Cauvery water; ತಮಿಳುನಾಡಿಗೆ ನಿರಂತರ ಕಾವೇರಿ ನೀರು: ಅಶೋಕ್ ಆರೋಪ
ನೀರು ಕೊಡಲು ಆಗದಿದ್ದರೆ ಕುರ್ಚಿ ಬಿಟ್ಟು ತೊಲಗಿ ಎಂದು ಆಕ್ರೋಶ ವ್ಯಕ್ತಪಡಿಸಿದ ವಿಪಕ್ಷ ನಾಯಕ
Team Udayavani, Mar 10, 2024, 11:20 PM IST
ಬೆಂಗಳೂರು: ಕಾವೇರಿ ನೀರಿಗಾಗಿ ರೈತರು ಹೋರಾಡುತ್ತಿದ್ದಾರೆ. ಜನರು ಖಾಲಿ ಬಿಂದಿಗೆ ಹಿಡಿದುಕೊಂಡು ಬೀದಿಗಿಳಿದಿದ್ದಾರೆ. ಬೆಂಗಳೂರಿನಲ್ಲೂ ನೀರಿಗೆ ಕೊರತೆಯಾಗಿದೆ. ಇಷ್ಟಾದರೂ ರಾಜ್ಯ ಕಾಂಗ್ರೆಸ್ ಸರಕಾರ ತಮಿಳುನಾಡಿಗೆ ನಿರಂತರ ವಾಗಿ ಕಾವೇರಿ ನೀರು ಹರಿಸಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ವೋಟಿಗಾಗಿ ಅಲ್ಪಸಂಖ್ಯಾಕರನ್ನು ಓಲೈಸುವ ಕೆಲಸ ಮಾಡಿದ್ದಾರೆ. ಈಗ ಹೊಂದಾಣಿಕೆಗಾಗಿ ರಾಜ್ಯಕ್ಕೆ ಕಾಂಗ್ರೆಸ್ ದ್ರೋಹ ಬಗೆಯುತ್ತಿದೆ ಎಂದು ಆರೋಪಿಸಿದರು.
ಮೇಕೆದಾಟು ಯೋಜನೆ ಜಾರಿ ಮಾಡುತ್ತೇವೆಂದು ಹೋರಾಟ ಮಾಡಿ ಈಗ ಕೇಂದ್ರ ಸರಕಾರ ಮಾಡಬೇಕು ಎನ್ನುತ್ತಿದ್ದಾರೆ. ಬಜೆಟ್‌ನಲ್ಲಿ 10 ಸಾವಿರ ಕೋಟಿ ರೂಪಾಯಿಯನ್ನು ಈ ಯೋಜನೆಗೆ ಮೀಸಲಿಡಬೇಕಿತ್ತು. ಸಿದ್ದರಾಮಯ್ಯ ನೇತೃತ್ವದ ಸರಕಾರ ಜಾಗತಿಕ ಮಟ್ಟದಲ್ಲಿ ಬೆಂಗಳೂರಿನ ಮಾನವನ್ನು ತೆಗೆದಿದ್ದು ಜನರಿಗೆ ಕಲುಷಿತ ನೀರು ನೀಡಲಾಗುತ್ತಿದೆ. ಈಗಿನ ಸರಕಾರ ಪಾಪರ್ ಆಗಿದ್ದು, ಕುಡಿಯುವ ನೀರಿಗೂ ಹಣವಿಲ್ಲ. ಕುಡಿಯುವ ನೀರು ಕೊಡುವ ಯೋಗ್ಯತೆ ಇಲ್ಲವಾದರೆ ಕುರ್ಚಿ ಬಿಟ್ಟು ತೊಲಗಲಿ ಎಂದರು.
ಬರ ಪರಿಹಾರಕ್ಕೆ ಚುನಾವಣ ನೀತಿ ಸಂಹಿತೆ ಅನ್ವಯವಾ ಗುವುದಿಲ್ಲ. ರಾಜ್ಯ ವಿಪತ್ತು ಪರಿಹಾರ ನಿಧಿಯ ಹಣ ಈಗಾಗಲೇ ಸರಕಾರಕ್ಕೆ ತಲುಪಿದೆ. ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯ ಹಣವನ್ನು ಕೇಂದ್ರ ಸರಕಾರ ಒಟ್ಟಿಗೆ ತೀರ್ಮಾನ ಮಾಡಿ ಎಲ್ಲ ರಾಜ್ಯಗಳಿಗೆ ನೀಡುತ್ತದೆ. ಬಿಜೆಪಿ ಸರಕಾರ ತತ್‌ಕ್ಷಣ ಪ್ರವಾಹ ಹಾನಿ ಪರಿಹಾರ ನೀಡಿದ್ದು, ಬಳಿಕ ಕೇಂದ್ರ ಸರಕಾರ ಹಣ ನೀಡಿತ್ತು. ಬರ ಪರಿಹಾರ ತರಲು ಯೋಗ್ಯತೆ ಇಲ್ಲವಾದರೆ ರಾಜೀನಾಮೆ ಕೊಟ್ಟು ಹೋಗಲಿ. ನಾವು ಸರಕಾರ ನಡೆಸುವಾಗ ಕೇಂದ್ರದ ಕಡೆ ನೋಡದೆ ರೈತರಿಗೆ ಪರಿಹಾರ ನೀಡಲಾಗಿತ್ತು ಎಂದು ನೆನಪಿಸಿದರು.
ಕೇಂದ್ರದೊಂದಿಗೆ ಉತ್ತಮ ಸಂಬಂಧ ಇಟ್ಟುಕೊಳ್ಳದೆ ರಾಜಕೀಯ ಮಾಡುತ್ತಿ¨ªಾರೆ. ತೆಲಂಗಾಣದ ಸಿಎಂ ರೇವಂತ್ ರೆಡ್ಡಿ ಅವರು ಪ್ರಧಾನಿ ಬಗ್ಗೆ ಉತ್ತಮವಾಗಿ ಮಾತನಾಡಿ¨ªಾರೆ. ಕರ್ನಾಟಕದ ಕಾಂಗ್ರೆಸ್ ನಾಯಕರು ಅವರಿಂದ ಟ್ಯೂಷನ್ ಪಡೆಯಲಿ ಎಂದು ಟಾಂಗ್ ನೀಡಿದರು.
ನಮಗೇ ನೀರಿಲ್ಲ, ತ.ನಾಡಿಗೆ ಎಲ್ಲಿಂದ ಬಿಡೋಣ?: ಡಿಕೆಶಿ
ಮಂಡ್ಯ,: ನಮಗೇ ಕುಡಿಯಲು ನೀರಿಲ್ಲ. ತಮಿಳುನಾಡಿಗೆ ಯಾಕೆ ನೀರು ಬಿಡಬೇಕು. ಬಿಜೆಪಿಯವರಿಗೆ ಬುದ್ಧಿಭ್ರಮಣೆ ಆಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಹೆಲಿಪ್ಯಾಡ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿಗೆ ಕುಡಿಯುವ ನೀರು ಸರಬರಾಜು ಮಾಡುವ ಶಿವನಸಮುದ್ರ ಡ್ಯಾಂನಲ್ಲಿ ನೀರೆತ್ತಲು ಕೆಆರ್‌ಎಸ್‌ನಿಂದ ನೀರು ಹರಿಸಲಾಗಿದೆ. ನಮ್ಮ ರೈತರಿಗೇ ನೀರು ಕೊಡಲು ಆಗುತ್ತಿಲ್ಲ. ಇನ್ನು ತಮಿಳುನಾಡಿಗೆ ನೀರು ಕೊಡೋದು ಎಲ್ಲಿಂದ ಎಂದು ಮರು ಪ್ರಶ್ನಿಸಿದರು. ತೆಲಂಗಾಣದವರು ನೀರಿಗಾಗಿ ಮನವಿ ಮಾಡುತ್ತಿದ್ದಾರೆ. ನಾವು ನಿಮಗೆ ಕೊಡುತ್ತೇವೆ. ನೀವು ನಮಗೆ ಕೊಡಿ ಅಂತಿದ್ದಾರೆ. ಅದರ ಬಗ್ಗೆ ಯೋಚನೆ ಮಾಡುತ್ತಿದ್ದೇವೆ. ಬಿಜೆಪಿಯವರು ಮೊದಲು ಮೇಕೆದಾಟು ಯೋಜನೆ ಜಾರಿಗೆ ಅನುಮತಿ ಕೊಡಿಸಲಿ. ತಾನು ಮಾಡಿದ ತಪ್ಪು ಮುಚ್ಚಿಕೊಳ್ಳಲು ಬಿಜೆಪಿ ಈ ರೀತಿ ಮಾಡುತ್ತಿದೆ. ನಮ್ಮನ್ನು ದಡ್ಡರು ಎಂದುಕೊಂಡಿದ್ದಾರಾ? ಮೊದಲು ಕುಡಿಯುವ ನೀರಿಗೆ ಆದ್ಯತೆ ನೀಡಲಾಗುವುದು. ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡಲ್ಲ ಎಂದು ಸ್ಪಷ್ಟಪಡಿಸಿದರು.
ಖಾಲಿ ಕೊಡ ಪ್ರದರ್ಶಿಸಿ ವಾಟಾಳ್ ಪ್ರತಿಭಟನೆ
ಬೆಂಗಳೂರು: ಬರಗಾಲದ ನಡುವೆಯೂ ತಮಿಳುನಾಡಿಗೆ ಕಾವೇರಿ ನೀರು ಹರಿಸ ಲಾಗುತ್ತಿದೆ ಎಂದು ಆರೋಪಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ರವಿವಾರ ಮೆಜೆಸ್ಟಿಕ್‌ನಲ್ಲಿ ಖಾಲಿ ಕೊಡ ಪ್ರದರ್ಶಿಸಿ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಭೀಕರ ಬರಗಾಲದ ಹಿನ್ನೆಲೆಯಲ್ಲಿ ನೀರಿಲ್ಲದೆ ಬೆಂಗಳೂರು ಸಹಿತ ಸುತ್ತಮುತ್ತಲಿನ ಜನರು ತೊಂದರೆಯಲ್ಲಿ ದ್ದಾರೆ. ಕುಡಿಯುವ ನೀರಿನ ಬವಣೆ ಶುರುವಾಗಿದೆ. ಇಂತಹ ಕಷ್ಟದಲ್ಲಿ ಸರಕಾರ ತಮಿಳುನಾಡಿಗೆ ನೀರು ಹರಿಸುತ್ತಿರುವುದರಲ್ಲಿ ಅರ್ಥವಿಲ್ಲ. ಕನ್ನಡಿಗರ ಹಿತಕಾಯುವಲ್ಲಿ ಸರಕಾರ ವಿಫಲವಾಗಿದೆ ಎಂದು ದೂರಿದರು.
ಏನಿಲ್ಲ… ಏನಿಲ್ಲ… ಕುಡಿಯಲು ನಮಗೆ ನೀರಿಲ್ಲ
ಮಂಡ್ಯ: “ಏನಿಲ್ಲ… ಏನಿಲ್ಲ… ಕುಡಿಯಲು ನಮಗೆ ನೀರಿಲ್ಲ. ನಮ್ಮ, ನಿಮ್ಮ ಮನೆಯಲ್ಲಿ ನೀರಿಲ್ಲ. ಕನ್ನಂಬಾಡಿ ಖಾಲಿ ಮಾಡಿ ತಮಿಳುನಾಡಿಗೆ ನೀರು ಬಿಟ್ರಲ್ಲ… ‘ ಇದು ಮಂಡ್ಯ ನಗರ ಬಿಜೆಪಿ ಕಾರ್ಯಕರ್ತರು ಕೆಆರ್‌ಎಸ್‌ನಿಂದ ಕಾವೇರಿ ನದಿಗೆ ನೀರು ಬಿಟ್ಟಿರುವ ರಾಜ್ಯ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ರೀತಿ.
ಸುಭಾಷ್ ನಗರ ಬಿಜೆಪಿ ಕಚೇರಿ ಮುಂಭಾಗದಲ್ಲಿ ಜಮಾಯಿಸಿದ ಕಾರ್ಯಕರ್ತರು ಕೈಯಲ್ಲಿ ಖಾಲಿ ಬಿಂದಿಗೆ ಹಾಗೂ ನೀರಿನ ಕ್ಯಾನ್‌ಗಳನ್ನು ಹಿಡಿದು ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗುತ್ತ, ಕರಿಮಣಿ ಮಾಲೀಕ ಹಾಡಿಗೆ ವ್ಯಂಗ್ಯದ ಸಾಹಿತ್ಯದ ಸಾಲು ಸೇರಿಸಿ ಹಾಡುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು.
ಬಿಜೆಪಿ ಕಚೇರಿಯಿಂದ ಮೆರವಣಿಗೆ ಹೊರಟ ಕಾರ್ಯಕರ್ತರನ್ನು ವಿನೋಬಾ ರಸ್ತೆಗೆ ಬರುತ್ತಿದ್ದಂತೆ ಪೊಲೀಸರು ಪಕ್ಷದ ಜಿಲ್ಲಾಧ್ಯಕ್ಷ ಡಾ| ಇಂದ್ರೇಶ್, ಮುಖಂಡರಾದ ವಿವೇಕ್, ಸಿ.ಟಿ.ಮಂಜುನಾಥ್, ಶಿವಕುಮಾರ್ ಆರಾಧ್ಯ ಸಹಿತ ಹಲವರನ್ನು ವಶಕ್ಕೆ ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.