‘Guarantee’ ಅನುಷ್ಠಾನ ಸಹಿತ ಸರ್ಕಾರ ನಡೆಸುವುದು ಸುಲಭವಲ್ಲ:ಡಾ.ಎಂ.ಸಿ.ಸುಧಾಕರ್
ಯತ್ನಾಳ್ ಬಗ್ಗೆ ನಾವಲ್ಲ ಬಿಜೆಪಿ ನಾಯಕರೇ ಎಚ್ಚರದಿಂದ ಇರಬೇಕು
Team Udayavani, Mar 11, 2024, 5:24 PM IST
ವಿಜಯಪುರ : ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅತ್ಯುತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ದೊಡ್ಡ ಮೊತ್ತದ ಗ್ಯಾರಂಟಿ ಯೋಜನೆಗಳ ಮಧ್ಯೆ ಸರ್ಕಾರ ನಡೆಸುವುದು ಸುಲಭದ ಮಾತಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ ದಲಿತ ಮುಖ್ಯಮಂತ್ರಿ ಚರ್ಚೆಯ ವಿಷಯವಾಗಿ ಪ್ರತಿಕ್ರಿಯೆ ನೀಡಿದರು. ಆಸೆ ಆಕಾಂಕ್ಷೆಗಳಿರೋದು ಸಹಜ, ಅಂತಹ ಪರಿಸ್ಥಿತಿ ಬಂದಾಗ ಅವಕಾಶ ಎಲ್ಲರಿಗೂ ಆಗುತ್ತದೆ. ಎಲ್ಲರಿಗೂ ಸಿಎಂ ಆಗುವ ಅವಕಾಶ, ಅರ್ಹತೆ ಇದೆ. ಸದ್ಯ ಸಿದ್ಧರಾಮಯ್ಯ ಮುಖ್ಯಮಂತ್ರಿಯಾಗಿ ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸಂಪನ್ಮೂಲ ಶೇಖರಣೆ ಮಾಡುವ ಮೂಲಕ ತಮ್ಮ ಆಡಳಿತವನ್ನು ಸರ್ಮಥಿಸಿದ್ದಾರೆ. 15 ಬಜೆ ಮಂಡಿಸಿರುವ ಅನುಭವಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಮ್ಮ ಸರ್ಕಾರ ಸುಭದ್ರವಾಗಿದೆ ಎಂಧು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಯತ್ನಾಳ್ ಬಗ್ಗೆ ಬಿಜೆಪಿ ನಾಯಕರೇ ಎಚ್ಚರದಿಂದ ಇರಬೇಕು
ಬಸನಗೌಡ ಪಾಟೀಲ ಯತ್ನಾಳ ಬಗ್ಗೆ ಬಿಜೆಪಿಯವರೇ ಎಚ್ಚರದಿಂದ ಇತಬೇಕೆ ಹೊರತು ಕಾಂಗ್ರೆಸ್ ಪಕ್ಷದವರಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರದ ತಿರುಗೇಟು ನೀಡಿದ್ದಾರೆ.
ಲೋಕಸಭೆ ಚುನಾವಣೆ ಬಳಿಕ 50-60 ಕಾಂಗ್ರೆಸ್ ಶಾಸಕರು ಬಿಜೆಪಿ ಬರಲಿದ್ದು, ರಾಜ್ಯದ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದ ಯತ್ನಾಳ ಹೇಳಿಕೆಗೆ ಪ್ರತಿಕ್ರಿಯಿಸಿ ‘ಅವರು ಆಗಾಗ ಇಂಥ ಹೇಳಿಕೆ ನೀಡುತ್ತಲೇ ಇರುತ್ತಾರೆ. ಆಗಾಗ ಇಂಥ ಬಾಂಬ್ ಹಾಕುತ್ತಿರುವುದು ಸಾಮಾನ್ಯವಾಗಿದೆ ಎಂದರು.
ಇಬ್ಬರ ಪಕ್ಷ ಬೇರೆ ಬೇರೆ ಇದ್ದರೂ ಯತ್ನಾಳ ನನ್ನ ಆತ್ಮೀಯರು, ಇಬ್ಬರ ಮಧ್ಯೆ ವಯಕ್ತಿತ ಸ್ನೇಹ ಚನ್ನಾಗಿದೆ ಎಂದ ಸಚಿವ ಸುಧಾಕರ್ , ನಮಗಿಂತ ಹೆಚ್ಚಾಗಿ ಸ್ವಪಕ್ಷೀಯರ ಮೇಲೆಯೇ ಹೆಚ್ಚು ಬಾಂಬ್ ಹಾಕುತ್ತಾರೆ. ಹೀಗಾಗಿ ಯತ್ನಾಳ ಬಗ್ಗೆ ಎಚ್ಚರಿಕೆಯಿಂದ ಇರಬೇಕಾಗಿರುವುದು ಕಾಂಗ್ರೆಸ್ ಪಕ್ಷದವರಲ್ಲ, ಅವರ ಸ್ವಪಕ್ಷೀಯರೇ ಎಂದು ಕುಟುಕಿದರು.
ಕಾಂಗ್ರೆಸ್ ಶಾಸಕರಿಗೆ ಬಿಜೆಪಿ ಪಕ್ಷದವು 50-60 ಕೋಟಿ ರೂ. ಆಮಿಷ ಒಡ್ಡುತ್ತಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೀಡಿರುವ ಹೇಳಿಕೆ, ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರು ಪಕ್ಷದ ಅಭ್ಯರ್ಥಿಗೆ ಮತಹಾಕಿದ್ದಾರೆ. ಮೈತ್ರಿ ಮಾಡಿಕೊಂಡಿದ್ದ ಬಿಜೆಪಿ-ಜೆಡಿಎಸ್ ಮೈತ್ರಿಯ ತಂತ್ರಗಾರಿಕೆ ವಿಫಲವಾಗಿದೆ ಎಂದರು.
ಇಂಥ ಮಾತಿನಿಂದಲೇ ಸಚಿವ ಸ್ಥಾನ ಕಳೆದುಕೊಂಡಿದ್ದರು
ನಾವು ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಾಯಿಸುತ್ತೇವೆ ಎಂದಿರುವ ಬಿಜೆಪಿ ಸಂಸದ ಅನಂತಕುಮಾರ ಹೆಗಡೆ ಇಂಥ ಮಾತನಾಡಿಯೇ ಸಚಿವ ಸ್ಥಾನ ಕಳೆದುಕೊಂಡಿದ್ದರು. ಇದು ಮಾನಸಿಕ ಅಸಮತೋಲನದ ಪ್ರತೀಕ ಎಂದರು.
ಸಂವಿಧಾನ ಬದಲಿಸುವ ಮಾತನಾಡುತ್ತಿರುವ ಅನಂತರಕುಮಾರ ನಾಲ್ಕು ವರ್ಷಗಳಿಂದ ಎಲ್ಲಿ ಹೋಗಿದ್ದು, ಕಾಣೆಯಾಗಿದ್ದು ಏಕೆ. ಈ ಹಿಂದೆ ಇದೇ ರೀತಿ ಮಾತನಾಡಿ ಸಚಿವ ಸ್ಥಾನ ಕಳೆದುಕೊಂಡಿದ್ದ ಅನಂತಕುಮಾರ ಹೆಗಡೆ ಅವರಿಗೆ ಚುನಾವಣೆ ಸಂದರ್ಭದಲ್ಲಿ ಒಂದು ರೀತಿಯ ಕಾಯಿಲೆ ಬರುತ್ತದೆ ಎಂದು ಕುಟುಕಿದರು.
ಬಿಜೆಪಿ ನಾಯಕರಿಗೆ ಪ್ರಜಾಪ್ರಭುತ್ವದ ಮೂಲ ಆಶಯ, ವ್ಯವಸ್ಥೆಯೇ ಅರ್ಥವಾಗಿಲ್ಲ. ಭಾವನಾತ್ಮಕವಾಗಿ ಸಮಾಜವನ್ನು ಒಡೆಯುವ ಮೂಲಕ ಮುಗ್ಧ ಜನರನ್ನು ದಾರಿ ತಪ್ಪಿಸುಯವ ಕೆಲಸ ಮಾಡುತ್ತಾರೆ. ಇದೆಲ್ಲ ಬಹಳ ದಿನ ನಡೆಯದು ಇಂಥದ್ದಕ್ಕೆಲ್ಲ ಅಂತ್ಯ ಇದ್ದೇ ಇರುತ್ತದೆ ಎಂದು ಹರಿಹಾಯ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sanju Weds Geetha 2: ಸಂಜು-ಗೀತಾಗೆ ಕಿಚ್ಚ ಸಾಥ್
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.