Kadaba; ಪ್ರೀತಿ ನಿರಾಕರಿಸಿದ್ದೆ ಕೃತ್ಯಕ್ಕೆ ಕಾರಣ?; ಯುನಿಫಾರ್ಮ್ ಧರಿಸಿ ಬಂದಿದ್ದ ಆರೋಪಿ!
ಸಮವಸ್ತ್ರ ಧರಿಸಿ ವಿದ್ಯಾರ್ಥಿಗಳೊಂದಿಗೆ ಕುಳಿತಿದ್ದ!
Team Udayavani, Mar 4, 2024, 1:05 PM IST
ಕಡಬ: ಕಾಲೇಜು ಆವರಣದಲ್ಲಿ ದ್ವಿತೀಯ ಪಿಯು ಪರೀಕ್ಷೆ ಬರೆಯಲು ಸಿದ್ಧರಾಗುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಯುವಕನೋರ್ವ ಆ್ಯಸಿಡ್ ದಾಳಿ ನಡೆಸಿರುವ ಘಟನೆ ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರದಂದು ಬೆಳಿಗ್ಗೆ ನಡೆದಿದೆ.
ಪ್ರಕರಣದ ಆರೋಪಿಯನ್ನು ಕೇರಳದ ಮಲಪ್ಪುರಂ ಜಿಲ್ಲೆಯ ನೆಲಂಬೂರು ನಿವಾಸಿ ಎಂಬಿಎ ವಿದ್ಯಾರ್ಥಿ ಅಬೀನ್ (23) ಎಂದು ಗುರುತಿಸಲಾಗಿದೆ.
ಸಮವಸ್ತ್ರ ಧರಿಸಿದ್ದ ಆರೋಪಿ
ಆರೋಪಿಯು ಸೋಮವಾರದಂದು ಕಡಬ ಕಾಲೇಜಿನ ಸಮವಸ್ತ್ರವನ್ನು ಹೋಲುವ ಬಿಳಿ ಅಂಗಿ ಮತ್ತು ನೀಲಿ ಪ್ಯಾಂಟ್ ಧರಿಸಿ ಆಗಮಿಸಿದ್ದು, ಪರೀಕ್ಷೆಗೆ ಸಿದ್ಧರಾಗುತ್ತಿದ್ದ ಇತರ ವಿದ್ಯಾರ್ಥಿಗಳೊಂದಿಗೆ ಜಗಲಿಯಲ್ಲಿ ಕುಳಿತಿದ್ದ ಎನ್ನಲಾಗಿದೆ. ಪರಿಸರದ ಇತರ ಕಾಲೇಜಿನಿಂದಲೂ ಈ ಪರೀಕ್ಷಾ ಕೇಂದ್ರಕ್ಕೆ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಬಂದಿದ್ದರಿಂದ ಈತನ ಬಗ್ಗೆ ಯಾರೂ ಅನುಮಾನಗೊಂಡಿರಲಿಲ್ಲ.
ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಪ್ರಶ್ನೆ ಪತ್ರಿಕೆಗಳ ಬಂಡಲನ್ನು ಕಛೇರಿಯಲ್ಲಿ ಬಿಚ್ಚುತ್ತಿದ್ದ ವೇಳೆ ವಿದ್ಯಾರ್ಥಿಗಳ ಚೀರಾಟ ಕೇಳಿ ಹೊರ ಬಂದಿದ್ದಾರೆ. ಅದಾಗಲೇ ಆರೋಪಿಯು ಆ್ಯಸಿಡ್ ಎರಚಿ ಪರಾರಿಯಾಗುತ್ತಿದ್ದ. ಈ ವೇಳೆ ವಿದ್ಯಾರ್ಥಿಗಳು ಆತನನ್ನು ಬೆನ್ನಟ್ಟಿ ಹಿಡಿದು ಕಡಬ ಪೊಲೀಸರಿಗೆ ಒಪ್ಪಿಸಿದ್ದಾರೆ.
ಘಟನೆಯಲ್ಲಿ ಸಂತ್ರಸ್ತ ವಿದ್ಯಾರ್ಥಿನಿಯ ಜೊತೆಗಿದ್ದ ಇತರ ಇಬ್ಬರು ವಿದ್ಯಾರ್ಥಿನಿಯರಿಗೂ ಆ್ಯಸಿಡ್ ತಗಲಿ ಸುಟ್ಟ ಗಾಯಗಳಾಗಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರೀತಿ ನಿರಾಕರಣೆಯೇ ಕಾರಣ?
ಆರೋಪಿಯು ಸಂತ್ರಸ್ತ ವಿದ್ಯಾರ್ಥಿನಿಯ ತಾಯಿಯ ಊರಾದ ಮಲಪ್ಪುರಂ ನಿವಾಸಿಯಾಗಿದ್ದು, ದೂರದ ಸಂಬಂಧಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಸಂತ್ರಸ್ತ ಯುವತಿಯನ್ನು ಎರಡು ವರ್ಷದಿಂದ ಪ್ರೀತಿಸುತ್ತಿದ್ದ ಎನ್ನಲಾಗಿದ್ದು, ಪ್ರೀತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಈ ಆ್ಯಸಿಡ್ ದಾಳಿ ಮಾಡಿದ್ದಾನೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.
ಪರೀಕ್ಷೆ ಬರೆಯಲು ಸಿದ್ಧತೆ ನಡೆಸಿದ್ದ ವಿದ್ಯಾರ್ಥಿನಿಯ ಮೇಲೆ ಕೇರಳದ ಮಲಪ್ಪುರಂ ನಿವಾಸಿ ಅಬಿನ್ ಎಂಬಾತ ಆ್ಯಸಿಡ್ ಎರಚಿದ್ದು, ಇದರಿಂದಾಗಿ ಆಕೆಯ ಜೊತೆಗಿದ್ದ ಸಹಪಾಠಿಗಳಾದ ಇತರ ಇಬ್ಬರಿಗೂ ಸುಟ್ಟ ಗಾಯಗಳಾಗಿದ್ದು, ಮೂವರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೇಲ್ನೋಟಕ್ಕೆ ಪ್ರೇಮ ನಿರಾಕರಣೆಯ ಹಿನ್ನೆಲೆಯಲ್ಲಿ ಈ ಕೃತ್ಯ ನಡೆದಿರುವುದಾಗಿ ತಿಳಿದು ಬಂದಿದ್ದು, ತನಿಖೆ ಮುಂದುವರಿದಿದೆ ಎಂದು ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿ.ಬಿ ಹೇಳಿದರು.
ಸ್ಥಳಕ್ಕೆ ಪುತ್ತೂರು ಉಪ ವಿಭಾಗಾಧಿಕಾರಿ ಜೊಬಿನ್ ಮಹಾಪಾತ್ರ, ಪುತ್ತೂರು ಡಿವೈಎಸ್ಪಿ ಅರುಣ್ ನಾಗೇಗೌಡ, ಕಡಬ ತಹಶೀಲ್ದಾರ್ ಪ್ರಭಾಕರ್ ಖಜೂರೆ, ಉಪ್ಪಿನಂಗಡಿ ವೃತ್ತ ನಿರೀಕ್ಷಕ ರವಿ.ಬಿ.ಎಸ್., ಕಡಬ ಎಸ್ಐ ಅಭಿನಂದನ್ ಎಂ.ಎಸ್. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.