Election Commissioner ರಾಜೀನಾಮೆಗೆ ಭಿನ್ನಮತ ಕಾರಣ?: ವಿಪಕ್ಷ ಪ್ರಹಾರ


Team Udayavani, Mar 11, 2024, 6:12 AM IST

1-wewqew

ಹೊಸದಿಲ್ಲಿ: ಲೋಕಸಭೆ ಚುನಾವಣೆ ಘೋಷಣೆಗೆ ಕೆಲವು ದಿನಗಳು ಬಾಕಿ ಇರುವಂತೆಯೇ ಚುನಾವಣ ಆಯುಕ್ತ ಅರುಣ್‌ ಗೋಯಲ್‌ ರಾಜೀನಾಮೆ ನೀಡಿರುವುದಕ್ಕೆ ವಿಪಕ್ಷಗಳು ಕಳವಳ ವ್ಯಕ್ತಪಡಿಸಿವೆ. ರಾಜೀನಾಮೆಗೆ ಕಾರಣ ಸಿಇಸಿ ಜತೆಗಿನ ಭಿನ್ನಾಭಿಪ್ರಾಯವೋ, ಪ್ರಧಾನಿ ಮೋದಿ ಜತೆಗಿನ ಭಿನ್ನಾಭಿಪ್ರಾಯವೋ ಎಂದೂ ಪ್ರಶ್ನಿಸಿವೆ.

ಈ ಬಗ್ಗೆ ಟ್ವೀಟ್‌ ಮಾಡಿ ರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, “ಈಗ ದೇಶದಲ್ಲಿ ಒಬ್ಬರೇ ಚುನಾವಣ ಆಯುಕ್ತರಿದ್ದಾರೆ. ಸಧ್ಯದಲ್ಲೇ ಲೋಕಸಭೆ ಚುನಾವಣೆ ಘೋಷಣೆಯಾಗಲಿದೆ. ನಾನು ಈ ಮೊದಲೇ ಹೇಳಿದಂತೆ ನಮ್ಮ ದೇಶದಲ್ಲಿನ ಸ್ವತಂತ್ರ ಸಂಸ್ಥೆಗಳನ್ನು ಕಾಪಾಡದಿದ್ದರೆ ದೇಶ ನಿರಂಕುಶ ಪ್ರಭುತ್ವಕ್ಕೆ ಒಳಗಾಗುತ್ತದೆ’ ಎಂದು ಹೇಳಿದ್ದಾರೆ.

ವಿಪಕ್ಷ ನಾಯಕರಾದ ಉದ್ಧವ್‌ ಠಾಕ್ರೆ, ಶರದ್‌ ಪವಾರ್‌, ಮಮತಾ ಬ್ಯಾನರ್ಜಿ, ಸಂಜಯ್‌ ರಾವತ್‌ ಸಹ ಗೋಯಲ್‌ ರಾಜೀನಾಮೆ ಸಂಬಂಧ ಕೇಂದ್ರ ಸರಕಾರದ ವಿರುದ್ಧ ಕಿಡಿಕಾರಿದ್ದಾರೆ.

35 ವರ್ಷಗಳಲ್ಲಿ 40 ಕಡೆ ಕೆಲಸ!: ಚುನಾವಣ ಆಯು ಕ್ತರಾಗಿ ಆಯ್ಕೆಯಾಗುವ ಮೊದಲು ಗೋಯಲ್‌ 35 ವರ್ಷಗಳಲ್ಲಿ 40 ಕಡೆ ನೇಮಕಗೊಂಡು ಕರ್ತವ್ಯ ನಿರ್ವಹಿಸಿದ್ದಾರೆ. 1987ನೇ ಬ್ಯಾಚ್‌ನ ಐಎಎಸ್‌ ಅಧಿಕಾರಿಯಾ ಗಿರುವ ಗೋಯಲ್‌, ನಗರ ಪಾಲಿಕೆ, ಸಂಸ್ಕೃತಿ ಸಚಿವಾಲಯ, ಬೃಹತ್‌ ಕೈಗಾರಿಕೆ, ಹಣಕಾಸು, ನಗರಾಭಿವೃದ್ಧಿ ಸೇರಿದಂತೆ 40 ವಿಭಾಗಗಳಲ್ಲಿ ಕೆಲಸ ಮಾಡಿದ್ದಾರೆ.

ರಾಜೀನಾಮೆಗೆ ಭಿನ್ನಮತ ಕಾರಣ?

ಗೋಯಲ್‌ ರಾಜೀನಾಮೆ ಸಲ್ಲಿಸಿರುವುದಕ್ಕೆ ವೈಯಕ್ತಿಕ ಕಾರಣಗಳನ್ನೂ ನೀಡಿದ್ದರೂ, ಮುಖ್ಯ ಚುನಾವಣ ಆಯುಕ್ತ ರಾಜೀವ್‌ ಕುಮಾರ್‌ರೊಂದಿಗಿನ ಭಿನ್ನಾಭಿಪ್ರಾಯವೇ ಅವರ ರಾಜೀನಾಮೆಗೆ ಕಾರಣ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಗೋಯಲ್‌ ಆರೋ ಗ್ಯವಾಗಿದ್ದರು. ಯಾವುದೇ ಕೌಟುಂಬಿಕ ಸಮಸ್ಯೆಯಿರಲಿಲ್ಲ ಎಂದು ಅವರ ಸ್ನೇಹಿತರು ಹೇಳಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಮಾ.15ಕ್ಕೆ ಇಬ್ಬರು ಚುನಾವಣ ಆಯುಕ್ತರ ನೇಮಕ: ಮೂಲಗಳು

ಇಬ್ಬರು ಚುನಾವಣ ಆಯುಕ್ತರನ್ನು ಮಾ.15ರಂದು ನೇಮಕ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಅರುಣ್‌ ಗೋಯಲ್‌ ರಾಜೀನಾಮೆ ನೀಡಿದ ಬಳಿಕ 2 ಚುನಾವಣ ಆಯುಕ್ತರ ಸ್ಥಾನ ಖಾಲಿಯಾಗಿದ್ದು, ಇವರ ನೇಮಕಾತಿಗಾಗಿ ಆಯ್ಕೆ ಸಮಿತಿ ಶೀಘ್ರವೇ ಸಭೆ ನಡೆಸಲಿದ್ದು, ಮಾ.15ರಂದು ನೇಮಕಾತಿ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಶೀಘ್ರದಲ್ಲೇ ಲೋಕಸಭೆ ಚುನಾವಣೆ ಘೋಷಣೆಯಾಗಬೇಕಿದ್ದು, ಮುಖ್ಯ ಚುನಾವಣ ಆಯುಕ್ತರು ಮಾತ್ರ ಪ್ರಸ್ತುತ ಕಾರ್ಯನಿರ್ವಹಿಸುತ್ತಿದ್ದಾರೆ.

ಟಾಪ್ ನ್ಯೂಸ್

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ ಪಿಎಂ ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

1-sadsadasd

Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ

Sometimes governments topple in a single day…: Mamata gives big hint

LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ

Modi pays homage to Mahatma Gandhi and Vajpayee memorial before taking oath

Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Untitled-1

Mangaluru: ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.