ಮೋದಿಯಂತಹ ಸಮರ್ಥ ನಾಯಕನನ್ನು ಟೀಕಿಸಲು ಸಿದ್ದು ಯಾರು?: ಎಚ್‌ಡಿಡಿ
Team Udayavani, Mar 5, 2024, 10:33 PM IST
ಬೆಂಗಳೂರು: ಇಡೀ ವಿಶ್ವವೇ ಮೆಚ್ಚಿರುವ ಪ್ರಧಾನಿ ನರೇಂದ್ರ ಮೋದಿ ಅವರ ಸಮರ್ಥ ನಾಯಕತ್ವವನ್ನು ಟೀಕಿಸಲು ಸಿದ್ದರಾಮಯ್ಯ ಯಾರು? ಮಾತಾಡುವುದಕ್ಕೂ ಇತಿಮಿತಿ ಇರಬೇಕು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಟೀಕಿಸಿದ್ದಾರೆ.
ಜೆಡಿಎಸ್ ಕಚೇರಿ ಜೆ.ಪಿ.ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸಿದ್ದರಾಮಯ್ಯ ಬೆಳಗ್ಗೆ ಎದ್ದರೆ ಮೋದಿ ಮೋದಿ ಅಂತಾರೆ. ಹಿಂದೆ ಮನಮೋಹನ್ ಸಿಂಗ್ ಅವರು ಏನು ಕೊಟ್ಟಿದ್ದರು? ಅದನ್ನು ಇವರು ಹೇಳಬೇಕು. ಅದಕ್ಕೂ ಮೊದಲು ವಾಜಪೇಯಿ ಏನು ಕೊಟ್ಟಿದ್ದಾರೆ ಹೇಳಿ. ಸಿದ್ದರಾಮಯ್ಯನವರೇ ಸತ್ಯ ಹೇಳಿ ಎಂದು ಪ್ರಶ್ನಿಸಿದರು.
ಮುಸ್ಲಿಮರಿಗೆ ಮತ್ತೆ ಮೀಸಲಾತಿ ನೀಡಲಿ
ಬಿಜೆಪಿ ಜತೆ ಜೆಡಿಎಸ್ ವಿಲೀನ ಅಂತ ಸಿದ್ದರಾಮಯ್ಯನ ವರೇ ತೀರ್ಮಾನ ಮಾಡಿಬಿಟ್ಟರು. ಜಾತ್ಯತೀತ ಪದ ಬಳಕೆ ಮಾಡುವ ನೈತಿಕತೆ ಜೆಡಿಎಸ್‌ಗೆ ಇಲ್ಲ ಎಂದು ಕಾಂಗ್ರೆಸ್‌ನವರು ಹೇಳಿದ್ದರು. ಹಾಗಾದರೆ, ಮುಸ್ಲಿಮರಿಗೆ ನಾನು ಕೊಟ್ಟಿದ್ದ ಶೇ. 4 ಮೀಸಲಾತಿಯನ್ನು ಇವರು ಮತ್ತೆ ಕೊಡಲಿ ನೋಡೋಣ ಎಂದು ಸವಾಲು ಹಾಕಿದರು.
ಫೋನ್ ಎತ್ತದ ಕಾರ್ಯದರ್ಶಿ
ಯಾವುದೇ ಕಾಮಗಾರಿಯ ಎಲ್‌ಒಸಿ ನೀಡಬೇಕಾದರೆ ಐದು ಪೈಸೆ ಪಡೆದಿದ್ದೇನೆ ಎಂದು ಸಾಬೀತು ಮಾಡಿದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆಂದು ಸಿದ್ದರಾಮಯ್ಯ ಹೇಳಿದ್ದಾರೆ. 5 ಪೈಸೆ ತಗೊಳ್ಳೋದು ಎಲ್ಲಾದರೂ ಉಂಟೆ? ಅದು ಮುಖ್ಯಮಂತ್ರಿ ಸ್ಥಾನಕ್ಕೆ ಗೌರವ ತರುತ್ತ? ಎಂದು ಟೀಕಿಸಿದರು. ನೀರಾವರಿ ಇಲಾಖೆಗೆ ನೀರಾವರಿ ಕಾರ್ಯದರ್ಶಿಯನ್ನು ನೇಮಕ ಮಾಡಿದ್ದಾರೆ. ನಾನು ಫೊನ್ ಮಾಡಿದ್ರೆ ಫೋಲ್ ರಿಸೀವ್ ಮಾಡಲ್ಲ. ನಾನು ಒಂದು ದೇಶದ ಸಣ್ಣ ರಾಜಕಾರಣಿ. ಪಾಪ, ಅವರ ಕಾರ್ಯದರ್ಶಿ ಫೋನ್ ತೆಗೆದುಕೊಂಡಿಲ್ಲ. ಅವರು ಸಿದ್ದರಾಮಯ್ಯ ಅವರ ಸಮಾಜದವರು. ಆ ಹಿರಿಯ ಹುದ್ದೆಗೆ ಅತ್ಯಂತ ಕಿರಿಯ ಅಧಿಕಾರಿಯನ್ನು ಕಾರ್ಯದರ್ಶಿಯಾಗಿ ನೇಮಿಸಿರುವುದು ಏಕೆ ಎಂದು ದೇವೇಗೌಡರು ಪ್ರಶ್ನಿಸಿದ್ದಾರೆ.
ರಾಜ್ಯ ಕಾಂಗ್ರೆಸ್ ಸರಕಾರ ಬರ ಪರಿಸ್ಥಿತಿ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ. ಎಲ್ಲ ಕಡೆ ಗ್ಯಾರಂಟಿ ಕೊಟ್ಟಿದ್ದೇವೆ, ಸಾಧನೆ ಮಾಡಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿಕೊಂಡು ಓಡಾಡುತ್ತಿದ್ದಾರೆ. ರಾಜ್ಯದಲ್ಲಿ 692 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಸಿದ್ದರಾಮಯ್ಯ ಸಾಧನೆಯ ಕಿರುನೋಟ.
– ಎಚ್. ಡಿ. ದೇವೇಗೌಡ, ಮಾಜಿ ಪ್ರಧಾನಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್ ಗೆಲುವು: ಬೊಮ್ಮಾಯಿ ಆರೋಪ
By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.