![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 5, 2024, 10:21 AM IST
ಸಕಲೇಶಪುರ: ಕಾರಿನಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಯುವತಿಯೊಬ್ಬಳನ್ನು ಅಡ್ಡಗಟ್ಟಿ ಹಲ್ಲೆ ಮಾಡಿದ ಆರೋಪದ ಮೇಲೆ ಯುವಕನೋರ್ವನನ್ನು ಬಂಧಿಸಿರುವ ಘಟನೆ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಹಾನುಬಾಳ್ ಹೋಬಳಿ ಅಗ್ನಿ ಗ್ರಾಮದ ಬೆಂಗಳೂರು ಮೂಲದ ವೀಣಾ ಎಂಬುವವರ ಮನೆಗೆ ಮದನ್ ತಾಯಿ ಕೆಲಸಕ್ಕೆ ಹೋಗುತ್ತಿದ್ದು, ವೀಣಾ ಅವರ ಮೊಬೈಲ್ ನಂಬರ್ ಪಡೆದ ಮದನ್ ಮೆಸೇಜ್ ಮಾಡುತ್ತಿದ್ದ. ಈ ಹಿಲೆಯಲ್ಲಿ ಮದನ್‌ಗೆ ವಾರ್ನ್ ಮಾಡಿದ ವೀಣಾ, ಮೊಬೈಲ್ ನಂ ಬ್ಲಾಕ್ ಮಾಡಿದ್ದರು. ಕೆಲವು ದಿನಗಳ ನಂತರ ವೀಣಾರವರ ಪುತ್ರಿಯ ನಂಬರ್ ಹುಡುಕಿ ಅವರ ಪುತ್ರಿ ವರ್ಷಿಣಿಗೆ ಫೋನ್ ಮಾಡಿ ಮಿಸ್ಡ್ ಕಾಲ್ ಬಂದಿದೆ ಎಂದು ಹೇಳಿದ್ದ. ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ವರ್ಷಿಣಿಗೆ ಪದೇ ಪದೆ ಫೋನ್, ಮೆಸೇಜ್ ಮಾಡಿ ಕಿರುಕುಳ ನೀಡುತ್ತಿದ್ದ ಹಿನ್ನೆಲೆಯಲ್ಲಿ ವರ್ಷಿಣಿ ಸಹ ಆತನ ನಂಬರ್ ಬ್ಲಾಕ್ ಲೀಸ್ಟ್‌ಗೆ ಹಾಕಿದ್ದರು. ಇದರಿಂದ ಬೇಸತ್ತು ಮದನ್ ಕಿರುಕುಳದ ಬಗ್ಗೆ ಪೋಷಕರಿಗೆ ವರ್ಷಿಣಿ ತಿಳಿಸಿದ್ದು, ಈ ಹಿನ್ನೆಲೆಯಲ್ಲಿ ವೀಣಾ ಮದನ್‌ಗೆ ಕಾಲ್ ಮಾಡಿ ವಾರ್ನ್ ಮಾಡಿದ್ದರು.
ಇದರಿಂದ ಸಿಟ್ಟಾದ ಮದನ್, ವರ್ಷಿಣಿ ಕಾರಿನಲ್ಲಿ ಸಕಲೇಶಪುರಕ್ಕೆ ತೆರಳುತ್ತಿದ್ದ ವೇಳೆ ತನ್ನ ಮನೆಯ ಮುಂದೆ ಕಾರು ಅಡ್ಡಗಟ್ಟಿ ವರ್ಷಿಣಿ ಮೇಲೆ ಹಲ್ಲೆ ಮಾಡಿ ಬಟ್ಟೆ ಹರಿದು ಎಳೆದಾಡಿರುತ್ತಾನೆ. ಈ ವೇಳೆ ಕಾರು ಚಾಲಕ ವರ್ಷಿಣಿ ರಕ್ಷಿಸಲು ಬಂದಾಗ ಮದನ್ ಪರಾರಿಯಾಗಿದ್ದಾನೆ. ಈ ಹಿನ್ನೆಲೆಯಲ್ಲಿ ವರ್ಷಿಣಿ ಸಕಲೇಶಪುರ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಾಗಿತ್ತದೆ.
ಮದನ್‌ನ್ನು ಪೊಲೀಸರು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.
R. Ashok: ನವೆಂಬರ್ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್
R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್.ಅಶೋಕ್
ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ
Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು
ಕಾಂಗ್ರೆಸ್‌ಗೆ 136 ಸ್ಥಾನವಿದ್ದರೂ ಜೆಡಿಎಸ್ ಶಾಸಕರ ಸೆಳೆಯೋ ದುಸ್ಥಿತಿ: ಎಚ್.ಡಿ.ರೇವಣ್ಣ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.