Lok sabha ಚುನಾವಣೆ; ಹಾವೇರಿ ಅಖಾಡದಲ್ಲಿ ಬೊಮ್ಮಾಯಿ ರಾಜಕೀಯ ಪಟ್ಟು


Team Udayavani, Mar 4, 2024, 3:37 PM IST

Lok sabha ಚುನಾವಣೆ; ಹಾವೇರಿ ಅಖಾಡದಲ್ಲಿ ಬೊಮ್ಮಾಯಿ ರಾಜಕೀಯ ಪಟ್ಟು

ಉದಯವಾಣಿ ಸಮಾಚಾರ

ಹಾವೇರಿ: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ವಿವಿಧ ಪಕ್ಷಗಳ ಮುಖಂಡರನ್ನು ಸೆಳೆಯುವ ಕಸರತ್ತು ನಡೆದಿದೆ. ಈ ಮೂಲಕ ಅಖಾಡ ಸಜ್ಜುಗೊಳಿಸಲಾಗುತ್ತಿದೆ. ಈ ಬಾರಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಸಂಸದ ಶಿವಕುಮಾರ ಉದಾಸಿ ಬಹಿರಂಗ ಹೇಳಿಕೆ ನೀಡಿರುವ ಕಾರಣ ಬಿಜೆಪಿಯಲ್ಲಿ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದೆ. “ನಾನು  ಆಕಾಂಕ್ಷಿಯಲ್ಲ, ಪಕ್ಷ ಸೂಚಿಸುವ ಅಭ್ಯರ್ಥಿ ಪರ ಕೆಲಸ ಮಾಡೋಣ’ ಎನ್ನುತ್ತಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಕ್ಷೇತ್ರದಲ್ಲಿ ಸದ್ದಿಲ್ಲದೇ ಚುನಾವಣಾ ತಯಾರಿಯಲ್ಲಿ ತೊಡಗಿಕೊಂಡಿದ್ದಾರೆ ಎಂಬ ಮಾತುಗಳು ಬಿಜೆಪಿ ವಲಯದಲ್ಲಿ ಹರಿದಾಡುತ್ತಿವೆ.

ಚುನಾವಣೆ ಸಮೀಪಿಸುತ್ತಿದ್ದಂತೆ ಕ್ಷೇತ್ರದಲ್ಲಿ ಬೊಮ್ಮಾಯಿ ಫುಲ್‌ ಆ್ಯಕ್ಟಿವ್‌ ಆಗಿದ್ದು, ವಿವಿಧ ಪಕ್ಷಗಳ ಮುಖಂಡರನ್ನು ಬಿಜೆಪಿಯತ್ತ ಸೆಳೆಯುತ್ತಿದ್ದಾರೆ. ಹಾನಗಲ್ಲ ಮಾಜಿ ಸಚಿವ ಮನೋಹರ್‌ ತಹಶೀಲ್ದಾರ ಈಚೆಗೆ ಅವರ ಮುಂದಾಳತ್ವದಲ್ಲೇ ಬಿಜೆಪಿ
ಸೇರಿದ್ದು, ಇದಕ್ಕೆ ಪುಷ್ಠಿ ನೀಡಿದಂತಾಗಿದೆ. ಈಗ ಮತ್ತೊಬ್ಬ ಪ್ರಭಾವಿ ಪಂ ಸಾಲಿ ಮುಖಂಡನನ್ನು ಬೊಮ್ಮಾಯಿ ಬಿಜೆಪಿಗೆ
ಕರೆತರುವ ಪ್ರಯತ್ನ ನಡೆಸಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಶಿಗ್ಗಾವಿ ಕ್ಷೇತ್ರದಲ್ಲಿ ಕಾಂಗ್ರೆಸ್‌ ಟಿಕೆಟ್‌ ಸಿಗದೇ ತಮ್ಮ
ವಿರುದ್ಧ ಜೆಡಿಎಸ್‌ ಅಭ್ಯರ್ಥಿಯಾಗಿದ್ದ ಶಶಿಧರ ಯಲಿಗಾರ್‌ ಅವರನ್ನು ಬಿಜೆಪಿಗೆ ಕರೆತರಲಿದ್ದಾರೆ ಎನ್ನಲಾಗುತ್ತಿದೆ.

ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಹಾವೇರಿ ಕ್ಷೇತ್ರದಿಂದ ಬೊಮ್ಮಾಯಿ ಕಣಕ್ಕಿಳಿಯುವುದು ಪಕ್ಕಾ. ಅದೇ ಕಾರಣಕ್ಕೆ ಅನ್ಯ ಪಕ್ಷದ ಮುಖಂಡರನ್ನು ಪಕ್ಷಕ್ಕೆ ಕರೆತಂದು ಅಖಾಡ ಸಿದ್ಧಪಡಿಸಿಕೊಳ್ಳುತ್ತಿದ್ದಾರೆ ಎಂಬ ಮಾತುಗಳು ಅವರ ಆಪ್ತ ವಲಯದಲ್ಲೇ
ಕೇಳಿಬರುತ್ತಿದೆ.

ಯಲಿಗಾರ ಬಿಜೆಪಿಗೆ?
ಶಶಿಧರ ಯಲಿಗಾರ್‌ ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಬಿಜೆಪಿ ಸೇರಲು ಮುಂದಾಗಿದ್ದು, ಬಸವರಾಜ್‌ ಬೊಮ್ಮಾಯಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಜತೆಗೆ ಬಿ.ಎಸ್‌.ಯಡಿಯೂರಪ್ಪ ಅವರನ್ನೂ ಭೇಟಿ ಮಾಡಿದ್ದಾರೆ. ಎರಡ್ಮೂರು ದಿನಗಳಲ್ಲಿ ಅಧಿಕೃತವಾಗಿ ಬಿಜೆಪಿ ಸೇರಲಿದ್ದಾರೆ ಎನ್ನಲಾಗುತ್ತಿದೆ.

16 ಆಕಾಂಕ್ಷಿಗಳ ಹೆಸರು ಶಿಫಾರಸು
ಈ ನಡುವೆ ಹಾವೇರಿ ಕ್ಷೇತ್ರದಿಂದ 16 ಮಂದಿ ಆಕಾಂಕ್ಷಿಗಳ ಪಟ್ಟಿಯನ್ನು ರಾಜ್ಯ ಘಟಕಕ್ಕೆ ಶಿಫಾರಸು ಮಾಡಲಾಗಿದೆ. ಈ ಪಟ್ಟಿಯಲ್ಲಿ ಮಾಜಿ ಸಚಿವ ಬಿ.ಸಿ.ಪಾಟೀಲ, ಮಾಜಿ ಜಿಲ್ಲಾಧ್ಯಕ್ಷ ಸಿದ್ಧರಾಜ ಕಲಕೋಟಿ, ರಾಜ್ಯ ಉಪಾಧ್ಯಕ್ಷ ಡಾ|ಬಸವರಾಜ ಕೇಲಗಾರ, ಕಾಂತೇಶ ಈಶ್ವರಪ್ಪ, ಮಂಜುನಾಥ ಮಡಿವಾಳರ, ಶರಣಬಸಪ್ಪ ಅಂಗಡಿ, ಡಾ| ಮಹೇಶ ನಾಲವಾಡ, ಭೋಜರಾಜ ಕರೂದಿ, ಡಾ| ಶಿವಪ್ರಕಾಶ ತಂಡಿ, ಪವನಕುಮಾರ ಮಲ್ಲಾಡದ, ಮುರಿಗೆಪ್ಪ ಶೆಟ್ಟರ್‌, ಪಾಲಾಕ್ಷಗೌಡ ಪಾಟೀಲ, ಕೆ.
ಶಿವಲಿಂಗಪ್ಪ, ಜಗದೀಶ ಬಸೇಗಣ್ಣಿ, ನಾಗನಗೌಡ ನೀರಲಗಿ ಪಾಟೀಲ, ಡಾ| ಶೇಖರ ಸಜ್ಜನರ ಅವರ ಹೆಸರಿದೆ ಎನ್ನುತ್ತಿವೆ ಬಿಜೆಪಿ ಮೂಲಗಳು.

ಕೇಂದ್ರದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಬೇಕು ಎಂಬ ಉದ್ದೇಶದೊಂದಿಗೆ ಯಾವುದೇ ಷರತ್ತಿಲ್ಲದೇ ಬಿಜೆಪಿ ಸೇರಿದ್ದೇನೆ. ನನ್ನ ರಾಜಕೀಯ ಅನುಭವ ಧಾರೆ ಎರೆದು ಕ್ಷೇತ್ರದಲ್ಲಿ ಪಕ್ಷ ಸಂಘಟಿಸುವ ಮೂಲಕ ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡುತ್ತೇನೆ.
ಮನೋಹರ ತಹಶೀಲ್ದಾರ್‌, ಮಾಜಿ ಸಚಿವ

*ವೀರೇಶ ಮಡ್ಲೂರ

ಟಾಪ್ ನ್ಯೂಸ್

AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ‌ ಕೇಜ್ರಿವಾಲ್‌ ಆಪ್ತ ಕೈಲಾಶ್‌ ಗೆಹ್ಲೋಟ್!

AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ‌ ಕೇಜ್ರಿವಾಲ್‌ ಆಪ್ತ ಕೈಲಾಶ್‌ ಗೆಹ್ಲೋಟ್!

Father and children who went to fishing went missing in hukkeri

Hukkeri: ಮೀನು ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು

Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್‌ ಫಿಕ್ಸ್

Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್‌ ಫಿಕ್ಸ್

IPL Mega Auction: 13-year-old boy in mega auction: Who is Vaibhav Suryavanshi?

IPL Mega Auction: ಮೆಗಾ ಹರಾಜಿನಲ್ಲಿ 13ರ ಬಾಲಕ: ಯಾರಿದು ವೈಭವ್‌ ಸೂರ್ಯವಂಶಿ

Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿ ಸಾ*ವು

Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿ ಸಾ*ವು

10

Nayanthara: ʼರಕ್ಕಯಿʼ ಆಗಿ ದುಷ್ಟರ ಪಾಲಿಗೆ ದುಸ್ವಪ್ನವಾದ ಲೇಡಿ ಸೂಪರ್‌ ಸ್ಟಾರ್

BGT 2024-25: Virat Kohli returns to form in Aussies

BGT 2024-25: ಆಸೀಸ್‌ ನಲ್ಲಿ ಲಯಕ್ಕೆ ಮರಳಿದ ವಿರಾಟ್‌ ಕೊಹ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ ಪಿಎಂ ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

1-sadsadasd

Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ

Sometimes governments topple in a single day…: Mamata gives big hint

LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ

Modi pays homage to Mahatma Gandhi and Vajpayee memorial before taking oath

Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

4

Kaup: ಬೆಳಪು ಆಸ್ಪತ್ರೆಗೆ ವಿಟಮಿನ್‌ಎಂ ಕೊರತೆ!

UV Interview: ಕೇಂದ್ರದ ಎಥೆನಾಲ್‌ ನೀತಿಯಿಂದ ರೈತರಿಗಿಲ್ಲ ಲಾಭ…

UV Interview: ಕೇಂದ್ರದ ಎಥೆನಾಲ್‌ ನೀತಿಯಿಂದ ರೈತರಿಗಿಲ್ಲ ಲಾಭ…

AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ‌ ಕೇಜ್ರಿವಾಲ್‌ ಆಪ್ತ ಕೈಲಾಶ್‌ ಗೆಹ್ಲೋಟ್!

AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ‌ ಕೇಜ್ರಿವಾಲ್‌ ಆಪ್ತ ಕೈಲಾಶ್‌ ಗೆಹ್ಲೋಟ್!

Suri Loves Sandhya movie teaser

Suri Loves Sandhya: ಟೀಸರ್‌ನಲ್ಲಿ ಸೂರಿ ಲವ್‌ ಸ್ಟೋರಿ

Father and children who went to fishing went missing in hukkeri

Hukkeri: ಮೀನು ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.