Lok sabha polls: 2 ಹಂತಗಳಲ್ಲಿ ಕಾಂಗ್ರೆಸ್ ಪಟ್ಟಿ ಬಿಡುಗಡೆ: ಡಿಕೆಶಿ
ಮೊದಲ ಹಂತದ ಪಟ್ಟಿಯಲ್ಲಿ ಶೇ.50 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಅಂತಿಮ
Team Udayavani, Mar 7, 2024, 10:28 PM IST
ಬೆಂಗಳೂರು: ಎರಡು ಹಂತಗಳಲ್ಲಿ ಲೋಕಸಭೆ ಚುನಾವಣಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗಲಿದ್ದು, ಈ ಪೈಕಿ ಮೊದಲ ಹಂತದ ಪಟ್ಟಿಯಲ್ಲಿ ಶೇ.50 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಳ್ಳಲಿದೆ ಎಂದು ಡಿಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದರು.
ದೆಹಲಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದೇ ಹಂತದಲ್ಲಿ ಎಲ್ಲ ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದಿಲ್ಲ. ಒಂದೆರಡು ಹಂತಗಳಲ್ಲಿ ಪಟ್ಟಿ ಪ್ರಕಟ ಮಾಡಲಾಗುವುದು. ಈ ಪೈಕಿ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆಯಲ್ಲಿ ಮೊದಲ ಪಟ್ಟಿ ಬಿಡುಗಡೆ ಆಗಲಿದ್ದು, ಅದರಲ್ಲಿ ಶೇ. 50 ಅಭ್ಯರ್ಥಿಗಳ ಆಯ್ಕೆ ಅಂತಿಮಗೊಳ್ಳಲಿದೆ ಎಂದರು.
“ಬಿಜೆಪಿ ಪಟ್ಟಿ ನೋಡಿಕೊಂಡು “ಕೈ’ ಪಟ್ಟಿ ಬಿಡುಗಡೆ ಮಾಡಲಿದೆಯೇ’ ಎಂದು ಕೇಳಿದಾಗ, “ಬಿಜೆಪಿಯವರ ರಾಜಕಾರಣಕ್ಕೂ ನಮ್ಮ ರಾಜಕಾರಣಕ್ಕೂ ವ್ಯತ್ಯಾಸವಿದೆ. ನಮ್ಮ ಪಕ್ಷದಲ್ಲಿ ವಿಶೇಷವಾಗಿ ರಾಜ್ಯ ಕಾಂಗ್ರೆಸ್‌ನಲ್ಲಿ ವ್ಯಕ್ತಿ ಮೇಲೆ ರಾಜಕಾರಣ ನಡೆಯುವುದಿಲ್ಲ. ಅವರು ಅವರದ್ದೇ ಆದ ಲೆಕ್ಕಾಚಾರ ಇಟ್ಟುಕೊಂಡಿದ್ದರೆ, ನಾವು ನಮ್ಮದೇ ಲೆಕ್ಕಾಚಾರ ಇಟ್ಟುಕೊಂಡಿದ್ದೇವೆ’ ಎಂದು ತಿಳಿಸಿದರು.
ಇತ್ತೀಚೆಗೆ ಪಕ್ಷಕ್ಕೆ ಸೇರ್ಪಡೆಯಾದವರಿಗೆ ಟಿಕೆಟ್ ನೀಡುವುದು ಮತ್ತು ಸಚಿವರನ್ನು ಕಣಕ್ಕಿಳಿಸುವ ಬಗ್ಗೆ ಕೇಳಿದಾಗ, ರಾಜಕೀಯದಲ್ಲಿ ಎಲ್ಲ ಸಾಧ್ಯತೆಗಳೂ ಇರುತ್ತವೆ ಎಂದಷ್ಟೇ ಹೇಳಿದರು.
ಮುಂಚಿತವಾಗಿ ಅಭ್ಯರ್ಥಿ ಆಯ್ಕೆ ಮಾಡಬಹುದಿತ್ತಲ್ಲವೇ ಎಂದು ಕೇಳಿದಾಗ, “ನಾವು ಈಗಾಗಲೇ ಒಂದು ತಿಂಗಳ ಹಿಂದೆಯೇ ಚರ್ಚೆ ಮಾಡಿ, ಯಾರಿಗೆ ಯಾವ ಕಿವಿಮಾತು ಹೇಳಬೇಕೋ ಹೇಳಿದ್ದೇವೆ’ ಎಂದು ತಿಳಿಸಿದರು.
ಈಗ ತಮಗೆ ನೊಟೀಸ್ ಬರುತ್ತಿಲ್ಲವೇ ಎಂದಾಗ, “ಇನ್ನೂ ನೊಟೀಸ್ ಬರುತ್ತಿವೆ. ಮಾಧ್ಯಮಗಳು ಹಗಲು ರಾತ್ರಿ ನನ್ನನ್ನು ಕಾಯುತ್ತಾ ಕೆಲಸ ಮಾಡಿವೆ. ಹೆರಿಗೆ ನೋವು ಅನುಭವಿಸಿದವರಿಗೆ ಗೊತ್ತು ಎಂಬಂತೆ, ನನ್ನ ನೋವು ನನಗೆ ಗೊತ್ತು. ರಾಜ್ಯದ ಜನ ನನ್ನ ಪರವಾಗಿ ಹೋರಾಟ ಮಾಡಿದರು. ಪ್ರಾರ್ಥನೆ ಮಾಡಿದರು. ಈಗ ಅವರಿಗೆ ಸಮಾಧಾನ ಆಗಿದೆಯಲ್ಲ ಅಷ್ಟೇ ಸಾಕು’ ಎಂದು ತಿಳಿಸಿದರು.
“ಸಿಇಸಿ ಸಭೆಗೆ ಮುಖ್ಯಮಂತ್ರಿ ಆಗಮಿಸಲು ಸಾಧ್ಯವಾಗುತ್ತಿಲ್ಲ. ಬಸವಣ್ಣ ಅವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದ್ದು, ಬಸವ ಕಲ್ಯಾಣದಲ್ಲಿ ಈ ಸಂಬಂಧದ ದೊಡ್ಡ ಕಾರ್ಯಕ್ರಮ ನಿಗದಿಯಾಗಿದೆ. ಆ ಕಾರ್ಯಕ್ರಮದಲ್ಲಿ ಎಲ್ಲ ಮಠಾಧೀಶರು ಭಾಗವಹಿಸುತ್ತಿದ್ದಾರೆ. ಹೀಗಾಗಿ, ಇದನ್ನು ಮುಂದೂಡಲು ಸಾಧ್ಯವಿಲ್ಲ. ಇದು ಅದ್ಯತೆ ಕಾರ್ಯಕ್ರಮವಾದ್ದರಿಂದ ಸಿಎಂ ಅಲ್ಲಿ ಭಾಗವಹಿಸುತ್ತಿದ್ದಾರೆ. ನಾವೆಲ್ಲ ಸೇರಿ ಈಗಾಗಲೇ ಚರ್ಚೆ ಮಾಡಿರುವುದನ್ನು ನಾನು ಸಭೆಯಲ್ಲಿ ಪ್ರಸ್ತಾಪ ಮಾಡುತ್ತೇನೆ’ ಎಂದು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
Belthangady: ಕಡೆಗೂ ಬಂತು ಇಂದಿರಾ ಕ್ಯಾಂಟೀನ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.