ರಾಜ್ಯಾದ್ಯಂತ 33 ಬ್ರೈನ್ ಹೆಲ್ತ್ ಕ್ಲಿನಿಕ್; ನರಸಂಬಂಧಿ ರೋಗಗಳಿಗೆ ಉಚಿತ ಚಿಕಿತ್ಸೆ
ಸಮಗ್ರ ಆರೈಕೆ ಲಭ್ಯ
Team Udayavani, Mar 12, 2024, 1:05 AM IST
ಬೆಂಗಳೂರು: ಆರೋಗ್ಯ ಇಲಾಖೆ, ನಿಮ್ಹಾನ್ಸ್ ಸಹಯೋಗದಲ್ಲಿ ಮಿದುಳಿನ ಆರೋಗ್ಯ ಮತ್ತು ಆರೈಕೆ ಸೇವೆಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಬ್ರೈನ್ ಹೆಲ್ತ್ ಇನಿಶಿಯೇಟ್ ಯೋಜನೆಯಡಿ ರಾಜ್ಯಾದ್ಯಂತ ಸ್ಥಾಪಿಸಲಾದ 33 ಬ್ರೈನ್ ಹೆಲ್ತ್ ಕ್ಲಿನಿಕ್’ಗೆ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಸೋಮವಾರ ನಿಮ್ಹಾನ್ಸ್‌ನ ಸಮ್ಮೇಳನ ಸಭಾಂಗಣದಲ್ಲಿ ಚಾಲನೆ ನೀಡಿದರು.
ಬೆಂಗಳೂರು ಕೆಸಿ ಜನರಲ್, ಜಯನಗರ ಹಾಗೂ ಆನೇಕಲ್ ತಾಲೂಕಿನ ಆಸ್ಪತ್ರೆಯಲ್ಲಿ ಸೇರಿ ರಾಜ್ಯದ ಇತರ 30 ಜಿಲ್ಲೆಗಳಲ್ಲಿ ತಲಾ ಒಂದರಂತೆ ಒಟ್ಟು 33 ಬ್ರೈನ್ ಹೆಲ್ತ್ ಕ್ಲಿನಿಕ್‌ಗಳನ್ನು 25 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ನರ ಸಂಬಂಧಿಸಿದ ಕಾಯಿಲೆಗಳಾದ ಪಾರ್ಶ್ವವಾಯು, ತಲೆನೋವು, ಅಪಸ್ಮಾರ, ಇತರ ನರ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳಿಗೆ ಉಚಿತವಾಗಿ ಗುಣಮಟ್ಟದ ಚಿಕಿತ್ಸೆ ಸಿಗಲಿದೆ.
ನರ ರೋಗಿಗಳಿಗೆ ಚಿಕಿತ್ಸೆ ನೀಡಲು ಅಗತ್ಯವಿರುವ ಎಂಆರ್, ಸಿಟಿ ಸ್ಕ್ಯಾನಿಂಗ್, ರಕ್ತ ಪರೀಕ್ಷೆ ಸೇರಿದಂತೆ ಇತರ ಆಯ್ದ ಲ್ಯಾಬೋರೇಟರಿ ಸೇವೆಗಳು ಸರಕಾರಿ ಜಿಲ್ಲಾಸ್ಪತ್ರೆಗಳಲ್ಲಿಯೇ ಇವೆ. ಇದರಿಂದಾಗಿ ರೋಗಿಗಳಿಗೆ ತುರ್ತು ಚಿಕಿತ್ಸೆ ಸಿಗುವುದರಿಂದ ಜೀವ ಉಳಿಸಲು ಸಾಧ್ಯವಿದೆ. ಇಲ್ಲಿ ರೋಗಿಗಳಿಗೆ ಅಗತ್ಯವಿರುವ ಸಮಾಲೋಚನೆ, ಫಿಸಿಯೋಥೆರಪಿ, ಸ್ಪೀಚ್ ಥೆರಪಿ, ಪುನರ್ವಸತಿ ಹಾಗೂ ಸಮಗ್ರ ಆರೈಕೆ ಲಭ್ಯವಿದೆ. ಇನ್ನೂ ಮಿದುಳಿನಲ್ಲಿ ರಕ್ತ ಹೆಪ್ಪುಗಟ್ಟುವುದು ಸೇರಿ ಇತರ ಕ್ಲಿಷ್ಟಕರವಾದ ನರ ರೋಗದ ಚಿಕಿತ್ಸೆಗೆ ತೃತೀಯ ಹಂತ (ಸ್ಪೆಶಲಿಸ್ಟ್) ಆಸ್ಪತ್ರೆಗೆ ಕಳುಹಿಸಿಕೊಡಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ಕಾಂಗ್ರೆಸ್-ಮುಸ್ಲೀಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
MUST WATCH
ಹೊಸ ಸೇರ್ಪಡೆ
Shimoga; ಕಾಂಗ್ರೆಸ್-ಮುಸ್ಲೀಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
Manipal: ನಿತ್ಯ ಅಪಘಾತ ತಾಣವಾದ ಈಶ್ವರ ನಗರ-ಪರ್ಕಳ ರಸ್ತೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.