ಗಾಂಜಾ ಪ್ರಕರಣದ ಆರೋಪಿ ಸಾವು
Team Udayavani, Mar 6, 2024, 1:12 AM IST
ಕುಂಬಳೆ: ಮಾದಕ ದ್ರವ್ಯ ಗಾಂಜಾ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿ ಬಳಿಕ ಜಾಮೀನಿನಲ್ಲಿ ಬಿಡುಗಡೆಗೊಳಿದ ಯುವಕ ಸಾವಿಗೀಡಾದ ಘಟನೆ ಮಂಜೇಶ್ವರ ಠಾಣೆ ವ್ಯಾಪ್ತಿಯ ಮೀಯಪದವಿನಲ್ಲಿ ನಡೆದಿದೆ.
ಸ್ಥಳೀಯ ಮದಕ್ಕಳದ ಮೊಯಿದ್ದೀನ್ ಆರಿಫ್ (22) ರವಿವಾರ ಗಾಂಜಾ ಅಮಲಿನಲ್ಲಿ ಗಲಾಟೆ ಮಾಡುತ್ತಿರುವಾಗ ಸ್ಥಳೀಯರು ಮಂಜೇಶ್ವರ ಪೊಲೀಸರಿಗೆ ಮಾಹಿತಿ ನೀಡಿದ್ದು ಪೊಲೀಸರು ಸ್ಥಳಕ್ಕಾಗಮಿಸಿ ಈತನನ್ನು ಬಂಧಿಸಿ ಕೇಸು ದಾಖಲಿಸಿದ್ದರು. ಆ ಬಳಿಕ ಈತನನ್ನು ಸಂಬಂಧಿಕರಾದ ಅಬ್ದುಲ್ ರಶೀದ್ ಜಾಮೀನಿನಲ್ಲಿ ಬಿಡುಗಡೆಗೊಳಿಸಿದ್ದರು.
ಸೋಮವಾರ ಬೆಳಗ್ಗೆ ಮನೆಯಲ್ಲಿ ಆರಿಫ್ ರಕ್ತವಾಂತಿ ಮಾಡಿದಾಗ ಈತನನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾ ಗಿದ್ದನು. ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದಾಗ ಈತನ ಮೈಮೇಲೆ ಗಾಯವಾಗಿದ್ದು ಮೃತದೇಹವನ್ನು ಪರಿಯಾರಂ ಆಸ್ಪತ್ರೆಗೆ ಒಯ್ಯಲಾಗಿದೆ.
ಮೃತನನ್ನು ಮನೆಗೆ ಕರೆದೊಯ್ದ ಅಬ್ದುಲ್ ರಶೀದ್‌ನನ್ನು ಪೊಲೀಸರು ಹೆಚ್ಚಿನ ತನಿಖೆಗೊಳ ಪಡಿಸಿದ್ದಾರೆ. ಸಾವಿಗೀಡಾದ ಯುವಕ ದ್ವಿಚಕ್ರವಾಹನದಲ್ಲಿ ಮನೆಗೆ ತೆರಳುವಾಗ ಹಾರಿದ ಕಾರಣ ಬಿದ್ದು ಗಾಯ ಗೊಂಡಿರುವುದಾಗಿ ಪೊಲೀಸರುತಿಳಿಸಿದ್ದಾರೆ. ಆದರೆ ಸ್ಥಳೀಯರು ಪೊಲೀಸರು ಈತನ ಮೇಲೆ ಹಲ್ಲೆ ನಡೆಸಿದ ಕಾರಣ ಸಾವಿಗೀಡಾ ಗಿರುವುದಾಗಿ ಆರೋಪಿಸುತ್ತಿದ್ದು ವೈದ್ಯರ ವರದಿಯ ಬಳಿಕ ಸತ್ಯ ಬಯಲಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ
Kasaragod: ರಸ್ತೆಯಲ್ಲಿ ಬಿಯರ್ ಬಾಟ್ಲಿ ಎಸೆದು ಘರ್ಷಣೆಗೆ ಯತ್ನ; ಕೇಸು ದಾಖಲು
Kasaragod ಅಪರಾಧ ಸುದ್ದಿಗಳು; ತಂಬಾಕು ಉತ್ಪನ್ನಗಳ ಸಹಿತ ಇಬ್ಬರ ಬಂಧನ
Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ
Kasaragod: ಮುಖವಾಡ ಧರಿಸಿದ ವ್ಯಕ್ತಿಯಿಂದ ವಿದ್ಯಾರ್ಥಿಗೆ ಇರಿತ; ಪ್ರಕರಣ ದಾಖಲು
MUST WATCH
ಹೊಸ ಸೇರ್ಪಡೆ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.