Rameshwaram Cafe: ಬಾಂಬರ್ ಬಗ್ಗೆ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ: ಎನ್‌ಐಎ ಘೋಷಣೆ
Team Udayavani, Mar 6, 2024, 4:34 PM IST
ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಬಾಂಬರ್ ಬಗ್ಗೆ ಮಾಹಿತಿ ನೀಡಿದವರಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) 10 ಲಕ್ಷ ರೂಪಾಯಿ ನಗದು ಬಹುಮಾನ ಘೋಷಿಸಿದೆ.
ಈ ಕುರಿತು ಎಕ್ಸ್ ನಲ್ಲಿ ಬಾಂಬರ್ ಫೋಟೋ ಹಂಚಿಕೊಂಡಿರುವ ಎನ್ಐಎ ಅಧಿಕಾರಿಗಳು , ಆರೋಪಿಯ ಸುಳಿವು ಕೊಟ್ಟವರಿಗೆ 10 ಲಕ್ಷ ರೂಪಾಯಿ ನಗದು ಬಹುಮಾನ ನೀಡುವುದಾಗಿ ಹೇಳಿದೆ. ಒಂದು ವೇಳೆ ಸುಳಿವು ಸಿಕ್ಕರೆ 080289510999 ಮತ್ತು 8904241100 ಈ ನಂಬರ್ ಗಳಿಗೆ ಮಾಹಿತಿ ನೀಡಬಹುದು.ಇನ್ನು ಮಾಹಿತಿದಾರರ ಗುರುತನ್ನು ಗೌಪ್ಯವಾಗಿಡಲಾಗುವುದು ಎಂದು ಎನ್ಐಎ ಹೇಳಿದೆ.
ಮಾರ್ಚ್ 1ರಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ವೈಟ್ ಫೀಲ್ಡ್‌ನ ಕುಂದಲಹಳ್ಳಿ ಬಳಿಯ ಜನಪ್ರಿಯ ಹೋಟೆಲ್ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿ ಕನಿಷ್ಠ ಹತ್ತು ಜನರು ಗಾಯಗೊಂಡಿದ್ದರು. ಘಟನೆ ಹಿಂದೆ ಹಲವು ಅನುಮಾನಗಳು ಹುಟ್ಟಿಕೊಂಡಿವೆ. ಸದ್ಯ ನಾನಾ ತನಿಖಾ ತಂಡಗಳು ಬಾಂಬರ್ ಪತ್ತೆಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.
NIA announces cash reward of 10 lakh rupees for information about bomber in Rameshwaram Cafe blast case of Bengaluru. Informants identity will be kept confidential. pic.twitter.com/F4kYophJFt
— NIA India (@NIA_India) March 6, 2024
ಸ್ಫೋಟಕ್ಕೆ ಸಂಬಂಧಿಸಿದಂತೆ ಎನ್‌ಐಎ ಜೊತೆಗೆ ಬೆಂಗಳೂರು ಪೊಲೀಸರು ಕಠಿಣ ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ ಮತ್ತು ಸ್ಫೋಟಕ ವಸ್ತುಗಳ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು
Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ
Illegal immigrants; ಬಂಧಿತ ಪಾಕ್ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?
Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್ ಪದವಿ ಕೊಡಲಿದೆ ವಿಟಿಯು!
Channapatna by-election; ನಿಖಿಲ್ ಗೆ ನಿರೀಕ್ಷೆಗೂ ಮೀರಿ ಗೆಲುವು: ಭವಿಷ್ಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.