Kolar: ಕುರ್ಚಿಗೆ ಅಧಿಕಾರಿಗಳಿಬ್ಬರ ತಿಕ್ಕಾಟ; ಕೆಲಸ ಸ್ಥಗಿತ


Team Udayavani, Mar 12, 2024, 2:34 PM IST

Kolar: ಕುರ್ಚಿಗೆ ಅಧಿಕಾರಿಗಳಿಬ್ಬರ ತಿಕ್ಕಾಟ; ಕೆಲಸ ಸ್ಥಗಿತ

ಕೋಲಾರ: ಬರಪೀಡಿತ ಜಿಲ್ಲೆಯ ಗ್ರಾಮೀಣ ಭಾಗಕ್ಕೆ ಯುದ್ಧದೋಪಾದಿಯಲ್ಲಿ ಕುಡಿಯುವ ನೀರನ್ನು ಪೂರೈಕೆ ಮಾಡಲು ಶ್ರಮಿಸಬೇಕಾಗಿದ್ದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಚೇರಿಯು ಕಾಂಗ್ರೆಸ್‌ ಶಾಸಕರಿಬ್ಬರು ಮತ್ತು ಇಬ್ಬರು ಅಧಿಕಾರಿಗಳ ಪ್ರತಿಷ್ಠೆಯ ತಿಕ್ಕಾಟಕ್ಕೆ ಸಿಲುಕಿ ಕೆಲಸಕಾರ್ಯಗಳನ್ನೇ ಸ್ಥಗಿತಗೊಳಿಸಿದೆ.

ವಾರದಿಂದಲೂ ಕೋಲಾರ ಜಿಲ್ಲೆಯ ಗ್ರಾಮೀಣ ಕುಡಿಯುವ ನೀರಿನ ಯೋಜನೆಗಳು ಉಸ್ತುವಾರಿ ಇಲ್ಲದೆ ನನೆಗುದಿಗೆ ಬಿದ್ದಿದ್ದು, ಇಬ್ಬರು ಅಧಿಕಾರಿಗಳ ತಿಕ್ಕಾಟವನ್ನು ಬಗೆಹರಿಸಬೇಕಾಗಿದ್ದ ಜಿಪಂ ಅಧಿಕಾರಿಗಳು ಮೇಲಿನ ಒತ್ತಡ ಹಾಗೂ ಪ್ರಭಾವಕ್ಕೊಳಗಾಗಿ ಮೌನಕ್ಕೆ ಶರಣಾಗಿರುವುದು ಪರಿಸ್ಥಿತಿಯ ವಿಕೋಪಕ್ಕೆ ಸಾಕ್ಷಿಯಾಗಿದೆ.

ಪ್ರಭಾರ ಅಧಿಕಾರ: ಕೋಲಾರ ಮತ್ತು ಮಾಲೂರು ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತ ಜಬೀವುಲ್ಲಾ ಅವರನ್ನು ಖಾಲಿಯಾಗಿದ್ದ ಕಾರ್ಯಪಾಲಕ ಅಭಿಯಂತರ ಹುದ್ದೆಯಲ್ಲಿ ಪ್ರಭಾರವಾಗಿ ನಿಯೋಜಿಸಲಾಗಿತ್ತು. ಜಬೀವುಲ್ಲಾ ಖಾಲಿ ಇರುವ ಕಾರ್ಯಪಾಲಕ ಅಭಿಯಂತರ ಹುದ್ದೆಯ ಜವಾಬ್ದಾರಿ ಹೊತ್ತುಕೊಂಡು ನಿಭಾಯಿಸುತ್ತಿದ್ದರು. ಜಿಲ್ಲಾದ್ಯಂತ ನಡೆಯುತ್ತಿರುವ ಜಲ ಜೀವನ್‌ ಮಿಷನ್‌ ಕಾಮಗಾರಿಗಳು ಸೇರಿ ಗ್ರಾಮೀಣ ಕುಡಿಯುವ ನೀರಿನ ಇನ್ನಿತರ ಜವಾಬ್ದಾರಿಗಳನ್ನು ನಿರ್ವಹಿಸುತ್ತಿದ್ದರು.

ಮತ್ತೂಬ್ಬ ಅಧಿಕಾರಿ: ಇಂತಹ ಸಮಯದಲ್ಲಿ ಕೋಲಾರ ಜಿಲ್ಲೆಯಲ್ಲಿ ಖಾಲಿ ಇದ್ದ ಕಾರ್ಯಪಾಲಕ ಅಭಿಯಂತರ ಹುದ್ದೆಗೆ ಸರ್ಕಾರವು ಅಮರಪ್ಪ ಎಂ. ಹೊಸಕೋಟೆ ಎಂಬ ಅಧಿಕಾರಿಯನ್ನು ವರ್ಗಾವಣೆ ಮಾಡಿದೆ. ಮಾ.4ರಂದು ಸರ್ಕಾರದ ವರ್ಗಾವಣೆ ಆದೇಶ ಹಿಡಿದುಕೊಂಡು ಅಮರಪ್ಪ ಕೋಲಾರಕ್ಕೆ ಆಗಮಿಸಿದ್ದಾರೆ. ಹೀಗೆ ಆಗಮಿಸಿದವರೇ ಸರ್ಕಾರದ ವರ್ಗಾವಣೆ ಆದೇಶದ ಅನ್ವಯ ಕಚೇರಿ ಜವಾಬ್ದಾರಿ ಸ್ವೀಕರಿಸಲು ಮುಂದಾಗಿದ್ದಾರೆ. ಆದರೆ, ಪ್ರಭಾರ ಅಧಿಕಾರದಲ್ಲಿದ್ದ ಜಬೀವುಲ್ಲಾ ಇದಕ್ಕೆ ಸಹಕರಿಸಿಲ್ಲ. ಆದರೂ, ಅಮರಪ್ಪ ಸ್ವಯಂ ಅಧಿಕಾರ ಸ್ಪೀಕರಿಸಿದ್ದಾರೆ.

ತಗಾದೆ ಶುರು: ಇಬ್ಬರೂ ಅಧಿಕಾರಿಗಳು ಒಂದೇ ಕಚೇರಿಯಲ್ಲಿ ಕೆಲಸ ಮಾಡಲು ಮುಂದಾಗಿದ್ದರಿಂದ ಪ್ರಭಾರ ಹಾಗೂ ಖಾಯಂ ಅಧಿಕಾರಿ ನಡುವೆ ತಗಾದೆ ಶುರುವಾಗಿದೆ. ಇದರ ನೇರ ಪರಿಣಾಮ ಗ್ರಾಮೀಣ ಕುಡಿಯುವ ನೀರಿನ ಕಾಮಗಾರಿಗಳ ನಿರ್ವಹಣೆಯ ಮೇಲೆ ಬಿದ್ದಿದೆ. ಪ್ರಭಾರ ಅಧಿಕಾರಿಯ ಅಸಹಕಾರದಿಂದಾಗಿ ಕಾಯಂ ಅಧಿಕಾರಿ ಕಚೇರಿ ನಿರ್ವಹಣೆಯ ಕೀ ಪಡೆದುಕೊಳ್ಳಲಾಗುತ್ತಿಲ್ಲ. ಜೊತೆಗೆ ಕಾಮಗಾರಿ ಬಿಲ್‌ಗ‌ಳನ್ನು ಪಾಸ್‌ ಮಾಡಲು ಖಜಾನೆಯಲ್ಲಿ ಥಂಬ್‌ ನೀಡಲು ಆಗದಂತಾಗಿದೆ. ಇದೇ ಪರಿಸ್ಥಿತಿ ವಾರದಿಂದಲೂ ಇರುವುದರಿಂದ ಕಚೇರಿಯ ಎಲ್ಲಾ ಕೆಲಸ ಕಾರ್ಯಗಳು ಇಬ್ಬರು ಅಧಿಕಾರಿಗಳ ಕಿತ್ತಾಟದಲ್ಲಿ ಬಡವಾದಂತಾಗಿದೆ.

ರಾಜಕೀಯ ಲಾಬಿ: ಇಬ್ಬರೂ ಅಧಿಕಾರಿಗಳು ಜಿಲ್ಲೆಯ ಇಬ್ಬರು ಪ್ರಭಾವಿ ಶಾಸಕರ ಬೆಂಬಲದೊಂದಿಗೆ ತಮ್ಮದೇ ಆದ ನಿಲುವನ್ನು ತೆಗೆದುಕೊಳ್ಳುತ್ತಿದ್ದಾರೆಂದು ಹೇಳಲಾಗುತ್ತಿದೆ. ಪ್ರಭಾರ ಅಧಿಕಾರಿ ಜಬೀವುಲ್ಲಾರಿಗೆ ಮುಖ್ಯಮಂತ್ರಿಗೆ ಹತ್ತಿರವಾಗಿರುವ ಶಾಸಕರ ಬೆಂಬಲವಿದೆ. ಹಾಗೆಯೇ ಅಮರಪ್ಪ ಎಂ. ಹೊಸಕೋಟೆ ಜಿಲ್ಲೆಯ ಮತ್ತೂಬ್ಬ ಹಿರಿಯ ಶಾಸಕರ ಬೆಂಬಲದೊಂದಿಗೆ ವರ್ಗಾವಣೆ ಮಾಡಿಸಿಕೊಂಡು ಬಂದಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಹೀಗಾಗಿ ಕಾಂಗ್ರೆಸ್‌ ಪ್ರಭಾವಿ ಶಾಸಕರಿಬ್ಬರ ನಡುವೆ ಅಧಿಕಾರಿಗಳ ಕಿತ್ತಾಟ ಪರೋಕ್ಷ ಹಗ್ಗಜಗ್ಗಾಟವಾಗಿ ಮಾರ್ಪಟ್ಟಿದೆ.

ಕೆಲಸ ಸ್ಥಗಿತ: ಇಬ್ಬರು ಅಧಿಕಾರಿಗಳ ತಿಕ್ಕಾಟದಿಂದ ಕುಡಿಯುವ ನೀರಿನ ಕಾಮಗಾರಿಗಳು, ಜಲ ಜೀವನ್‌ ಮಿಷನ್‌ ಯೋಜನೆಯು ನನೆಗುದಿಗೆ ಬೀಳುವಂತಾಗಿದೆ. ಈಗಾಗಲೇ ಜಿಲ್ಲೆಯಲ್ಲಿ ಗುತ್ತಿಗೆದಾರರು ನಿರ್ವಹಿಸುತ್ತಿರುವ ಕುಡಿಯುವ ನೀರಿನ ಕಾಮಗಾರಿಗಳ 75 ಕೋಟಿ ರೂ. ಬಾಕಿ ಇದೆ. ಸರ್ಕಾರ 20 ದಿನಗಳ ಹಿಂದಷ್ಟೇ 15 ಕೋಟಿ ರೂ. ಬಿಡುಗಡೆಯೂ ಮಾಡಿದೆ. ಆದರೆ, ಹಣ ಗುತ್ತಿಗೆದಾರರಿಗೆ ಬಿಡುಗಡೆ ಮಾಡಿ ಕಾಮಗಾರಿಗಳ ಕೆಲಸ ಚುರುಕುಗೊಳಿಸಲು ಆಗುತ್ತಿಲ್ಲ. ಕಚೇರಿ ಕಾರ್ಯಗಳು ಸ್ಥಗಿತಗೊಂಡಿವೆ. ವಾರದಿಂದಲೂ ಇಬ್ಬರು ಅಧಿಕಾರಿಗಳ ಪೈಪೋಟಿಯಲ್ಲಿ ಕಚೇರಿ ಕೆಲಸಗಳು ಅನಾಥವಾಗುವಂತಾಗಿದೆ.

ಜಿಲ್ಲಾ ಪಂಚಾಯ್ತಿ ಮೌನಕ್ಕೆ ಶರಣು: ವಾರದಿಂದಲೂ ಇಬ್ಬರು ಶಾಸಕರ ಬೆಂಬಲದೊಂದಿಗೆ ಇಬ್ಬರು ಅಧಿ ಕಾರಿ ಗಳು ಅಧಿಕಾರಕ್ಕಾಗಿ ನಡೆಸುತ್ತಿರುವ ತಿಕ್ಕಾಟದಲ್ಲಿ ಜಿಪಂ ಅಧಿಕಾರಿಗಳು ವಾರದಿಂದಲೂ ಯಾವುದೇ ಕ್ರಮವಹಿಸಿಲ್ಲ ಎಂಬ ಆರೋಪವಿದೆ. ಸರ್ಕಾರದ ಹಂತದಲ್ಲಿ ಇಬ್ಬರೂ ಶಾಸಕರು ಪ್ರಭಾವಿಗಳೇ ಆಗಿರುವುದರಿಂದ ಸರ್ಕಾರದ ಹಂತದಲ್ಲಿಯೇ ಈ ಸಮಸ್ಯೆ ಬಗೆಹರಿಯಲಿ ಎಂದು ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು ಕಾಯುತ್ತಿರುವಂತಿದೆ. ಶಾಸಕರು, ಅಧಿಕಾರಿಗಳ ಕಿತ್ತಾಟದಲ್ಲಿ ಕೋಲು ಮುರಿಯುತ್ತಿಲ್ಲ, ಹಾವು ಸಾಯುತ್ತಿಲ್ಲ ಎಂಬಂತಾಗಿದೆ.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಕೋಲಾರ ಮತ್ತು ಮಾಲೂರು ಸಹಾಯಕ ಕಾರ್ಯಪಾಲಕ ಅಭಿಯಂತರಾಗಿದ್ದ ಜಬೀವುಲ್ಲಾ ಜವಾಬ್ದಾರಿ ಹೊತ್ತುಕೊಂಡಿದ್ದರು. ಈಗ ಸರ್ಕಾರ ಕಾರ್ಯಪಾಲಕ ಅಭಿಯಂತರರನ್ನು ವರ್ಗಾವಣೆ ಮಾಡಿದೆ. ಅವರೇ ಕಚೇರಿ ಜವಾಬ್ದಾರಿ ಹೊತ್ತುಕೊಳ್ಳಬೇಕಾಗುತ್ತದೆ. ಖಜಾನೆಯಲ್ಲಿ ಹೊಸ ಅಧಿಕಾರಿ ಕಾರ್ಯನಿರ್ವಹಣೆಗೆ ಅನುವಾಗುವಂತೆ ಮಾಡಲು ಸೂಚಿಸಿದ್ದೇನೆ. ಆನಾರೋಗ್ಯ ಕಾರಣ ತಾವು ಕಚೇರಿಗೆ ಬಂದಿಲ್ಲ. ಮಂಗಳವಾರ ಎಲ್ಲವನ್ನೂ ಸರಿಪಡಿಸುತ್ತೇನೆ. ● ಪದ್ಮಬಸವಂತಪ್ಪ, ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಜಿಪಂ, ಕೋಲಾರ

ಕೆ.ಎಸ್‌.ಗಣೇಶ್‌

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

TDP ಮುಖಂಡನ ಹತ್ಯೆಗೆ ನೆರವು: ಇಬ್ಬರು ಪೊಲೀಸರ ಅಮಾನತು

Ration Card: 1.25 ಲಕ್ಷ ಪಡಿತರ ಚೀಟಿ ಅನರ್ಹ ಸಾಧ್ಯತೆ!

Ration Card: 1.25 ಲಕ್ಷ ಪಡಿತರ ಚೀಟಿ ಅನರ್ಹ ಸಾಧ್ಯತೆ!

14-bng

Kolar: 1.25 ಲಕ್ಷ ಅನರ್ಹ ಬಿಪಿಎಲ್‌ ಕಾರ್ಡ್‌ಗಳು ಪತ್ತೆ

CM-Dineh

Eagles Eye: ಭ್ರೂಣಲಿಂಗ ಪತ್ತೆ ತಡೆಗೆ ಸ್ಕ್ಯಾನಿಂಗ್‌ ಸೆಂಟರ್‌ಗಳ ಮೇಲೆ ನಿಗಾ: ದಿನೇಶ್‌

Benga-Club

Bengaluru Press Club: ಸುದ್ದಿಗೋಷ್ಠಿ ನಡುವೆಯೇ ಮೃತಪಟ್ಟ ಕಾಂಗ್ರೆಸ್‌ ಕಾರ್ಯಕರ್ತ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.