BJP 2ನೇ ಪಟ್ಟಿಗೆ ಇಂದು ಸಭೆ: ನಾಳೆ ಫೈನಲ್
Team Udayavani, Mar 7, 2024, 6:37 AM IST
ಹೊಸದಿಲ್ಲಿ: ಕರ್ನಾಟಕದ 28 ಕ್ಷೇತ್ರಗಳು ಸೇರಿ ದೇಶದ ಉಳಿದ ರಾಜ್ಯಗಳ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲು ಬಿಜೆಪಿಯ ಗುರುವಾರ ಸಭೆ ನಡೆಸುವ ಸಾಧ್ಯತೆ ಇದೆ. ಬಳಿಕ, ಪ್ರಧಾನಿ ನರೇಂದ್ರ ಮೋದಿ ಅವರ ಜತೆಗೆ ಚರ್ಚಿಸಿ, ಶುಕ್ರವಾರ ಪಟ್ಟಿಯನ್ನು ಪ್ರಕಟಿಸಲಾಗುತ್ತಿದೆ ಎಂದು ತಿಳಿದು ಬಂದಿದೆ.
ಕಳೆದ ಶನಿವಾರ ಬಿಜೆಪಿಯ 16 ರಾಜ್ಯಗಳ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿತ್ತು. 370 ಕ್ಷೇತ್ರಗಳನ್ನು ಗೆಲ್ಲುವ ಗುರಿಯೊಂದಿಗೆ ಅಭ್ಯರ್ಥಿಗಳ ಆಯ್ಕೆಯಲ್ಲಿ ಸಾಕಷ್ಟು ಸಮಾಲೋಚನೆಗಳನ್ನು ಬಿಜೆಪಿ ನಡೆಸುತ್ತಿದೆ.
ಮೊದಲ ಹಂತದಲ್ಲಿ ಬಿಜೆಪಿ ಅಧ್ಯಕ್ಷ ಜ.ೆ ಪಿ. ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಜತೆಗೆ ಚರ್ಚಿಸಿದ ಬಳಿಕ ಪ್ರಧಾನಿಯೊಂದಿಗೆ ಸಭೆ ನಡೆಸಿ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮ ಗೊಳಿಸಲಾಗುತ್ತಿದೆ ಎನ್ನಲಾಗಿದೆ. ಹಾಗಾಗಿ ಈ ವಾರ ಬಿಜೆಪಿಯ ಎರಡನೇ ಪಟ್ಟಿಯನ್ನು ನಿರೀಕ್ಷಿಸಬಹುದು. ಇದರಲ್ಲಿ ಕರ್ನಾಟಕದ 28 ಕ್ಷೇತ್ರಗಳಿಗೆ ಅಭ್ಯರ್ಥಿ ಗಳನ್ನು ಘೋಷಣೆ ಮಾಡುತ್ತಾರೆಯೇ ಕಾದು ನೋಡಬೇಕಿದೆ.
ಜೆಡಿಯು 14, ಚಿರಾಗ್ ಪಕ್ಷಕ್ಕೆ 6 ಕ್ಷೇತ್ರ ಬಿಹಾರದಲ್ಲೂ ಎನ್ಡಿಎ ಕೂಟದ ಸೀಟು ಹಂಚಿಕೆ ಬಹುತೇಕ ಅಂತಿಮಗೊಂಡಿದೆ. ಸಿಎಂ ನಿತೀಶ್ ಕುಮಾರ್ ನೇತೃತ್ವದ ಜೆಡಿ ಯು 14 ಮತ್ತು ಚಿರಾಗ್ ಪಾಸ್ವಾನ್ ಹಾ ಗೂ ಪಶುಪತಿ ಪರಾಸ್ ನೇತೃತ್ವದ ಪ್ರತ್ಯೇಕ ಲೋಕ ಜನಶಕ್ತಿ ಪಾರ್ಟಿಗೆ ಆರು ಸೀಟು ಗಳನ್ನು ಬಿಟ್ಟುಕೊಡಲು ಬಿಜೆಪಿ ನಿರ್ಧ ರಿಸಿದೆ. ಒಟ್ಟು 40 ಕ್ಷೇತ್ರಗಳಿರುವ ಬಿಹಾರ ದಲ್ಲಿ ಬಿಜೆಪಿ ಅತೀದೊಡ್ಡ ಪಕ್ಷವಾಗಿದ್ದು 17 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ ಎನ್ನಲಾಗಿದೆ.
ಅಜಿತ್ 3, ಶಿಂಧೆ ಬಣಕ್ಕೆ 10 ಸೀಟು ಹಂಚಿಕೆ
ಮಹಾರಾಷ್ಟ್ರದಲ್ಲಿ ಸೀಟು ಹಂಚಿಕೆಯು ಬಹುತೇಕ ಅಂತಿಮ ಗೊಂಡಿದೆ ಎಂದು ತಿಳಿದು ಬಂದಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಡ ರಾತ್ರಿಯವರೆಗೆ ಸಿಎಂ ಏಕನಾಥ್ ಶಿಂಧೆ, ಉಪಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವೀಸ್ ಮತ್ತು ಅಜಿತ್ ಪವಾರ್ ಜತೆಗೆ ನಡೆಸಿದ ಸಭೆಯಲ್ಲಿ ಸೀಟು ಹಂಚಿಕೆ ಕುರಿತು ಒಮ್ಮತಕ್ಕೆ ಬರಲಾಗಿದೆ. ಈಗ ಗೊತ್ತಾಗಿರುವ ಪ್ರಕಾರ, ಮಹಾರಾಷ್ಟ್ರದ 48 ಕ್ಷೇತ್ರಗಳ ಪೈಕಿ ಬಿಜೆಪಿ 32, ಅಜಿತ್ ಪವಾರ್ ನೇತೃತ್ವದ ಎನ್ಸಿಪಿ ಬಣ 3 ಮತ್ತು ಶಿಂಧೆ ನೇತೃತ್ವದ ಶಿವಸೇನೆಯು 10ರಿಂದ 14 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.