ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ 4ನೇ ಘಟಿಕೋತ್ಸವ
Team Udayavani, Mar 6, 2024, 12:45 PM IST
ಗದಗ: ನಗರದ ನಾಗಾವಿಯ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕೌಶಲ್ಯ ವಿಕಾಸ ಭವನದ ಸಭಾಂಗಣದಲ್ಲಿ ಜರುಗಿದ ವಿವಿಯ 4ನೇ ಘಟಿಕೋತ್ಸವದಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಚಿರಂಜೀವ್ ಸಿಂಗ್ ಹಾಗೂ ಸಿ. ನಾರಾಯಣಸ್ವಾಮಿ ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿದರು. ಜೊತೆಗೆ ಈರ್ವರಿಗೂ ಜೊತೆಗೆ ಗ್ರಾಮೀಣಾಭಿವೃದ್ಧಿ ಚೇತನ ಬಿರುದು ನೀಡಿ ಗೌರವಿಸಲಾಯಿತು.
ಗ್ರಾಮೀಣಾಭಿವೃದ್ಧಿಯೇ ನಮ್ಮ ಸಂಕಲ್ಪ ಘೋಷವಾಕ್ಯದಡಿ ಜರುಗಿದ 4ನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ ಅವರು 10 ವಿವಿಧ ಸ್ನಾತಕೋತ್ತರ ಕಾರ್ಯಕ್ರಮಗಳ 239 ವಿದ್ಯಾರ್ಥಿಗಳಿಗೆ ಹಾಗೂ ಡಿಪ್ಲೊಮಾ 5 ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪದವಿಗಳನ್ನು ಪ್ರದಾನ ಮಾಡಿದರು.
ಎಂಬಿಎ ವಿಭಾಗದಿಂದ ಓಜಸ್ವಿ ಮಲ್ಲಾಡದ, ಎಂಎ ವಿಭಾಗದಿಂದ ಲಿಂಗರಾಜು ಎಚ್.ಎಂ., ಭೀಮಪ್ಪ ಛಲವಾದಿ, ಜಗದೀಶ ಬಳಿಗಾರ, ಎಂ.ಎಸ್ಸಿ ವಿಭಾಗದಿಂದ ಯಲ್ಲಾಲಿಂಗ ಹೊಸಮನಿ, ನಿಶಾ ಎಂ., ಪವಿತ್ರಾ ಶೇಠ, ಎಂಪಿಎಚ್ ವಿಭಾಗದಿಂದ ಶಾರೋನ್ ಥಾಮಸ್, ಎಂಎಸ್‌ಡಬ್ಲೂ ವಿಭಾಗದಿಂದ ಅಕ್ಷತಾ ಸಾನಿಕೊಪ್ಪ, ಕೀರ್ತಿ ಗಾಮನಗಟ್ಟಿ ಹಾಗೂ ಎಂ.ಕಾಂ ವಿಭಾಗದಿಂದ ಲತಾ ಕಾಡರ ಅವರಿಗೆ ಚಿನ್ನದ ಪದಕ ನೀಡಿ ಗೌರವಿಸಲಾಯಿತು. ಜತೆಗೆ ಎರಡು ಮತ್ತು ಮೂರನೇ ರ್ಯಾಂಕ್ ಗಳಿಸಿದ 10 ವಿದ್ಯಾರ್ಥಿಗಳಿಗೆ ಮೆರಿಟ್ ಪ್ರಮಾಣ ಪತ್ರ ವಿತರಿಸಲಾಯಿತು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ ಖರ್ಗೆ, ಕುಲಪತಿ ವಿಷ್ಣುಕಾಂತ ಚಟಪಲ್ಲಿ, ಕೇಂದ್ರ ಸರಕಾರದ ಪಂಚಾಯತ್ ರಾಜ್ ಮಂತ್ರಾಲಯದ ಮಾಜಿ ಜಂಟಿ ಕಾರ್ಯದರ್ಶಿ ಡಾ. ಟಿ.ಆರ್. ರಘುನಂದನ, ಕುಲಸಚಿವ ಡಾ. ಸುರೇಶ ನಾಡಗೌಡರ ಸೇರಿ ಅನೇಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.