Illegal ಅಡಿಕೆ ಆಮದಿಗೆ ಕಟ್ಟುನಿಟ್ಟಿನ ನಿರ್ಬಂಧ: ಕೇಂದ್ರದ ಸ್ಪಷ್ಟ ಸೂಚನೆ
Team Udayavani, Mar 4, 2024, 9:58 PM IST
ಸಾಗರ: ಭಾರತಕ್ಕೆ ಅಕ್ರಮವಾಗಿ ಅಡಕೆ ಆಮದಾಗುತ್ತಿರುವುದರಿಂದ ಅಡಿಕೆಯ ಬೆಲೆಯಲ್ಲಿನ ತೀವ್ರ ಇಳಿತ ಮತ್ತು ಬೆಳಗಾರರ ಮೇಲೆ ಆಗುತ್ತಿರುವ ದುಷ್ಪರಿಣಾಮಗಳ ಕುರಿತು ಕೇಂದ್ರ ಸರ್ಕಾರ ನಿರ್ಲಕ್ಷ್ಯ ಮಾಡುವುದಿಲ್ಲ. ತತ್ ಕ್ಷಣದಿಂದಲೇ ಅಧಿಕಾರಿಗಳಿಗೆ ಸೂಚನೆ ನೀಡಿ ಅಕ್ರಮ ಆಮದಿನ ನಿರ್ಬಂಧಕ್ಕೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಸೋಮವಾರ ಸ್ಪಷ್ಟ ಭರವಸೆ ನೀಡಿದರು.
ಅಡಿಕೆಯ ಅಕ್ರಮ ಆಮದು ಕಾರಣದಿಂದ ಆಗಿರುವ ಅನಾಹುತಗಳನ್ನು ಕೇಂದ್ರಕ್ಕೆ ಮನವರಿಕೆ ಮಾಡಿಕೊಡುವ ಹಿನ್ನೆಲೆಯಲ್ಲಿ ನವದೆಹಲಿಯಲ್ಲಿ ಅಡಿಕೆ ಸಹಕಾರ ಸಂಘಗಳ ಮಹಾಮಂಡಲದ ನೇತೃತ್ವದಲ್ಲಿ ಭೇಟಿ ಮಾಡಿದ ನಿಯೋಗಕ್ಕೆ ಧೈರ್ಯ ತುಂಬುವ ಮಾತನಾಡಿದ ಅವರು, ದೇಶದ ಗಡಿಗಳಲ್ಲಿರುವ ಅಧಿಕಾರಿಗಳಿಗೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವುದಕ್ಕೆ ಸೂಚಿಸುತ್ತೇನೆ ಎಂದರು.
ನಿಯೋಗದ ನೇತೃತ್ವ ವಹಿಸಿದ್ದ ಕ್ರ್ಯಾಮ್ ಅಧ್ಯಕ್ಷ ಎಚ್.ಎಸ್. ಮಂಜಪ್ಪ ಹೊಸಬಾಳೆ ಬೆಳೆಗಾರರ ಸಂಕಷ್ಟಗಳ ಬಗ್ಗೆ ಸಚಿವರಿಗೆ ಮಾಹಿತಿ ನೀಡಿ, ಶಿವಮೊಗ್ಗ ಜಿಲ್ಲೆಯ ಸಾಗರ, ಹೊಸನಗರ, ತೀರ್ಥಹಳ್ಳಿ ಹಾಗೂ ಸೊರಬ ತಾಲೂಕುಗಳಲ್ಲಿ ಶೇ. 80 ರಷ್ಟು ಸಾಂಪ್ರದಾಯಿಕ ಬೆಳೆಗಾರರಿದ್ದು ಹಿಡುವಳಿ ಅತ್ಯಂತ ಕಡಿಮೆ. ಇಂತವರ ಬದುಕಿನಲ್ಲಿ ಅಡಿಕೆ ಬೆಲೆ ಕುಸಿತದ ನೇರ ಪರಿಣಾಮ ಬೀರುತ್ತದೆ. ಅಕ್ರಮ ಆಮದಿನಿಂದ ಸರ್ಕಾರಕ್ಕೆ ಕೂಡ ದೊಡ್ಡ ಪ್ರಮಾಣದ ತೆರಿಗೆಯ ನಷ್ಟವಾಗುತ್ತದೆ. ಅದರ ಜತೆಗೆ ಅಡಿಕೆ ಬೆಲೆ ಕುಸಿತದಿಂದ ವ್ಯಾಪಾರಿ ವಲಯ, ನಿರ್ಮಾಣ ರಂಗದಲ್ಲೂ ಪ್ರಭಾವ ಬೀರುವುದರಿಂದ ತೆರಿಗೆ ಸಂಗ್ರಹದಲ್ಲಿ ಕುಸಿತ ಉಂಟಾಗುತ್ತದೆ. ಹಾಗಾಗಿ ಕಾನೂನುಬದ್ಧ ಕ್ರಮಗಳ ಮೂಲಕವೇ ಈ ರೀತಿ ಅಡಕೆ ಮಾರುಕಟ್ಟೆಗೆ ಬರುವುದನ್ನು ತಡೆಯಬೇಕು ಎಂದು ವಿನಂತಿಸಿದರು.
ನಿಯೋಗದಲ್ಲಿ ಅಡಿಕೆ ಸಹಕಾರ ಸಂಘಗಳ ಮಹಾಮಂಡಲದ ಅಧ್ಯಕ್ಷ ಸುಬ್ರಹ್ಮಣ್ಯ ಯಡಗೆರೆ, ಸಾಗರದ ಆಪ್ಸ್‌ಕೋಶ್ ಸಂಸ್ಥೆ ಅಧ್ಯಕ್ಷ ಬಿ.ಎ. ಇಂಧೂದರಗೌಡ, ಮ್ಯಾಮ್‌ಕೋಸ್‌ನ ವ್ಯವಸ್ಥಾಪಕ ನಿರ್ದೇಶಕ ಶ್ರೀಕಾಂತ್ ಬರುವೆ, ಶಿರಸಿ ಟಿಎಸ್‌ಎಸ್‌ನ ಪ್ರಧಾನ ವ್ಯವಸ್ಥಾಪಕ ವಿಜಯಾನಂದ ಭಟ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.