿ ನೆರೆ ರಾಜ್ಯಕ್ಕೆ ಪರಾರಿಯಾಗಿರುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಸಿಸಿಬಿಯಿಂದ ಸ್ಥಳ ಪರಿಶೀಲನೆ : ಸಿಸಿಬಿ ತನಿಖಾಧಿಕಾರಿ ಎಸಿಪಿ ನವೀನ್‌ ಕುಲಕರ್ಣಿ ನೇತೃತ್ವದ ತಂಡ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಗೆ ಭೇಟಿ ನೀಡಿ ಬಾಂಬ್‌ ಸ್ಫೋಟದ ಸ್ಥಳವನ್ನು ಪರಿಶೀಲಿಸಿದೆ. ಹೋಟೆಲ್‌ನ ಸಿಬ್ಬಂದಿ ಹಾಗೂ ಕೆಲ ಸ್ಥಳೀಯರಿಂದ ಘಟನೆ ಕುರಿತು ಮಾಹಿತಿ ಸಂಗ್ರಹಿಸಿದೆ. ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ಶಂಕಿತ ಓಡಾಡಿದ ಸ್ಥಳಗಳಿಗೂ ತೆರಳಿ ಪರಿಶೀಲಿಸಿದ್ದಾರೆ.

ಟಾಪ್ ನ್ಯೂಸ್

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

IFFI: ನವೆಂಬರ್ 20 ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

sanjay manjrekar

Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್‌ ಸಂಜಯ್‌ ಮಾಂಜ್ರೇಕರ್

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

16-bng

Bengaluru: ದಸರಾ ಬೊಂಬೆಗಳ ಹಬ್ಬದಲ್ಲೂ ಅಯೋಧ್ಯಾ ಶ್ರೀ ರಾಮಮಂದಿರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-ksrtc-dasara

Bengaluru: ಕೆಎಸ್‌ಆರ್‌ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್‌ ಸಂಚಾರ

19-bbmp

Bengaluru: ಆನ್‌ಲೈನ್‌ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ

18-wonderla

Bengaluru: ವಂಡರ್‌ಲಾದಲ್ಲಿ 2 ಟಿಕೆಟ್‌ ಖರೀದಿಸಿದರೆ 1 ಟಿಕೆಟ್‌ ಫ್ರೀ

16-bng

Bengaluru: ದಸರಾ ಬೊಂಬೆಗಳ ಹಬ್ಬದಲ್ಲೂ ಅಯೋಧ್ಯಾ ಶ್ರೀ ರಾಮಮಂದಿರ

14-bng

Bengaluru: 5ನೇ ಮಹಡಿಯಿಂದ ಜಿಗಿದು ಮಹಿಳಾ ಟೆಕಿ ಆತ್ಮಹತ್ಯೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

IFFI: ನವೆಂಬರ್ 20 ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

20-ksrtc-dasara

Bengaluru: ಕೆಎಸ್‌ಆರ್‌ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್‌ ಸಂಚಾರ

sanjay manjrekar

Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್‌ ಸಂಜಯ್‌ ಮಾಂಜ್ರೇಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.