Karnataka ರಂಜಾನ್ ಮಾಸದಲ್ಲಿ ಉರ್ದು ಶಾಲಾ ಸಮಯ ಬದಲು
Team Udayavani, Mar 8, 2024, 8:58 PM IST
ಬೆಂಗಳೂರು: ಎಲ್ಲ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಉರ್ದು ಮಾಧ್ಯಮದ ಕಿರಿಯ, ಹಿರಿಯ ಹಾಗೂ ಪ್ರೌಢಶಾಲೆಗಳ ರಂಜಾನ್ ತಿಂಗಳ ಶಾಲಾ ಅವಧಿಯಲ್ಲಿ ಬದಲಾವಣೆ ಮಾಡಿ ಶಾಲಾ ಶಿಕ್ಷಣ ಇಲಾಖೆಯ ಉರ್ದು ಮತ್ತು ಇತರ ಅಲ್ಪಸಂಖ್ಯಾತ ಭಾಷಾ ಶಾಲೆಗಳ ನಿರ್ದೇಶನಾಲಯ ಸುತ್ತೋಲೆ ಹೊರಡಿಸಿದೆ.
ರಂಜಾನ್ ತಿಂಗಳ ಪ್ರಾರಂಭದ ದಿನದಿಂದ ಏಪ್ರಿಲ್ 10ರವರೆಗೆ ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 12.45ರವರೆಗೆ ಮಾತ್ರ ತರಗತಿ ಇರಲಿದೆ. ಈ ಅವಧಿಯಲ್ಲಿ ಶಾಲಾ ಸಮಯ ಮೊಟಕುಗೊಳಿಸುವುದರಿಂದ ಕಡಿಮೆ ಆಗುವ ಅವಧಿಯನ್ನು ಇತರ ರಜಾ ದಿನಗಳಲ್ಲಿ ಕಾರ್ಯನಿರ್ವಹಿಸಿ ಸರಿದೂಗಿಸುವಂತೆ ನಿರ್ದೇಶನಾಲಯ ಸೂಚಿಸಿದೆ. ಇದರ ಜತೆಗೆ ರಾಜ್ಯದ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ರಂಜಾನ್ ತಿಂಗಳಿನಲ್ಲಿ ಸಂಜೆ ಅರ್ಧ ಗಂಟೆ ಮುಂಚಿತವಾಗಿ ತೆರಳಲು ಅನುಮತಿ ನೀಡುವಂತೆ ಹೇಳಲಾಗಿದೆ.
ಸರ್ಕಾರದ ಸಲಹಾತ್ಮಕ ವೇಳಾಪಟ್ಟಿಯಂತೆ ಬೆಳಗ್ಗೆ ಹತ್ತರಿಂದ ಸಂಜೆ 4.20ರವರೆಗೆ ಶಾಲಾ ಅವಧಿ ನಿಗದಿಯಾಗಿದ್ದು ರಂಜಾನ್ ಹಿನ್ನೆಲೆಯಲ್ಲಿ ಉರ್ದು ಶಾಲೆಗಳಿಗೆ ವಿನಾಯಿತಿ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ
CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
M. Chinnaswamy ಸ್ಟಾಂಡ್‌ಗೆ ಶಾಂತಾ ರಂಗಸ್ವಾಮಿ ಹೆಸರಿಡಲು ಯಾಕೆ ಹಿಂದೇಟು? ಏನಿದು ವಿವಾದ?
Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್
Mangaluru: ಸಹಬಾಳ್ವೆ ಬೆಸೆಯುತ್ತಿದೆ ‘ಕುಸ್ವಾರ್’
iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬ್ಬಂದಿ
Kumbra ಜಂಕ್ಷನ್‌ನಲ್ಲಿ ಈಗ ಸೆಲ್ಫಿ ಪಾಯಿಂಟ್ ಆಕರ್ಷಣೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.