Lok Sabha ಬಿಜೆಪಿಯಲ್ಲಿ ಗೆಲುವಿನ ಟಿಕೆಟ್‌ಗೆ ಪೈಪೋಟಿ ಇರಬಾರದು ಎಂದರೆ ಹೇಗೆ: ಪ್ರತಾಪ ಸಿಂಹ
Team Udayavani, Mar 12, 2024, 12:37 AM IST
ಮೈಸೂರು: ಕಾಂಗ್ರೆಸ್‌ನಲ್ಲಿ ಸೋಲಿನ ಟಿಕೆಟ್‌ಗಾಗಿಯೇ ಹೊಡೆದಾಟವಿದೆ. ಹೀಗಿರು ವಾಗ ಬಿಜೆಪಿಯಲ್ಲಿ ಗೆಲುವಿನ ಟಿಕೆಟ್‌ಗೆ ಪೈಪೋಟಿ ಇರಬಾರದು ಎಂದರೆ ಹೇಗೆ? ಗೆಲ್ಲುವ ಕುದುರೆ ಏರಲು ಎಲ್ಲರೂ ಪ್ರಯತ್ನ ಪಡುತ್ತ ಇರುತ್ತಾರೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.
ಮೈಸೂರು ರೈಲ್ವೆ ನಿಲ್ದಾಣದಲ್ಲಿ ಮೈಸೂರು- ಮನಮದುರೈ ನೂತನ ರೈಲಿಗೆ ಚಾಲನೆ ನೀಡಿ ಈ ಬಾರಿ ಟಿಕೆಟ್ ಕೈತಪ್ಪುವ ಸುದ್ದಿ ಹರಿದಾಡುತ್ತಿ ರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಚುನಾವಣೆ ಅಂದರೆ ಆಕಾಂಕ್ಷಿಗಳು ಇದ್ದೇ ಇರುತ್ತಾರೆ. ಮೋದಿ ಅವರ ಕೃಪೆಯಿಂದ ಕೆಲಸ ಮಾಡಿ ಮೈಸೂರಲ್ಲಿ ಬಿಜೆಪಿ ಗೆಲುವ ಸ್ಥಿತಿಯನ್ನು ನಾನು ಮೂಡಿಸಿದ್ದೇನೆ.
ಹಾಗಾಗಿ ಗೆಲ್ಲುವ ಕುದುರೆ ಏರಲು ಎಲ್ಲರೂ ಪ್ರಯತ್ನಿಸುತ್ತಾರೆ. ನನಗೆ ತಾಯಿ ಚಾಮುಂಡಿ, ಕಾವೇರಿ ತಾಯಿ, ಮೋದಿ ಆಶೀರ್ವಾದ ಇದೆ. ನಾನು ಈ ಹತ್ತು ವರ್ಷದಲ್ಲಿ ಒಳ್ಳೆಯ ಕೆಲಸ ಮಾಡಿದ್ದೇನೆ. ಹಾಗಾಗಿ ಪಕ್ಷ ನನ್ನ ಕೈ ಬಿಡಲ್ಲ ಎಂಬ ಅಚಲ ನಂಬಿಕೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮೋದಿಯವರಿಲ್ಲದೆ ಪ್ರತಾಪ್ ಸಿಂಹ ಶೂನ್ಯ. ಮೋದಿ ಹೆಸರಿನಲ್ಲಿ ನಾನು 2 ಬಾರಿ ಗೆದ್ದಿರುವೆ. ಮೋದಿ ಅವರು ನನ್ನ ಹಾಗೂ ಪಕ್ಷದ ಪಾಲಿಗೆ ದೇವರಿದ್ದಂತೆ. ಮೂರನೇ ಬಾರಿಯೂ ಮೋದಿ ಹೆಸರಿನಲ್ಲೇ ಗೆಲ್ಲುತ್ತೇನೆ. ಜತೆಗೆ ಪಕ್ಷದ ವಿಶ್ವಾಸ ನನ್ನ ಮೇಲಿದೆ. ನನಗೆಮತ್ತೊಂದು ಅವಕಾಶ ಸಿಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ
Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ
Pegasus spyware ಬಗ್ಗೆ ಸುಪ್ರೀಂಕೋರ್ಟ್ ತನಿಖೆ ನಡೆಸಲಿ: ಸುರ್ಜೇವಾಲಾ
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.