Bengaluru Prison Radicalisation case; 7 ರಾಜ್ಯಗಳ 17 ಸ್ಥಳಗಳಲ್ಲಿ ಎನ್‌ಐಎ ದಾಳಿ
Team Udayavani, Mar 5, 2024, 10:44 AM IST
ಬೆಂಗಳೂರು: ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಭಯೋತ್ಪಾದಕ ಕೈದಿಗಳನ್ನು ಆಮೂಲಾಗ್ರೀಕರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮಂಗಳವಾರ ಕರ್ನಾಟಕ ಸೇರಿ ಏಳು ರಾಜ್ಯಗಳಲ್ಲಿ ದಾಳಿ ನಡೆಸಿತು.
ಕಳೆದ ಅಕ್ಟೋಬರ್ ನಲ್ಲಿ ಬೆಂಗಳೂರಿನಲ್ಲಿ ನಗರ ಪೊಲೀಸರು ಏಳು ಪಿಸ್ತೂಲ್‌ಗಳು, ನಾಲ್ಕು ಹ್ಯಾಂಡ್ ಗ್ರೆನೇಡ್ ಗಳು, ಒಂದು ಮ್ಯಾಗಜೀನ್, 45 ಜೀವಂತ ಗುಂಡುಗಳು ಮತ್ತು ನಾಲ್ಕು ವಾಕಿ-ಟಾಕಿಗಳನ್ನು ವಶಪಡಿಸಿಕೊಳ್ಳುವುದರ ಮೂಲಕ ಮೂಲ ಪ್ರಕರಣವು ದಾಖಲಾಗಿತ್ತು.
ಈ ಹಿಂದೆ ಮೊಹಮ್ಮದ್ ಉಮರ್, ಮೊಹಮ್ಮದ್ ಫೈಸಲ್ ರಬ್ಬಾನಿ, ತನ್ವೀರ್ ಅಹಮದ್ ಮತ್ತು ಮೊಹಮ್ಮದ್ ಫಾರೂಕ್ ಹಾಗೂ ಪರಾರಿಯಾಗಿದ್ದ ಜುನೈದ್ ಆವರಣದಲ್ಲಿ ನಡೆಸಿದ ದಾಳಿಯಲ್ಲಿ ಎನ್‌ಐಎ ತಂಡಗಳು ಸಾಕಷ್ಟು ಡಿಜಿಟಲ್ ಸಾಧನಗಳು, ದೋಷಾರೋಪಣೆಯ ದಾಖಲೆಗಳು ಮತ್ತು 7.3 ಲಕ್ಷ ರೂಪಾಯಿಗಳನ್ನು ವಶಪಡಿಸಿಕೊಂಡಿವೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳು ಪರಾರಿಯಾಗಿದ್ದು, ಇಂಡಿಯನ್ ಪೀನಲ್ ಕೋಡ್, ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ ಮತ್ತು ಸ್ಫೋಟಕ ವಸ್ತುಗಳ ಕಾಯಿದೆಯಡಿ ಕೇಸ್ ದಾಖಲಿಸಲಾಗಿದೆ.
ಆರಂಭದಲ್ಲಿ ಐವರನ್ನು ಬಂಧಿಸಲಾಗಿತ್ತು ಮತ್ತು ಅವರ ವಿಚಾರಣೆಯ ಬಳಿಕ ಮತ್ತೊಬ್ಬನನ್ನು ಬಂಧಿಸಲಾಗಿತ್ತು. ಪ್ರಕರಣದಲ್ಲಿ ಇದುವರೆಗೆ ಒಟ್ಟು ಆರು ಮಂದಿಯನ್ನು ಬಂಧಿಸಲಾಗಿದೆ. ಅಕ್ಟೋಬರ್ 25 ರಂದು ಪ್ರಕರಣವನ್ನು ಕೈಗೆತ್ತಿಕೊಂಡಾಗ ಎನ್‌ಐಎ ಎಲ್ಲಾ ಆರು ಮಂದಿಯ ಕಸ್ಟಡಿಯನ್ನು ಪಡೆದಿತ್ತು.
ಉಮರ್, ರಬ್ಬಾನಿ, ಅಹ್ಮದ್, ಫಾರೂಕ್ ಮತ್ತು ಜುನೈದ್ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರದ ಸೆಂಟ್ರಲ್ ಜೈಲಿನಲ್ಲಿರುವಾಗ ಎಲ್ಇಟಿ ಸದಸ್ಯ ಮತ್ತು ಜೀವಾವಧಿ ಶಿಕ್ಷೆ ಹೊಂದಿರುವ ಅಪರಾಧಿ ಟಿ ನಾಸೀರ್ ನೊಂದಿಗೆ ಸಂಪರ್ಕಕ್ಕೆ ಬಂದಿದ್ದರು ಎಂದು ಎನ್ಐಎ ವಕ್ತಾರರು ಈ ಹಿಂದೆ ಬಹಿರಂಗಪಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮ*ಹತ್ಯೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
MUST WATCH
ಹೊಸ ಸೇರ್ಪಡೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.