ಜನನಿಬಿಡ ರಸ್ತೆಯಲ್ಲೇ ಪತ್ನಿಯನ್ನು ಥಳಿಸಿ ಹತ್ಯೆಗೈದ ಪತಿ: ಭೀಕರ ಘಟನೆಗೆ ಸಾಕ್ಷಿಯಾದ ಜನ
Team Udayavani, Mar 5, 2024, 12:51 PM IST
ಆಂಧ್ರ ಪ್ರದೇಶ: ಜನನಿಬಿಡ ರಸ್ತೆಯಲ್ಲೇ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಹತ್ಯೆಗೈದು, ಅತ್ತೆ ಮೇಲೆ ಹಲ್ಲೆಗೈದಿರುವ ಘಟನೆ ಆಂಧ್ರಪ್ರದೇಶದ ನಂದ್ಯಾಲ್ ಜಿಲ್ಲೆಯಲ್ಲಿ ನಡೆದಿದೆ.
ರಂಗಸ್ವಾಮಿ ಎಂಬ ವ್ಯಕ್ತಿ ತನ್ನ ಪತ್ನಿ ಕುಮಾರಿಯನ್ನು ಕುಡುಗೋಲಿನಿಂದ ಹಲ್ಲೆ ಮಾಡಿ ಹತ್ಯೆಗೈದಿದ್ದಾನೆ.
ರಸ್ತೆಬದಿಯ ಅಂಗಡಿಯೊಂದರಲ್ಲಿ ಪತ್ನಿಯನ್ನು ನೆಲಕ್ಕೆ ಬಡಿದು, ಆಕೆ ಮೇಲೆ ಕುಡುಗೋಲಿನಿಂದ ಹಲ್ಲೆ ಮಾಡಿದ್ದಾನೆ. ಅತ್ತೆಯ ಮೇಲೂ ಹಲ್ಲೆ ನಡೆಸಿದ್ದಾನೆ. ನೆರೆದಿದ್ದ ಸ್ಥಳೀಯರು ಘಟನೆಯ ವಿಡಿಯೋವನ್ನು ಮಾಡಿದ್ದು, ಕೃತ್ಯವನ್ನು ತಡೆಯಲು ಯತ್ನಿಸಿದ್ದರೂ ಪ್ರಯೋಜನವಾಗಲಿಲ್ಲ.
ತ್ರೀವ ಗಾಯಗೊಂಡಿದ್ದ ಕುಮಾರಿಯನ್ನು ಆಸ್ಪತ್ರೆಗೆ ದಾಖಲಿಸಿದ್ದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಆಕೆಯ ತಾಯಿಯನ್ನು ಚಿಕಿತ್ಸೆಗಾಗಿ ಕರ್ನೂಲ್ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಈ ಕುರಿತು ಪ್ರಕರಣ ದಾಖಲಾಗಿದ್ದು, ಕೊಲೆಗೆ ಕಾರಣವೇನು ಎನ್ನುವುದು ತನಿಖೆಯ ಬಳಿಕವಷ್ಟೇ ತಿಳಿದು ಬರಬೇಕಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Maharashtra: ಮತಗಟ್ಟೆ ಬಳಿ ಚಪ್ಪಲಿ ನಿಷೇಧಿಸಿ ಎಂದು ಮಹಾಪಕ್ಷೇತರ ಅಭ್ಯರ್ಥಿ ಮನವಿ!
ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್ಬಾಟ್ ಹೇಳಿಕೆ
Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.