Lok Sabha Election 2024 ಕಾಂಗ್ರೆಸ್‌ ಪಟ್ಟಿ: ಇನ್ನೂ 21 ಕ್ಷೇತ್ರಗಳು ಬಾಕಿ

ಅಳೆದು-ತೂಗಿ ಆಯ್ಕೆ ಅಂತಿಮಗೊಳಿಸುವ ಉದ್ದೇಶದಲ್ಲಿ ಹೈಕಮಾಂಡ್‌

Team Udayavani, Mar 9, 2024, 7:20 AM IST

Lok Sabha Election 2024 ಕಾಂಗ್ರೆಸ್‌ ಪಟ್ಟಿ: ಇನ್ನೂ 21 ಕ್ಷೇತ್ರಗಳು ಬಾಕಿ

ಬೆಂಗಳೂರು: ರಾಜಧಾನಿ ಬೆಂಗಳೂರು ಸಹಿತ ಒಟ್ಟು 21 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಬಾಕಿ ಉಳಿಸಿಕೊಂಡಿರುವ ಕಾಂಗ್ರೆಸ್‌ ಹೈಕಮಾಂಡ್‌ ನಡೆ ಈಗ ಕುತೂಹಲ ಮೂಡಿಸಿದೆ.

ಯಾವುದೇ ಗೊಂದಲಗಳಿಲ್ಲದ ಒಂದೇ ಹೆಸರಿರುವ ಕ್ಷೇತ್ರಗಳನ್ನು ಮಾತ್ರ ಅಂತಿಮಗೊಳಿಸಿರುವ ಕಾಂಗ್ರೆಸ್‌, ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಗೆ ಚಾಲನೆಯಂತೂ ನೀಡಿದೆ. ಆದರೆ ಅಂತಿಮಗೊಳ್ಳದೆ ಉಳಿದಿರುವ 21 ಕ್ಷೇತ್ರಗಳನ್ನು ಬಾಕಿ ಉಳಿಸಿಕೊಂಡಿದೆ. ಇದರಲ್ಲಿ ಪ್ರತಿಷ್ಠಿತ ಕಣಗಳಿವೆ. ಕೆಲವೆಡೆ ಸಚಿವರನ್ನು ಅಗ್ನಿಪರೀಕ್ಷೆಗೆ ಗುರಿಪಡಿಸಲಿರುವ ಅಖಾಡಗಳೂ ಇವೆ. ಎದುರಾಳಿಗಳ ನಡೆಯನ್ನು ಕಾದುನೋಡುವ ತಂತ್ರವೂ ಹೈಕಮಾಂಡ್‌ ನಡೆಯ ಹಿಂದಿದೆ ಎನ್ನಲಾಗಿದೆ.

ಇದೆಲ್ಲಕ್ಕಿಂತ ಮುಖ್ಯವಾಗಿ ದಿಲ್ಲಿಯಲ್ಲಿ ನಡೆದ ಅಭ್ಯರ್ಥಿಗಳ ಈ ಆಯ್ಕೆ ಪ್ರಕ್ರಿಯೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗಿರಲಿಲ್ಲ. ಅವರ ಅನುಪಸ್ಥಿತಿಯಲ್ಲಿ ಆಯ್ಕೆ ಅಂತಿಮಗೊಂಡರೆ ರಾಜಕೀಯವಾಗಿ ಬೇರೆ ರೀತಿಯ ಸಂದೇಶ ರವಾನೆ ಆಗಬಹುದು ಎಂಬ ಲೆಕ್ಕಾಚಾರವೂ ಇದೆ. ಜತೆಗೆ ಹಲವೆಡೆ ಪೈಪೋಟಿ ಇದ್ದು, ಎರಡಕ್ಕಿಂತ ಹೆಚ್ಚು ಹೆಸರು ರೇಸ್‌ನಲ್ಲಿವೆ. ಒಬ್ಬರ ಆಯ್ಕೆ ಮತ್ತೊಬ್ಬರ ಮನಸ್ತಾಪ ಅಥವಾ ಭಿನ್ನಮತಕ್ಕೆ ಕಾರಣವಾಗುವ ಸಾಧ್ಯತೆ ಇದೆ. ಇದಲ್ಲದೆ, ಕೆಲವೆಡೆ ತಮ್ಮ ನಾಯಕರ ಸಂಬಂಧಿಕರನ್ನೂ ಕಣಕ್ಕಿಳಿಸುವ ಒತ್ತಡವೂ ನಡೆದಿದೆ. ಈ ಎಲ್ಲ ಅಂಶಗಳ ಹಿನ್ನೆಲೆಯಲ್ಲಿ ಅಳೆದು-ತೂಗಿ ಆಯ್ಕೆ ಅಂತಿಮಗೊಳಿಸುವ ಉದ್ದೇಶ ಇದೆ ಎಂದು ಮೂಲಗಳು ತಿಳಿಸಿವೆ.

ಮಾ. 11ರ ಬಳಿಕ ಮತ್ತೊಂದು ಪಟ್ಟಿ
ಲೋಕಸಭೆ ಚುನಾವಣೆ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಮೊದಲ ಪಟ್ಟಿಯಲ್ಲಿ ಇನ್ನಷ್ಟು ಹೆಸರು ಪ್ರಕಟವಾಗಬೇಕಿತ್ತು. ಮಾ. 11ರಂದು ಸ್ಕ್ರೀನಿಂಗ್‌ ಕಮಿಟಿ ಸಭೆ ಬಳಿಕ ಆ ಹೆಸರುಗಳು ಅಂತಿಮವಾಗಲಿವೆ ಎಂದು ಶುಕ್ರವಾರ ಡಿ.ಕೆ. ಶಿವಕುಮಾರ್‌ ಹೇಳಿದರು.

ಸ್ಥಳೀಯ ಶಾಸಕರು, ಮುಖಂಡರ ಜತೆ ಚರ್ಚಿಸಿದಾಗ ಅವರು ಯಾರ ಹೆಸರನ್ನು ಪ್ರಸ್ತಾವ ಮಾಡಿರುತ್ತಾರೋ ಹಾಗೂ ನಮ್ಮ ಸಮೀಕ್ಷೆಗಳ ಆಧಾರದಲ್ಲಿ ನಾವು ಅಭ್ಯರ್ಥಿ ಆಯ್ಕೆ ಮಾಡಿದ್ದೇವೆ ಎಂದರು.

17 ಕ್ಷೇತ್ರಗಳಿಗೆ ನೀವು ಪಟ್ಟಿ ತೆಗೆದುಕೊಂಡು ಹೋಗಿದ್ದಿರಿ ಎಂದು ಕೇಳಿದಾಗ, ನಾನು ಎಷ್ಟು ಪಟ್ಟಿ ತೆಗೆದುಕೊಂಡು ಹೋಗಿದ್ದೆ ಎಂಬುದು ಮುಖ್ಯವಲ್ಲ. ಇದು ನನ್ನ ಪಕ್ಷ ಅಲ್ಲ. ನಮ್ಮ ಹೈಕಮಾಂಡ್‌ ನಾಯಕರು ಈ ಬಗ್ಗೆ ತೀರ್ಮಾನ ಮಾಡುತ್ತಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ಕೆ.ಸಿ. ವೇಣುಗೋಪಾಲ್, ರಾಹುಲ್‌ ಗಾಂಧಿ ಸಹಿತ ಅನೇಕ ನಾಯಕರು ಚರ್ಚೆ ಮಾಡುತ್ತಾರೆ. ನಾವು ಕೇವಲ ಅಭ್ಯರ್ಥಿಗಳ ಹೆಸರನ್ನು ಪ್ರಸ್ತಾವ ಮಾಡುತ್ತೇವೆ ಅಷ್ಟೇ. ನಮ್ಮ ಪಕ್ಷದ ಸಿಇಸಿ ಸಮಿತಿ ಸದಸ್ಯರು ಅವರದೇ ಆದ ಮೂಲಗಳಿಂದ ಮಾಹಿತಿ ಪಡೆದುಕೊಂಡಿರುತ್ತಾರೆ. ಇವರೆಲ್ಲ ಸೇರಿ ಚರ್ಚೆ ಮಾಡಿ ತೀರ್ಮಾನ ಮಾಡುತ್ತಾರೆ ಎಂದು ಸ್ಪಷ್ಟಪಡಿಸಿದರು.

ಈಗ ಪ್ರಕಟವಾಗಿರುವ 7 ಕ್ಷೇತ್ರಗಳ ಪೈಕಿ ಎಷ್ಟರಲ್ಲಿ ಗೆಲ್ಲುವ ಸಾಧ್ಯತೆ ಇದೆ ಎಂದು ಕೇಳಿದಾಗ, ಎಲ್ಲ ಕ್ಷೇತ್ರಗಳಲ್ಲೂ ಗೆಲ್ಲುತ್ತೇವೆ ಎಂದರು.

ಟಾಪ್ ನ್ಯೂಸ್

Baba Waterfall:ಭಾರೀ ಫೇಮಸ್ಸು ಬಾಬಾ ಫಾಲ್ಸ್:ಅಂಬೋಲಿಗಿಂತ ಇಲ್ಲಿ ಪ್ರವಾಸಿಗರ ಸಂಖ್ಯೆ ಅಧಿಕ

Baba Waterfall:ಭಾರೀ ಫೇಮಸ್ಸು ಬಾಬಾ ಫಾಲ್ಸ್:ಅಂಬೋಲಿಗಿಂತ ಇಲ್ಲಿ ಪ್ರವಾಸಿಗರ ಸಂಖ್ಯೆ ಅಧಿಕ

12

Bigg Boss: ಪತ್ನಿ ಬಗ್ಗೆ ಮಾತನಾಡಿದ್ದಕ್ಕೆ ಕಪಾಳಮೋಕ್ಷ; ಬಿಗ್‌ ಬಾಸ್‌ ಮನೆಯಲ್ಲಿ ಹೈಡ್ರಾಮಾ

Karachi: ಪಾಕಿಸ್ತಾನ್‌ ಷೇರುಪೇಟೆ ಕಟ್ಟಡದಲ್ಲಿ ಭಾರೀ ಅಗ್ನಿ ಅನಾಹುತ; ವಹಿವಾಟು ಸ್ಥಗಿತ

Karachi: ಪಾಕಿಸ್ತಾನ್‌ ಷೇರುಪೇಟೆ ಕಟ್ಟಡದಲ್ಲಿ ಭಾರೀ ಅಗ್ನಿ ಅನಾಹುತ; ವಹಿವಾಟು ಸ್ಥಗಿತ

Why did he ignore the BCCI instruction to play Ranji? Ishaan replied

IshanKishan; ರಣಜಿ ಆಡಬೇಕೆಂಬ ಬಿಸಿಸಿಐ ಸೂಚನೆ ನಿರ್ಲಕ್ಷ್ಯ ಮಾಡಿದ್ದೇಕೆ? ಉತ್ತರಿಸಿದ ಇಶಾನ್

Bus Overturns: ಹರಿಯಾಣದಲ್ಲಿ ಬಸ್ ಪಲ್ಟಿಯಾಗಿ 40 ಮಕ್ಕಳಿಗೆ ಗಾಯ, ಆಸ್ಪತ್ರೆಗೆ ದಾಖಲು

Bus Overturns: ಹರಿಯಾಣದಲ್ಲಿ ಬಸ್ ಪಲ್ಟಿಯಾಗಿ 40 ಮಕ್ಕಳಿಗೆ ಗಾಯ, ಆಸ್ಪತ್ರೆಗೆ ದಾಖಲು

Ullal: ಉಳ್ಳಾಲ ಖಾಝಿ ಫಝಲ್ ಕೋಯಮ್ಮ ತಂಙಳ್ ವಿಧಿವಶ

Ullal: ಉಳ್ಳಾಲ ಖಾಝಿ ಫಝಲ್ ಕೋಯಮ್ಮ ತಂಙಳ್ ವಿಧಿವಶ

Udupi: ವ್ಯಾಪಕ ಮಳೆಗೆ ಗುಂಡಿಬೈಲು ಪ್ರದೇಶ ಜಲಾವೃತ.. ವಿದ್ಯಾರ್ಥಿಗಳು ಸೇರಿ ಸ್ಥಳೀಯರ ರಕ್ಷಣೆ

Udupi: ಭಾರಿ ಮಳೆಗೆ ಗುಂಡಿಬೈಲು ಪ್ರದೇಶ ಜಲಾವೃತ… ವಿದ್ಯಾರ್ಥಿಗಳ ರಕ್ಷಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nandini Milk: ನಂದಿನಿ ಹಾಲು, ಮೊಸರಿನ ಜತೆ ಶೀಘ್ರ ದೋಸೆ ಹಿಟ್ಟು 

Nandini Milk: ನಂದಿನಿ ಹಾಲು, ಮೊಸರಿನ ಜತೆ ಶೀಘ್ರ ದೋಸೆ ಹಿಟ್ಟು 

Kalaburagi: ಹೃದಯಾಘಾತದಿಂದ ರಟಕಲ್ ವಿರಕ್ತ ಮಠದ ಸಿದ್ಧರಾಮ ಶ್ರೀಗಳು ವಿಧಿವಶ

Kalaburagi: ಹೃದಯಾಘಾತದಿಂದ ರಟಕಲ್ ವಿರಕ್ತ ಮಠದ ಸಿದ್ಧರಾಮ ಶ್ರೀಗಳು ವಿಧಿವಶ

Bar

Government; ಡಿಜಿಟಲೀಕರಣದತ್ತ ಅಬಕಾರಿ ಇಲಾಖೆ: ಭ್ರಷ್ಟಾಚಾರಕ್ಕೆ ಬೀಳಲಿದೆ ಕಡಿವಾಣ!

Darshan-case

Renukaswamy Case: ದರ್ಶನ್‌, ಪವಿತ್ರಾ ಗೌಡ ಸೇರಿ 10 ಮಂದಿ ಬೆರಳಚ್ಚು ಹೊಂದಾಣಿಕೆ

R.Ashok

Dengue ನಿಯಂತ್ರಣಕ್ಕೆ ಸರಕಾರದ ಬಳಿ ದುಡ್ಡಿಲ್ಲ: ಅಶೋಕ್‌

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Baba Waterfall:ಭಾರೀ ಫೇಮಸ್ಸು ಬಾಬಾ ಫಾಲ್ಸ್:ಅಂಬೋಲಿಗಿಂತ ಇಲ್ಲಿ ಪ್ರವಾಸಿಗರ ಸಂಖ್ಯೆ ಅಧಿಕ

Baba Waterfall:ಭಾರೀ ಫೇಮಸ್ಸು ಬಾಬಾ ಫಾಲ್ಸ್:ಅಂಬೋಲಿಗಿಂತ ಇಲ್ಲಿ ಪ್ರವಾಸಿಗರ ಸಂಖ್ಯೆ ಅಧಿಕ

12

Bigg Boss: ಪತ್ನಿ ಬಗ್ಗೆ ಮಾತನಾಡಿದ್ದಕ್ಕೆ ಕಪಾಳಮೋಕ್ಷ; ಬಿಗ್‌ ಬಾಸ್‌ ಮನೆಯಲ್ಲಿ ಹೈಡ್ರಾಮಾ

Ronny

Ronny; ಕಿರಣ್‌ ರಾಜ್‌ ನಟನೆಯ ಸಿನಿಮಾದ ಹಾಡು ಬಂತು

Karachi: ಪಾಕಿಸ್ತಾನ್‌ ಷೇರುಪೇಟೆ ಕಟ್ಟಡದಲ್ಲಿ ಭಾರೀ ಅಗ್ನಿ ಅನಾಹುತ; ವಹಿವಾಟು ಸ್ಥಗಿತ

Karachi: ಪಾಕಿಸ್ತಾನ್‌ ಷೇರುಪೇಟೆ ಕಟ್ಟಡದಲ್ಲಿ ಭಾರೀ ಅಗ್ನಿ ಅನಾಹುತ; ವಹಿವಾಟು ಸ್ಥಗಿತ

Why did he ignore the BCCI instruction to play Ranji? Ishaan replied

IshanKishan; ರಣಜಿ ಆಡಬೇಕೆಂಬ ಬಿಸಿಸಿಐ ಸೂಚನೆ ನಿರ್ಲಕ್ಷ್ಯ ಮಾಡಿದ್ದೇಕೆ? ಉತ್ತರಿಸಿದ ಇಶಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.