ಆಟವಾಡುತ್ತಾ ನಾಪತ್ತೆಯಾದ ಬಾಲಕಿಯ ಮೃತದೇಹ ಚರಂಡಿಯಲ್ಲಿ ಕೈಕಾಲು ಕಟ್ಟಿದ ಸ್ಥಿತಿಯಲ್ಲಿ ಪತ್ತೆ
Team Udayavani, Mar 6, 2024, 1:48 PM IST
ಪುದುಚೇರಿ: ಎರಡು ದಿನಗಳಿಂದ ನಾಪತ್ತೆಯಾಗಿದ್ದ ಒಂಬತ್ತು ವರ್ಷದ ಬಾಲಕಿಯ ಮೃತದೇಹ ಪುದುಚೇರಿಯ ಚರಂಡಿಯಿಂದ ಕೈ ಕಾಲುಗಳನ್ನು ಹಗ್ಗದಲ್ಲಿ ಕಟ್ಟಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಶನಿವಾರ ಬಾಲಕಿ ಮನೆಯ ಬಳಿ ಆಟವಾಡುತ್ತಿದ್ದಾಗ ಇದ್ದಕಿದ್ದಂತೆ ನಾಪತ್ತೆಯಾಗಿದ್ದಳು, ನಂತರ ಆಕೆಯ ಪೋಷಕರು ಮನೆಯ ಸುತ್ತಮುತ್ತ ಹುಡುಕಾಡಿದ್ದಾರೆ ಆದರೆ ಬಾಲಕಿ ಎಲ್ಲಿಯೂ ಪತ್ತೆಯಾಗಲಿಲ್ಲ ಗಾಬರಿಗೊಂಡ ಪೋಷಕರು ಠಾಣೆಗೆ ತೆರಳಿ ಮಗಳು ನಾಪತ್ತೆಯಾಗಿರುವ ಬಗ್ಗೆ ದೂರು ನೀಡಿದ್ದಾರೆ. ಪ್ರಕರಣದ ದಾಖಲಿಸಿಕೊಂಡ ಪೊಲೀಸರು ಬಾಲಕಿಯ ಪತ್ತೆಗೆ ತಂಡವನ್ನು ರಚಿಸಿ ಪತ್ತೆ ಕಾರ್ಯಕ್ಕೆ ಮುಂದಾಗಿದ್ದಾರೆ.
ಇದಾದ ಎರಡು ದಿನಗಳ ಬಳಿಕ ಬಾಲಕಿಯ ಕೊಳೆತ ಶವ ಆಕೆಯ ನಿವಾಸದ ಬಳಿಯ ಚರಂಡಿಯಲ್ಲಿ ಕೈಕಾಲು ಕಟ್ಟಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಘಟನೆಯಿಂದ ಎಚ್ಚೆತ್ತ ಗ್ರಾಮದ ಜನರು ಬಾಲಕಿಯ ಹತ್ಯೆಗೈದ ದುಷ್ಕರ್ಮಿಗಳನ್ನು ಕೂಡಲೆ ಪತ್ತೆಹಚ್ಚುವಂತೆ ರಸ್ತೆ ತಡೆ ನಡೆಸಿದರು ಅಲ್ಲದೆ ಗ್ರಾಮದಲ್ಲಿರುವ ಮಹಿಳೆಯರ ಹಾಗೂ ಮಕ್ಕಳ ಸುರಕ್ಷತೆಗೆ ಪೊಲೀಸರು ಮುಂದಾಗಬೇಕು ಕೂಡಲೇ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಬೇಕೆಂದು ಆಗ್ರಹಿಸಿದರು.
ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಸಿಸಿಟಿವಿ ವಿಡಿಯೋಗಳನ್ನು ಪರಿಶೀಲಿಸಿ ಅನುಮಾನದ ಹಿನ್ನೆಲೆಯಲ್ಲಿ ಐವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: Mangaluru: ಬಜರಂಗದಳ ಪ್ರಾಂತ ಸಹ ಸಂಯೋಜಕ ಮುರಳಿಕೃಷ್ಣ ಹಸಂತಡ್ಕ ಬಂಧನ: ಬಜರಂಗದಳ ಖಂಡನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.