Serial; ಕಿರುತೆರೆಯ ಸೂರ್ಯವಂಶ: ಅನಿರುದ್ಧ ಹೊಸ ಧಾರವಾಹಿ ಇಂದಿನಿಂದ

Team Udayavani, Mar 11, 2024, 11:56 AM IST

Suryavamsha kannada serial starts from March 11

ಸಾಹಸ ಸಿಂಹ ವಿಷ್ಣುವರ್ಧನ್‌ ಅಭಿನಯದ “ಸೂರ್ಯವಂಶ’ ಚಿತ್ರವು ಬಿಡುಗಡೆಗೊಂಡು ಸೂಪರ್‌ ಹಿಟ್‌ ಆಗಿದ್ದು ನಿಮಗೆ ಗೊತ್ತಿರಬಹುದು. ಈಗ ಅದೇ ಹೆಸರಿನಲ್ಲಿ “ಸೂರ್ಯವಂಶ’ ಧಾರಾವಾಹಿ ಉದಯ ವಾಹಿನಿ’ಯಲ್ಲಿ ವೀಕ್ಷಕರಿಗೆ ತೋರಿಸಲು ಸಿದ್ಧವಾಗಿದೆ.

ತನ್ವಿ ಕ್ರಿಯೇಶನ್ಸ್ ಲಾಂಛನದಲ್ಲಿ ನಿರ್ಮಾಪಕ ಎಲ್. ಪದ್ಮನಾಭ ಬಂಡವಾಳ ಹೂಡುವುದರ ಮೂಲಕ ಕಿರುತೆರೆಗೆ ಪಾದಾರ್ಪಣೆ ಮಾಡಿದ್ದಾರೆ. ಹರಿಸಂತು ಪ್ರಧಾನ ನಿರ್ದೇಶಕರಾಗಿದ್ದು, ಪ್ರಕಾಶ್‌ ಮುಚ್ಚಳಗುಡ್ಡ ಸಂಚಿಕೆ ನಿರ್ದೇಶನ ಮಾಡುತ್ತಿದ್ದಾರೆ.

ಒಂದು ಹಳೆಯ ಭವ್ಯ ಪರಂಪರೆಯ ಹೆಗ್ಗುರುತಾಗಿ ನಿಂತಿರುವ “ಸೂರ್ಯವಂಶ’ ಕುಟುಂಬದಲ್ಲಿ ತಾತ ಸತ್ಯಮೂರ್ತಿಗೆ ಈ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗುವ ಬಯಕೆ. ವಂಶದ ಕುಡಿ ಇಪ್ಪತ್ತು ವರ್ಷಗಳ ಹಿಂದೆ ಮೊಮ್ಮಗ ಸೂರ್ಯವರ್ಧನ ಕಾಣೆಯಾಗಿದ್ದ ಚಿಂತೆಗೆ ಕಾರಣವಾಗಿರುತ್ತದೆ. ಒಂದು ಆಕಸ್ಮಿಕ ಸಂದರ್ಭದಲ್ಲಿ ಆ ಹುಡುಗ ಸಿಗುತ್ತಾನೆ. ತಾಯಿಯ ಚಿಕಿತ್ಸೆಗೆ ಹಣ ಬೇಕಿರುವುದರಿಂದ ಆತನು ಈ ನಾಟಕಕ್ಕೆ ಒಪ್ಪಿಕೊಳ್ಳುತ್ತಾನೆ. ಅವನೇ ಕಥಾನಾಯಕ ಕರ್ಣ. ನಂತರ ಕರ್ಣನು ಸೂರ್ಯವಂಶಕ್ಕೆ ಕಾಲಿಟ್ಟ ನಂತರ ಎಲ್ಲಾ ಕಡೆಗಳಿಂದಲೂ ವಿರೋಧಿಗಳು ಹುಟ್ಟಿಕೊಳ್ಳುತ್ತಾರೆ. ಅದೇ ಊರಿನ ಕಾಳಿಂಗ ಆಟಾಟೋಪವನ್ನು ಬಗ್ಗು ಬಡಿಯಲು ಕರ್ಣನಿಂದ ಮಾತ್ರ ಸಾಧ್ಯ ಎಂದು ಊರ ಜನರು ನಂಬಿರುತ್ತಾರೆ.

ಇದರ ಮಧ್ಯೆ ನಾಯಕಿ ಸುರಭಿ ಆಗಮನವಾಗುತ್ತದೆ. ಇದರಿಂದ ಕಥೆ ಹೊಸ ರೂಪ ಪಡೆದುಕೊಳ್ಳುತ್ತದೆ. ಮುಂದೆ ಕರ್ಣನೇ ಸೂರ್ಯವರ್ಧನ ಎನ್ನುವ ವಿಷಯ ತಿಳಿಯುತ್ತದೆ. ಅದು ಹೇಗೆ, ಯಾರಿಂದ, ಯಾವಾಗ ಎಂಬ ಸನ್ನಿವೇಶಗಳೊಂದಿಗೆ ರೋಚಕ ತಿರುವುಗಳು ಬರುತ್ತದೆ. ಪ್ರತಿ ಕಂತುಗಳು ಶ್ರೀಮಂತವಾಗಿ ಮೂಡಿಬಂದಿರುವುದು ವಿಶೇಷ.

ನಾಯಕನಾಗಿ ಅನಿರುದ್ಧ್ ಜಟ್ಕರ್‌, ನಾಯಕಿಯಾಗಿ ಸುರಭಿ. ತಾತನಾಗಿ ಸುಂದರರಾಜ್‌, ಖಳನಾಗಿ ದಿ.ಉದಯ್‌ ಕುಮಾರ್‌ ಪುತ್ರ ವಿಕ್ರಂ ಉದಯಕುಮಾರ್‌. ಉಳಿದಂತೆ ರವಿ ಭಟ್, ಸುಂದರ ಶ್ರೀ, ಲೋಕೇಶ್‌ ಬಸವಟ್ಟಿ, ಪುಷ್ಪಾಬೆಳವಾಡಿ, ನಯನಾ, ರಾಮಸ್ವಾಮಿ, ಸುನಂದಾ ಮುಂತಾದವರು ನಟಿಸುತ್ತಿದ್ದಾರೆ. ಮಾರ್ಚ್‌ 11 ಸೋಮವಾರದಿಂದ ಶನಿವಾರದವರೆಗೆ ರಾತ್ರಿ 8 ಗಂಟೆಗೆ ಉದಯ ಟಿವಿಯಲ್ಲಿ ಪ್ರಸಾರವಾಗಲಿದೆ.

ಟಾಪ್ ನ್ಯೂಸ್

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-biggboss

BBK11: ಗ್ರೂಪ್ ಕಟ್ಕೊಂಡು ಆಡುವವರಿಗೆ ನಾನು ಸಿಂಗಲ್ ಸಿಂಹವೆಂದು ಎಚ್ಚರಿಕೆ ಕೊಟ್ಟ ಚೈತ್ರಾ

BBK11: ಬಿಗ್ ಬಾಸ್ ಮನೆಯಲ್ಲಿ ದುಡ್ಡು ಕದ್ದು ಓಡಿದ ಚೈತ್ರಾ.! ಮನೆಮಂದಿ ಶಾಕ್

BBK11: ಬಿಗ್ ಬಾಸ್ ಮನೆಯಲ್ಲಿ ದುಡ್ಡು ಕದ್ದು ಓಡಿದ ಚೈತ್ರಾ.! ಮನೆಮಂದಿ ಶಾಕ್

1-wqewqe

BBK11: ದೊಡ್ಮನೆಯಲ್ಲಿ ಸೆಡೆ ಜಗಳ.. ಬಿಗ್ ಬಾಸ್ ನಿಂದ ಅಚೆ ಬರಲು ರೆಡಿಯಾದ ಸುರೇಶ್

BBK11: ಮಂಜು ಮಾತಿಗೆ ಕೆರಳಿ ಕೆಂಡವಾದ ಶೋಭಾ; ಒಂದೇ ದಿನದಲ್ಲಿ ಡಾಮಿನೇಟ್ ಆಟ

BBK11: ಮಂಜು ಮಾತಿಗೆ ಕೆರಳಿ ಕೆಂಡವಾದ ಶೋಭಾ; ಒಂದೇ ದಿನದಲ್ಲಿ ಡಾಮಿನೇಟ್ ಆಟ

BBK11: ಬಿಗ್‌ ಬಾಸ್‌ ಮನೆಯಲ್ಲಿ ಶೋಭಾ ಆರ್ಭಟಕ್ಕೆ ಗಪ್‌ ಚುಪ್‌ ಆದ ಮಂಜು.!

BBK11: ಬಿಗ್‌ ಬಾಸ್‌ ಮನೆಯಲ್ಲಿ ಶೋಭಾ ಆರ್ಭಟಕ್ಕೆ ಗಪ್‌ ಚುಪ್‌ ಆದ ಮಂಜು.!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.