ಕ್ರಮ ಕೈಗೊಳ್ಳದ ಪೊಲೀಸರ ವಿರುದ್ಧ ಅಸಮಧಾನ-ಪೊಲೀಸ್ ಠಾಣೆ ಹೊರಗೆ ಬೆಂಕಿಹಚ್ಚಿಕೊಂಡ ವ್ಯಕ್ತಿ!
ಆರು ತಿಂಗಳ ಹಿಂದೆಯೇ ತನ್ನ ಪತಿಯ ವಾಹನವನ್ನು ಕಳವು ಮಾಡಲಾಗಿತ್ತು.
Team Udayavani, Mar 5, 2024, 3:17 PM IST
ಲಕ್ನೋ: ತನ್ನ ಪಿಕ್ ಅಪ್ ವ್ಯಾನ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಅಸಮಧಾನಗೊಂಡ ವ್ಯಕ್ತಿಯೊಬ್ಬ ಪೊಲೀಸ್ ಠಾಣೆಯ ಹೊರಭಾಗದಲ್ಲಿ ತನಗೆ ತಾನೇ ಬೆಂಕಿ ಹಚ್ಚಿಕೊಂಡಿರುವ ಘಟನೆ ಉತ್ತರಪ್ರದೇಶದ ಶಹಜಹಾನ್ ಪುರ್ ನಲ್ಲಿ ನಡೆದಿದೆ.
ಇದನ್ನೂ ಓದಿ:Shimoga; ರಾಜ್ಯದ ಮುಂದಿನ ಮುಖ್ಯಮಂತ್ರಿ ವಿಜಯೇಂದ್ರ: ಭವಿಷ್ಯ ನುಡಿದ ಪ್ರಣವಾನಂದ ಸ್ವಾಮೀಜಿ
ಈತ ಪೊಲೀಸ್ ಠಾಣೆ ಹೊರಭಾಗದಲ್ಲಿ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದ. ಕೂಡಲೇ ಠಾಣೆಯಲ್ಲಿದ್ದ ಪೊಲೀಸರು ಹೊರಗೆ ಬಂದು ರಕ್ಷಿಸಿರುವುದಾಗಿ ವರದಿ ತಿಳಿಸಿದೆ.
ಆರು ತಿಂಗಳ ಹಿಂದೆಯೇ ತನ್ನ ಪತಿಯ ವಾಹನವನ್ನು ಕಳವು ಮಾಡಲಾಗಿತ್ತು. ಈ ಬಗ್ಗೆ ಪೊಲೀಸರಿಗೆ ದೂರನ್ನು ಕೂಡಾ ನೀಡಿದ್ದರು ಎಂದು ಪತ್ನಿ ತಿಳಿಸಿದ್ದಾಳೆ. ವಾಹನ ಕಳ್ಳತನ ಪ್ರಕರಣದಲ್ಲಿ ಪೊಲೀಸರು ಸೂಕ್ತ ಕ್ರಮ ಕೈಗೊಂಡಿರಲಿಲ್ಲವಾಗಿತ್ತು ಎಂದು ಆರೋಪಿಸಿದ್ದಾರೆ. ವ್ಯಕ್ತಿ ಬೆಂಕಿ ಹಚ್ಚಿಕೊಂಡ ದೃಶ್ಯವನ್ನು ಸಮೀಪದಲ್ಲಿ ಇದ್ದ ಜನರು ವಿಡಿಯೋ ಚಿತ್ರೀಕರಣ ಮಾಡಿಕೊಂಡಿದ್ದರು.
ಸುಮಾರು 10-12 ಪೊಲೀಸ್ ಸಿಬಂದಿಗಳು ಬೆಂಕಿಯನ್ನು ನಂದಿಸಲು ಪ್ರಯತ್ನಿಸುತ್ತಿರುವುದು ವೈರಲ್ ವಿಡಿಯೋದಲ್ಲಿ ಸೆರೆಯಾಗಿದೆ. ಬೆಂಕಿ ಹಚ್ಚಿಕೊಂಡ ವ್ಯಕ್ತಿಯನ್ನು ತಾಹೀರ್ ಅಲಿ ಎಂದು ಗುರುತಿಸಲಾಗಿದೆ. ಅಲಿಯನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್ ಎಂಟ್ರಿ ನೇಮಕಾತಿ
Kochi: ಲೈಂಗಿಕ ಕಿರುಕುಳ ಕೇಸು ವಾಪಸ್ ಪಡೆಯಲ್ಲ ಎಂದ ಮಲಯಾಳಿ ನಟಿ
Chhattisgarh: ಐಇಡಿ ಸ್ಫೋ*ಟ: ಪೊಲೀಸ್ ಸಿಬ್ಬಂದಿಗೆ ಗಾಯ
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.