ಅಕ್ರಮ ತಡೆಗೆ ಕಠಿನ ಮಾರ್ಗಸೂಚಿ: ಹೈಕೋರ್ಟ್ ನೋಟಿಸ್
Team Udayavani, Mar 12, 2024, 12:30 AM IST
ಬೆಂಗಳೂರು: ಚುನಾವಣ ಪೂರ್ವ, ಚುನಾವಣೆ ಸಂದರ್ಭದಲ್ಲಿ ಹಾಗೂ ಚುನಾವಣ ಅನಂತರದ ಭ್ರಷ್ಟಾಚಾರ, ಅಕ್ರಮ ಮತ್ತು ಆಮಿಷಗಳಿಗೆ ಕಡಿವಾಣ ಹಾಕಲು ಮಾದರಿ ನೀತಿ ಸಂಹಿತೆಯ ಜತೆಗೆ ಕಠಿನ ನಿಯಮಗಳನ್ನು ರೂಪಿಸಲು ಚುನಾವಣ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿ ಸಂಬಂಧ ಕೇಂದ್ರ ಸರಕಾರ ಹಾಗೂ ಚುನಾವಣ ಆಯೋಗಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಈ ವಿಚಾರವಾಗಿ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಗೌತಮ್ ಎಂ. ಗೌಡ ಹಾಗೂ ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಹಾಗೂ ನ್ಯಾ| ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಸೋಮವಾರ ವಿಚಾರಣೆಗೆ ಬಂದಿತ್ತು.
ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠ, ಪ್ರತಿವಾದಿಗಳಾದ ಭಾರತ ಚುನಾವಣಾ ಆಯೋಗ, ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯ, ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ, ಕರ್ನಾಟಕ ರಾಜ್ಯ ಚುನಾವಣ ಆಯೋಗಕ್ಕೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಎಪ್ರಿಲ್ 1ಕ್ಕೆ ಮುಂದೂಡಿತು.
ಚುನಾವಣಾ ಪೂರ್ವ, ಚುನಾವಣೆ ಸಂದರ್ಭದಲ್ಲಿ ಹಾಗೂ ಚುನಾವಣಾ ನಂತರದ ಭ್ರಷ್ಟಾಚಾರ, ಅಕ್ರಮ ಮತ್ತು ಆಮಿಷಗಳಿಗೆ ಕಡಿವಾಣ ಹಾಕಲು ಮಾದರಿ ನೀತಿ ಸಂಹಿತೆಯ ಜತೆಗೆ ಕಠಿಣ ನಿಯಮಗಳನ್ನು ರೂಪಿಸಲು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು. ಚುನಾವಣಾ ಅಕ್ರಮ, ಆಮಿಷಗಳನ್ನು ತಡೆಗಟ್ಟಲು ಈಗಿರುವ ಕಾನೂನು-ನಿಯಮಗಳನ್ನು ಮರುಪರಿಶೀಲಿಸಬೇಕು. ಚುನಾವಣೆ ವೇಳೆ ಹಣದ ಆಮಿಷಗಳನ್ನು ಪತ್ತೆ ಹಚ್ಚಿನ ಕಾನೂನು ರೀತಿ ಕ್ರಮ ಜರುಗಿಸಲು ಪ್ರತಿ ಮತಗಟ್ಟೆಗೆ ಹೆಚ್ಚುವರಿ ಚುನಾವಣಾ ಸಿಬ್ಬಂದಿ ನಿಯೋಜಿಸಬೇಕು. ಆರ್ಥಿಕ ದುರ್ಬಲ ವರ್ಗಗಳ ವಾಸ ಮಾಡುವ ಪ್ರದೇಶಗಳಲ್ಲಿ ಪ್ರಚಾರದ ಮೇಲೆ ನಿಗಾ ಇಡಲು ಪೊಲೀಸ್ ಗಸ್ತು, ನೀತಿ ಸಂಹಿತೆ ಜಾರಿ ತಂಡಗಳ ಸಂಖ್ಯೆಯನ್ನು ಹೆಚ್ಚಿಸಬೇಕು. ಕಳೆದ ವಿಧಾನಸಭೆ ಚುನಾವಣೆ ವೇಳೆ ನಡೆದ ಚುನಾವಣಾ ಅಕ್ರಮಗಳು ಅರ್ಜಿದಾರರು 2023ರ ಜುಲೈ 13ರಂದು ಬರೆದಿರುವ ಪತ್ರ ಆಧರಿಸಿ ಕ್ರಮ ಜರುಗಿಸಲು ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Murdeshwar:ಅಶುಭ- ಪ್ರವಾಸಿಗರಿಲ್ಲದೆ ಮುರ್ಡೇಶ್ವರ ಕಿನಾರೆ ಭಣ ಭಣ!
KD Movie: ಕೆಡಿ ಶಿವ ಮೊಗದಲ್ಲಿ 25 ಮಿಲಿಯನ್ ನಗು
Mumbai: ಹೊಸ ವರ್ಷದ ಮುನ್ನಾದಿನ 17,800 ವಾಹನ ಚಾಲಕರಿಗೆ ದಂಡ, 89 ಲಕ್ಷ ರೂ. ಸಂಗ್ರಹ
Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು
Delhi: ಕೇಜ್ರಿವಾಲ್ ಚುನಾವಣೆಯಲ್ಲಿ ನೀಡಿದ್ದ ಒಂದೂ ಭರವಸೆ ಈಡೇರಿಸಿಲ್ಲ: ಬಿಜೆಪಿ ವಾಗ್ದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.