Kottigehara: ಬಸ್ ಬ್ರೇಕ್ ಫೇಲ್; ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ
Team Udayavani, Mar 8, 2024, 10:12 AM IST
ಕೊಟ್ಟಿಗೆಹಾರ: ಕೆಎಸ್ಆರ್ಟಿಸಿ ಬಸ್ ಬ್ರೇಕ್ ಫೇಲ್ ಆಗಿ ಚಾಲಕನ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ತಿರುವಿನಲ್ಲಿ ನಡೆದಿದೆ.
ಚಿಕ್ಕಮಗಳೂರು-ದಕ್ಷಿಣ ಕನ್ನಡ ಸಂಪರ್ಕಿಸುವ ಚಾರ್ಮಾಡಿ ಘಾಟ್ ತಿರುವಿನಲ್ಲಿ ಬಸ್ಸಿನ ಬ್ರೇಕ್ ಕಂಟ್ರೋಲ್ ತಪ್ತಿದ್ದಂತೆ ಅನಿಸಿದಾಗ ಚಾಲಕ ಸಂತೋಷ್ ಡಿವೈಡರ್ ಗೆ ಡಿಕ್ಕಿ ಹೊಡೆಸಿ ಬಸ್ ನಿಲ್ಲಿಸಿ, ಚಾಲಕ, ನಿರ್ವಾಹಕ ಸೇರಿದಂತೆ 70 ಕ್ಕಿಂತ ಹೆಚ್ಚು ಪ್ರಯಾಣಿಕರ ಜೀವ ಕಾಪಾಡಿದ್ದಾರೆ.
ಕಡೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಇಳಿಜಾರಿನಲ್ಲಿ ಬ್ರೇಕ್ಫೇಲ್ ಆದ ಹಿನ್ನೆಲೆ ಚಾಲಕ ಹರಸಾಹಸ ಪಟ್ಟು, ಚಾಲಕನ ಸಮಯ ಪ್ರಜ್ಞೆ ತೋರಿದ್ದಾರೆ. ಬಸ್ ಡಿವೈಡರ್ ಗೆ ಡಿಕ್ಕಿ ಹೊಡೆಯುತ್ತಿದ್ದಂತೆ ಭಾರಿ ಪ್ರಮಾಣದ ಹೊಗೆ ಹೊರ ಬಂದಿದೆ.
ಭಯಾನಕ ತಿರುವುಗಳಿಂದಲೇ ಕೂಡಿರುವ ಚಾರ್ಮಾಡಿ ಘಾಟ್ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು
Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.