ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ ಅವೈಜ್ಞಾನಿಕ ಕಾಮಗಾರಿ; ವಾಹನ ಸವಾರರಿಗೆ ಸಂಕಷ್ಟ
Team Udayavani, Mar 8, 2024, 12:31 PM IST
ಶಿರ್ವ: ಅಪಘಾತ ವಲಯವಾಗಿ ಪರಿಣಮಿಸಿರುವ ಲೋಕೋಪಯೋಗಿ ಇಲಾಖೆಯ ಕಟಪಾಡಿ-ಶಿರ್ವ ಮುಖ್ಯ ರಸ್ತೆಯ ಪಂಜಿಮಾರು ಬಸ್ ನಿಲ್ದಾಣದಿಂದ ಮುಂದಕ್ಕೆ ಇರುವ ಕೋಡು-ಪಂಜಿಮಾರು ತಿರುವಿನಲ್ಲಿ ಮೋರಿ ನಿರ್ಮಿಸಲು ಅವೈಜ್ಞಾನಿಕ ಕಾಮಗಾರಿ ನಡೆಯುತ್ತಿದ್ದು ವಾಹನ ಸವಾರರಿಗೆ ಕಂಟಕಪ್ರಾಯವಾಗಿ ಪರಿಣಮಿಸಿದೆ.
ಶಿರ್ವ ಗ್ರಾ.ಪಂ. ವ್ಯಾಪ್ತಿಯ ಪಂಜಿಮಾರು ಬಸ್ ನಿಲ್ದಾಣದಿಂದ ರಾಬಿನ್ ಬಸ್ ನಿಲ್ದಾಣದವರೆಗಿನ ರಸ್ತೆಯ ಕೋಡು-ಪಂಜಿಮಾರು ತಿರುವಿನ ಇಳಿಜಾರಿನ ರಸ್ತೆಯಲ್ಲಿ ಕಾಮಗಾರಿ ಪ್ರಾರಂಭಗೊಂಡಿದ್ದು, ತಗ್ಗು ಪ್ರದೇಶದಲ್ಲಿ ಮೋರಿ ನಿರ್ಮಿಸಲು ಕಾಮಗಾರಿ ಆರಂಭಿಸಲಾಗಿದೆ. ರಸ್ತೆ ಮಧ್ಯೆ ಮೋರಿ ನಿರ್ಮಿಸಲು ಹೊಂಡ ತೋಡಿ ವಾರ ಕಳೆದರೂ ಯಾವುದೇ ಸುರಕ್ಷಾ ತಡೆ ಬೇಲಿಗಳನ್ನಿರಿಸದೆ ಇಲಾಖಾಧಿಕಾರಿಗಳು/ಗುತ್ತಿಗೆದಾರರು ನಿರ್ಲಕ್ಷé ವಹಿಸಿದ್ದು ವೇಗವಾಗಿ ಬರುವ ವಾಹನಗಳು ತಿರುವಿನಲ್ಲಿ ನಿಯಂತ್ರಣ ಕಳೆದುಕೊಂಡು ಅಪಘಾತ ನಡೆಯುವ ಸಂಭವವಿದೆ.
ಒಂದು ಬದಿಯಲ್ಲಿ ಮಾತ್ರ ಬ್ಯಾರಿಕೇಡ್ ಇಟ್ಟು ಸಣ್ಣ ಫ್ಲೆಕ್ಸ್ ಫಲಕ ಅಳವಡಿಸಲಾಗಿದೆ.ಇನ್ನೊಂದು ಬದಿಯಲ್ಲಿ ಯಾವುದೆ ಸುರಕ್ಷಾ ನಿಯಮ ಪಾಲಿಸದೆ ಒಂದು ರೆಡ್‌ಟೇಪ್ ಕಟ್ಟಲಾಗಿದ್ದು, ರಾತ್ರಿ ವೇಳೆ ಮುಖ್ಯವಾಗಿ ದ್ವಿಚಕ್ರ ವಾಹನ ಸವಾರರು ಗೋಚರಿಸಿದೆ ಇಳಿಜಾರಿನಲ್ಲಿ ಇಲಾಖೆ ತೋಡಿದ ಗುಂಡಿಗೆ ಬೀಳುವ ಸಾಧ್ಯತೆ ಹೆಚ್ಚಾಗಿದೆ. ದಿನವೊಂದಕ್ಕೆ ಸಾವಿರಾರು ವಾಹನಗಳು ಈ ರಸ್ತೆಯಲ್ಲಿ ಸಂಚರಿಸುತ್ತಿವೆ. ತಿರುವು ಇರುವ ಈ ರಸ್ತೆಯಲ್ಲಿ ಈಗಾಗಲೇ ಹಲವಾರು ಅಪಘಾತಗಳು ನಡೆದು ಜೀವಬಲಿಯಾಗಿದ್ದು, ಆಗಾಗ್ಗೆ ನಡೆಯುವ ಅಪಘಾತ ಗಳಿಂದಾಗಿ ವಾಹನ ಸವಾರರ ಜೀವಕ್ಕೆ ಸಂಚಕಾರವಿದೆ.
ದ್ವಿಪಥ ರಸ್ತೆ ವಿಸ್ತರಣೆ ಯಾವಾಗ….?
ಕಟಪಾಡಿ-ಶಿರ್ವ 10.5 ಕಿ.ಮೀ. ರಾಜ್ಯ ಹೆದ್ದಾರಿಯ 8.5 ಕಿ.ಮೀ. ರಸ್ತೆ ಕಾಪು ಶಾಸಕರ ಅನುದಾನದ ಸುಮಾರು 7 ಕೋ.ರೂ. ವೆಚ್ಚದಲ್ಲಿ ಪಂಜಿಮಾರು ಫಲ್ಕೆಯವರೆಗೆ 2018ರಲ್ಲಿ ದ್ವಿಪಥಗೊಂಡು ವಿಸ್ತರಣೆಯಾಗಿತ್ತು. ಮಾಣಿಪ್ಪಾಡಿ ಫಲ್ಕೆಯಿಂದ ಶಿರ್ವ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದವರೆಗಿನ ಸುಮಾರು 2 ಕಿ.ಮಿ. ರಸ್ತೆಯು ಅಂಕುಡೊಂಕಾಗಿದ್ದು 6 ವರ್ಷ ಕಳೆದರೂ ದ್ವಿಪಥಗೊಳ್ಳದೆ ನನೆಗುದಿಗೆ ಬಿದ್ದಿದ್ದು ಅಪಘಾತ ವಲಯವಾಗಿ ಪರಿಣಮಿಸಿದೆ. ಈ ಅವಧಿಯಲ್ಲಿ ಎರಡೆರಡು ಸರಕಾರಗಳು ಆಡಳಿತ ನಡೆಸಿದರೂ ರಸ್ತೆ ವಿಸ್ತರಣೆ ಕಾಮಗಾರಿ ನಡೆದು ತಿರುವು ರಸ್ತೆ ನೇರವಾಗಿ ಸುವ್ಯವಸ್ಥಿತ ರಸ್ತೆಯಾಗುವ ನಾಗರಿಕರ ನೀರೀಕ್ಷೆ ಸುಳ್ಳಾಗಿದೆ.
ಉದಯವಾಣಿ ವರದಿ
ರಸ್ತೆ ದುರವಸ್ಥೆಯ ಬಗ್ಗೆ ಉದಯವಾಣಿ 2022ರ ಮಾ. 11, ಸೆ.18 ಮತ್ತು ಅ. 18 ರಂದು ಮತ್ತು ಡಿ.28ರಂದು ವರದಿ ಪ್ರಕಟಿಸಿತ್ತು. ಪರಿಸರದ ನಾಗರಿಕರು ಲೋಕೋಪಯೋಗಿ ಇಲಾಖೆಯ ಸಚಿವರು,ಶಾಸಕರು ಸಹಿತ ಸಂಬಂಧಪಟ್ಟವರಿಗೆ ಲಿಖೀತ ಮನವಿ ನೀಡಿದ್ದರೂ ಫಲಿತಾಂಶ ಶೂನ್ಯವಾಗಿದೆ.
ಸಂಬಂಧಪಟ್ಟ ಇಲಾಖೆ ಮತ್ತು ಜನಪ್ರತಿನಿಧಿಗಳು ಎಚ್ಚೆತ್ತುಕೊಂಡು ವಾಹನ ನಿಬಿಡತೆಯಿಂದ ಕೂಡಿರುವ ಈ ರಸ್ತೆಯಲ್ಲಿ ಮತ್ತಷ್ಟು ಜೀವಹಾನಿಯಾಗುವ ಮುನ್ನ ರಸ್ತೆ ವಿಸ್ತರಣೆಗೊಳಿಸಿ ಅಪಘಾತ ಮುಕ್ತ ಪ್ರದೇಶವನ್ನಾಗಿ ಮಾಡಿ ಸುಗಮ ಸಂಚಾರಕ್ಕೆ ಅನುವುಗೊಳಿಸಬೇಕೆಂಬುದು ಪರಿಸರದ ನಾಗರಿಕರ ಬೇಡಿಕೆಯಾಗಿದೆ.
ರಸ್ತೆಯನ್ನು ದ್ವಿಪಥಗೊಳಿಸಿ ಅಭಿವೃದ್ಧಿ ಪಡಿಸುವ ಯೋಜನೆ ಇಲ್ಲ. ಸದ್ಯಕ್ಕೆ ರಸ್ತೆಯನ್ನು ಎತ್ತರಿಸಿ ನೇರ ಮಾಡಿ ಎರಡೂ ಕಡೆ ಮಣ್ಣು ತುಂಬಿಸಿ ಮೋರಿ ನಿರ್ಮಿಸಲು ಕಾಮಗಾರಿ ನಡೆಯುತ್ತಿದೆ. ಸುರಕ್ಷತೆಗಾಗಿ ಗುತ್ತಿಗೆದಾರರಿಗೆ ಹೇಳಿ ಬ್ಯಾರಿಕೇಡ್ ಇರಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. –ವಿನಾಯಕ ಪೂಜಾರ, ಲೋಕೋಪಯೋಗಿ ಇಲಾಖೆಯ ಅಭಿಯಂತರ.
ಸತೀಶ್ಚಂದ್ರ ಶೆಟ್ಟಿ, ಶಿರ್ವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.