BJP;ಅಮಿತ್‌ ಶಾ ‘ಟಿಕ್‌’ ಮಾಡಿದ ಪಟ್ಟಿ ಬಗ್ಗೆ ಕುತೂಹಲ:ಉಡುಪಿ-ಚಿಕ್ಕಮಗಳೂರು ಸಹಿತ ಹಲವು ಜಟಿಲ

ಅಭ್ಯರ್ಥಿ ಆಯ್ಕೆ ಸಂಬಂಧ ಶುಕ್ರವಾರ ನಿಗದಿಯಾಗಿದ್ದ ಬಿಜೆಪಿ ಕೇಂದ್ರ ಚುನಾವಣ ಸಮಿತಿ ಸಭೆ ರದ್ದು

Team Udayavani, Mar 8, 2024, 6:50 AM IST

amit-sha

ಬೆಂಗಳೂರು: ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಗೆ ಮೂರು ಸಮೀಕ್ಷಾ ವರದಿಗಳನ್ನು ಆಧಾರವಾಗಿಟ್ಟುಕೊಂಡು ದಿಲ್ಲಿ ಬಿಜೆಪಿ ಕಚೇರಿಯಲ್ಲಿ ಮ್ಯಾರಥಾನ್‌ ಸಭೆ ನಡೆದಿದ್ದು, ಕೇಂದ್ರ ಗೃಹ ಸಚಿವ ಅಮಿತ್‌ ಶಾ “ಟಿಕ್‌’ ಮಾಡಿದ ಪಟ್ಟಿ ಬಗ್ಗೆ ಈಗ ತೀವ್ರ ಕುತೂಹಲ ಸೃಷ್ಟಿಯಾಗಿದೆ. ಇದೆಲ್ಲದರ ಮಧ್ಯೆ ಮಾ.8ರಂದು ನಿಗದಿಯಾಗಿದ್ದ ಬಿಜೆಪಿ ಕೇಂದ್ರ ಚುನಾವಣ ಸಮಿತಿ ಸಭೆ ಹಠಾತ್‌ ರದ್ದಾಗಿದೆ.

ಕೇಂದ್ರ ಬಿಜೆಪಿ, ಅಮಿತ್‌ ಶಾ ಹಾಗೂ ರಾಜ್ಯ ನಾಯಕರು ಅಭ್ಯರ್ಥಿ ಆಯ್ಕೆ ಬಗ್ಗೆ ನಡೆಸಿದ ಸರ್ವೇ ವರದಿ ಇಟ್ಟುಕೊಂಡು ಬುಧವಾರ ರಾತ್ರಿ ಸುಮಾರು 5 ತಾಸು ಸಭೆ ನಡೆಸಿದ್ದಾರೆ. ಆದರೂ ಪಟ್ಟಿ ಅಂತಿಮಗೊಳಿಸಲು ಸಾಧ್ಯವಾಗಿಲ್ಲ. ಆದರೆ ಸಭೆಯಲ್ಲಿ ಅಮಿತ್‌ ಶಾ ಟಿಕ್‌ ಮಾಡಿದ ಹೆಸರು ಯಾವುದು ಎಂಬ ಬಗ್ಗೆ ಬಿಜೆಪಿಯ ಯಾವ ನಾಯಕರೂ ತುಟಿ ಬಿಚ್ಚಿಲ್ಲ.

ನಿರ್ಧಾರವಾಗದ ಉಡುಪಿ
ಕೆಲವು ಹಾಲಿ ಸಂಸದರಿಗೆ ಟಿಕೆಟ್‌ ನೀಡಬೇಕೋ, ಬೇಡವೋ ಎಂಬ ವಿಚಾರ ಇನ್ನೂ ರಹಸ್ಯವಾಗಿಯೇ ಉಳಿದಿದೆ. ಅದೇ ರೀತಿ ವಿಧಾನಸಭಾ ಚುನಾವಣೆಯಲ್ಲಿ ಸೋತು ಈಗ ಲೋಕಸಭೆಯ ಮೇಲೆ ಕಣ್ಣಿಟ್ಟಿರುವ ಮಾಜಿ ಸಚಿವರ ಭವಿಷ್ಯವೂ ಇತ್ಯರ್ಥವಾಗಿಲ್ಲ. ಉತ್ತರ ಕನ್ನಡ ಲೋಕಸಭಾ ಆಕಾಂಕ್ಷಿಯಾಗಿರುವ ವಿಶ್ವೇಶ್ವರ ಹೆಗಡೆ ಕಾಗೇರಿ, ಉಡುಪಿ-ಚಿಕ್ಕಮಗಳೂರು ಅಥವಾ ಬೆಂಗಳೂರು ಉತ್ತರದಲ್ಲಿ ಸ್ಥಳ ನಿಯೋಜನೆ ಬಯಸಿರುವ ಸಿ.ಟಿ.ರವಿ, ಚಿಕ್ಕಬಳ್ಳಾಪುರ ಆಕಾಂಕ್ಷಿ ಡಾ| ಕೆ.ಸುಧಾಕರ್‌ ಹೆಸರನ್ನು ಇನ್ನೂ ವೇಟಿಂಗ್‌ ಲಿಸ್ಟ್‌ ನಲ್ಲಿಯೇ ಇಡಲಾಗಿದೆ. ಆದರೆ ಮಾಜಿ ಸಚಿವ ಬಿ.ಶ್ರೀರಾಮುಲು ಅವರನ್ನು ಬಳ್ಳಾರಿ ಲೋಕಸಭಾ ಕಣಕ್ಕೆ ಇಳಿಸುವ ಬಗ್ಗೆ ಅಮಿತ್‌ ಶಾ ಬಹುತೇಕ ಹಸುರು ನಿಶಾನೆ ತೋರಿದ್ದಾರೆ ಎಂದು ತಿಳಿದು ಬಂದಿದೆ.

“ಹಾಲಿ ಸಂಸದರಿಗೆ ಟಿಕೆಟ್‌ ಕೊಡುವ ವಿಚಾರದಲ್ಲಿ ನಿಮ್ಮ ಅಭಿಪ್ರಾಯ ತಿಳಿಸಿ, ತೀರ್ಮಾನ ನಾವು ಮಾಡುತ್ತೇವೆ’ ಎಂದು ವರಿಷ್ಠರು ಸೂಚಿಸಿದ್ದು, ಪರ-ವಿರೋಧ ಅಭಿಪ್ರಾಯಗಳೆಲ್ಲವನ್ನೂ ಆಲಿಸಲಾಗಿದೆ. ಆದರೆ ವಿರುದ್ಧ ಅಭಿಪ್ರಾಯ ಇರುವುದು ನಾಯಕರುಗಳಧ್ದೋ, ಮತದಾರರಧ್ದೋ ಅಥವಾ ಕಾರ್ಯಕರ್ತರಧ್ದೋ ಎಂಬ ಪ್ರಶ್ನೆಯನ್ನು ಒತ್ತಿ ಒತ್ತಿ ಕೇಳಲಾಗಿದೆ.

ಶೆಟ್ಟರ್‌ ವಿಚಾರ ನಮಗೆ ಬಿಡಿ ಎಂದ ವರಿಷ್ಠರು
“ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಅವರ ವಿಚಾರವನ್ನು ನಮಗೆ ಬಿಡಿ’ ಎಂದು ಬಿಜೆಪಿ ವರಿಷ್ಠರು ರಾಜ್ಯ ನಾಯಕರಿಗೆ ಸೂಚನೆ ನೀಡಿದ್ದಾರೆ. ಆದೇ ರೀತಿ ಮಂಡ್ಯ ವಿಚಾರದಲ್ಲಿ ಯಾವುದೇ ಹೇಳಿಕೆ ನೀಡದಂತೆಯೂ ಸೂಚನೆ ನೀಡಲಾಗಿದೆ. ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಹಾಗೂ ಹಾವೇರಿ ಪೈಕಿ ಎಲ್ಲಿಂದ ಜಗದೀಶ್‌ ಶೆಟ್ಟರ್‌ ಸ್ಪರ್ಧಿಸಲಿದ್ದಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಹಳಬರಿಗೆ ಕೈ ತಪ್ಪುವ ಸಾಧ್ಯತೆ ಇಲ್ಲ: ಬಿಎಸ್‌ವೈ
ಹೆಚ್ಚಿನ ಹಾಲಿ ಸಂಸದರಿಗೆ ಟಿಕೆಟ್‌ ಕೈ ತಪ್ಪುವ ಸಾಧ್ಯತೆ ಇಲ್ಲ ಎಂದು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಹೇಳಿರುವುದು ಈಗ ಕುತೂಹಲಕ್ಕೆ ಕಾರಣವಾಗಿದೆ. ಹಳಬರಿಗೆ ಟಿಕೆಟ್‌ ತಪ್ಪುತ್ತದೆಯೇ ಎಂದು ದಿಲ್ಲಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, “ಸದ್ಯ ಆ ರೀತಿ ಏನೂ ಇಲ್ಲ’ ಎಂದು ಹೇಳಿದ್ದಾರೆ. 28 ಲೋಕಸಭಾ ಕ್ಷೇತ್ರಗಳ ಬಗ್ಗೆಯೂ ಚರ್ಚೆ ನಡೆಸಿದ್ದೇವೆ. ಯಾವುದೇ ತೀರ್ಮಾನಕ್ಕೆ ಬಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಹಾವೇರಿಗೆ ಬೊಮ್ಮಾಯಿ ಖಚಿತ
ಹಾವೇರಿ ಲೋಕಸಭಾ ಕ್ಷೇತ್ರದಿಂದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಣಕ್ಕೆ ಇಳಿಯುವುದು ಬಹುತೇಕ ನಿಶ್ಚಯವಾದಂತಾಗಿದೆ. ಸಚಿವೆ ಶೋಭಾ ಕರಂದ್ಲಾಜೆ ಪರ ಮಾಜಿ ಸಿಎಂ ಯಡಿಯೂರಪ್ಪ, ನಳಿನ್‌ ಕುಮಾರ್‌ ಕಟೀಲು ಪರ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ಬ್ಯಾಟಿಂಗ್‌ ಮಾಡಿದ್ದಾರೆ. ಜೆಡಿಎಸ್‌ಗೆ ಹಾಸನ, ಮಂಡ್ಯ ಹಾಗೂ ಕೋಲಾರ ಕ್ಷೇತ್ರಗಳನ್ನು ಬಿಟ್ಟುಕೊಡುವುದು ಖಚಿತವಾಗಿದ್ದು, ಸೀಟು ಹಂಚಿಕೆ ಸಂಬಂಧ ಮೈತ್ರಿ ಪಕ್ಷಗಳ ಸಭೆ ನಡೆಸುವ ಯಾವುದೇ ಸಾಧ್ಯತೆಗಳು ಇಲ್ಲ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ ಪಿಎಂ ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

1-sadsadasd

Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ

Sometimes governments topple in a single day…: Mamata gives big hint

LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ

Modi pays homage to Mahatma Gandhi and Vajpayee memorial before taking oath

Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.