ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣ ಹೊಸ ಟರ್ಮಿನಲ್ ಕಾಮಗಾರಿಗೆ ಮೋದಿ ಚಾಲನೆ
Team Udayavani, Mar 11, 2024, 10:16 AM IST
ಬೆಳಗಾವಿ/ಹುಬ್ಬಳ್ಳಿ: ಬೆಳಗಾವಿ ವಿಮಾನ ನಿಲ್ದಾಣದಲ್ಲಿ 350 ಕೋಟಿ ಹಾಗೂ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ 340 ಕೋಟಿ ವೆಚ್ಚದಲ್ಲಿ ಹೊಸ ಟರ್ಮಿನಲ್ ಕಾಮಗಾರಿಗಳ ಪ್ರಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ವರ್ಚು ವಲ್ ಮೂಲಕ ಶಂಕುಸ್ಥಾಪನೆ ನೆರವೇರಿಸಿದರು. ಎರಡೂ ವಿಮಾನ ನಿಲ್ದಾಣಗಳನ್ನು ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ.
ಬೆಳಗಾವಿ ವಿಮಾನ ನಿಲ್ದಾಣ ಎದುರು ರಾಣಿ ಚನ್ನಮ್ಮನ ಪ್ರತಿಮೆ ಪ್ರತಿಷ್ಠಾಪನೆಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು ಅನುಮತಿ ದೊರೆತಿದೆ ಎಂದು ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ ತಿಳಿಸಿದ್ದಾರೆ.
ಏನೇನು ಸೌಲಭ್ಯ?: ಬೆಳಗಾವಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್‌ನಲ್ಲಿ 4 ಏರೋಬ್ರಿಡ್ಜ್, ತಲಾ 8 ಎಸ್ಕ್ಲೇಟರ್, ಲಿಫ್ಟ್,
ಏಕಕಾಲಕ್ಕೆ ಹೊರ ಹೋಗುವ ಮತ್ತು ಒಳಬರುವ 2,400 ಪ್ರಯಾಣಿಕರನ್ನು ನಿರ್ವಹಿಸುವ ಸಾಮರ್ಥ್ಯ ಹೊಂದಲಿದೆ. ಇದಲ್ಲದೇ ಏಕಕಾಲಕ್ಕೆ 9 ವಿಮಾನಗಳ ನಿಲುಗಡೆ, ರಾತ್ರಿ ವೇಳೆಯೂ ವಿಮಾನಗಳ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗುತ್ತಿದೆ. ಟರ್ಮಿನಲ್ ಎದುರಿಗೆ 500 ಕಾರು, 200 ಬೈಕ್ ಸೇರಿದಂತೆ ಇತರೆ ವಾಹನಗಳ ಪಾರ್ಕಿಂಗ್‌ಗೆ ಅವಕಾಶವಿರಲಿದೆ.
ಹುಬ್ಬಳ್ಳಿ ವಿಮಾನ ನಿಲ್ದಾಣವನ್ನು 340 ಕೋಟಿ ರೂ. ವೆಚ್ಚದಲ್ಲಿ ದೇಶದಲ್ಲೇ ಮೊದಲ ಐದು ಸ್ಟಾರ್ ಶ್ರೇಯಾಂಕ ಹೊಂದಿದ ಕಟ್ಟಡವನ್ನು ವಿಶ್ವದರ್ಜೆ ಮಟ್ಟದಲ್ಲಿ ನಿರ್ಮಿಸಲಾಗುತ್ತಿದೆ. ಒಂದೇ ಬಾರಿಗೆ 10 ವಿಮಾನಗಳು ನಿಲುಗಡೆ ಹಾಗೂ ನಾಲ್ಕು ಏರೋ ಬ್ರಿಜ್‌ಗಳು ಇರಲಿವೆ. ಈಗಿರುವ ಟರ್ಮಿನಲ್ ವಿಸ್ತೀರ್ಣಗಿಂತ ನಾಲ್ಕು ಪಟ್ಟು ಹೆಚ್ಚಾಗಲಿದ್ದು, ಇದರಿಂದ ಪ್ರತಿದಿನ 2400 ಪ್ರಯಾಣಿಕರ ಸಂಚಾರಕ್ಕೆ ಅನುಕೂಲವಾಗಲಿದೆ. ಎರಡು ವರ್ಷಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ.
ದೇಶದ 15 ವಿಮಾನ ನಿಲ್ದಾಣಗಳ ಯೋಜನೆಗ ಳಿಗೆ ಪ್ರಧಾನಿಯಿಂದ ಶಿಲಾನ್ಯಾಸ, ಉದ್ಘಾಟನೆ ವಿಮಾನ ನಿಲ್ದಾಣಗಳು, ಕಟ್ಟಡಗಳ ನಿರ್ಮಾಣ ಸೇರಿದಂತೆ 42,000 ಕೋಟಿ ರೂ.ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಚಾಲನೆ ನೀಡಿದ್ದಾರೆ. ಈ ಪೈಕಿ ಉತ್ತರ ಪ್ರದೇಶದ 34,700 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳೂ ಸೇರಿವೆ. 9,800 ಕೋಟಿ ರೂ. ಮೌಲ್ಯದ 15 ವಿಮಾನ ನಿಲ್ದಾಣ ಯೋಜನೆಗಳಿಗೂ ಶಿಲಾನ್ಯಾಸ, ಉದ್ಘಾಟನೆ ನೆರವೇರಿಸಿದ್ದು, ಈ ಪೈಕಿ ಕರ್ನಾಟಕದ ಹುಬ್ಬಳ್ಳಿ ಮತ್ತು ಬೆಳಗಾವಿಯ ಹೊಸ ಟರ್ಮಿನಲ್‌ಗಳ ಶಿಲಾನ್ಯಾಸವೂ ಸೇರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.