Kollywood: ಅಲ್ಲು ಅರ್ಜುನ್ ಜೊತೆ ಅಟ್ಲಿ ಸಿನಿಮಾ; ನಿರ್ದೇಶನ ಮಾಡಲು ಅತೀ ಹೆಚ್ಚು ಸಂಭಾವನೆ?
Team Udayavani, Mar 12, 2024, 4:14 PM IST
ಚೆನ್ನೈ: ಕಾಲಿವುಡ್ ನಿರ್ದೇಶಕ ಅಟ್ಲಿ ಕುಮಾರ್ ಕಳೆದ ವರ್ಷ ʼಜವಾನ್ʼ ಮೂಲಕ ಬಾಲಿವುಡ್ ನಲ್ಲೂ ಯಶಸ್ಸು ಸಾಧಿಸಿದ್ದರು. ʼಜವಾನ್ʼ ಸಿನಿಮಾ 1,100 ಕೋಟಿಗೂ ಅಧಿಕ ಗಳಿಕೆ ಕಾಣುವ ಮೂಲಕ ವರ್ಲ್ಡ್ ವೈಡ್ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಸದ್ದು ಮಾಡಿತ್ತು.
ಶಾರುಖ್ ಖಾನ್, ನಯನತಾರಾ ದೀಪಿಕಾ ಪಡುಕೋಣೆ ʼಜವಾನ್ʼ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈ ಸಿನಿಮಾದ ಬಳಿಕ ಅಟ್ಲಿ ಅವರ ಬೇಡಿಕೆ ಮತ್ತಷ್ಟು ಹೆಚ್ಚಾಗಿದೆ. ಸೋಲಿಲ್ಲದ ಸರದಾರನಾಗಿ ಅಟ್ಲಿ ಮುನ್ನುಗ್ಗುತ್ತಿದ್ದಾರೆ.
ಅಟ್ಲಿ ಮುಂದೆ ದಳಪತಿ ವಿಜಯ್ ಅವರೊಂದಿಗೆ ಸಿನಿಮಾ ಮಾಡಲಿದ್ದಾರೆ ಎನ್ನಲಾಗಿತ್ತು. ಆದರೆ ಇದೀಗ ಅಟ್ಲಿ ಟಾಲಿವುಡ್ ಸೂಪರ್ ಸ್ಟಾರ್ ಅಲ್ಲು ಅರ್ಜುನ್ ಅವರೊಂದಿಗೆ ಸಿನಿಮಾ ಮಾಡಲಿದ್ದಾರೆ ಎಂದು ವರದಿ ಆಗಿದೆ.
ಈ ಸಿನಿಮಾಕ್ಕಾಗಿ ಸನ್ ಪಿಕ್ಚರ್ಸ್ ಕೈಜೋಡಿಸಿದ್ದು, ಸಿನಿಮಾವನ್ನು ನಿರ್ಮಾಣ ಮಾಡಲಿದೆ. ಇದಕ್ಕಾಗಿ ಅಟ್ಲಿ 60 ಕೋಟಿ ಸಂಭಾವನೆ ಪಡೆಯಲಿದ್ದಾರೆ. ಇದು ಕಾಲಿವುಡ್ ನಿರ್ದೇಶಕನೊಬ್ಬ ಪಡೆಯುವ ಅತೀ ಹೆಚ್ಚು ಸಂಭಾವನೆ ಆಗಲಿದೆ. ಆ ಮೂಲಕ ಖ್ಯಾತ ಕಾಲಿವುಡ್ ನಿರ್ದೇಶಕ ಎಸ್. ಶಂಕರ್ ಅವರ ಸಂಭಾವನೆಯನ್ನು ಕೂಡ ಅಟ್ಲಿ ಮೀರಿಸಲಿದ್ದಾರೆ ಎಂದು ವರದಿ ಆಗಿದೆ.
ಈ ಹಿಂದೆ ಎಸ್.ಶಂಕರ್ ಅವರು ಅತೀ ಹೆಚ್ಚು ಸಂಭಾವನೆ ಪಡೆಯುವ ನಿರ್ದೇಶಕರಾಗಿದ್ದರು. ಅಟ್ಲಿ ಅವರು ಎಸ್.ಶಂಕರ್ ಅವರ ಜೊತೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದರು. ಇಂದಿಗೂ ಅಟ್ಲಿ ಶಂಕರ್ ಅವರನ್ನು ಮಾರ್ಗದರ್ಶಕರೆಂದೇ ಗೌರವ ಕೊಟ್ಟು, ಗುರುವಿನ ಸ್ಥಾನದಲ್ಲಿ ಇಟ್ಟಿದ್ದಾರೆ.
ಸದ್ಯ ಅಲ್ಲು ಅರ್ಜುನ್ ಜೊತೆಗಿನ ಸಿನಿಮಾದ ಸ್ಕ್ರಿಪ್ಟ್ ಕೆಲಸ ಆರಂಭವಾಗಿದ್ದು, ಅಂತಿಮ ಹಂತದ ಮಾತುಕತೆ ನಡೆಯುತ್ತಿದೆ ಎಂದು ವರದಿ ತಿಳಿಸಿದೆ.
ಅಟ್ಲಿ ಅವರ ʼತೇರಿʼ ಸಿನಿಮಾ ರಿಮೇಕ್ ಆಗಿ ಹಿಂದಿಯಲ್ಲಿ ಬರುತ್ತಿದೆ. ಇದಕ್ಕೆ ʼಬೇಬಿ ಜಾನ್ʼ ಎಂದು ಟೈಟಲ್ ಇಡಲಾಗಿದೆ. ಈ ಸಿನಿಮಾಕ್ಕೆ ಅಟ್ಲಿ ನಿರ್ಮಾಪಕರಾಗಿ ಕೈಜೋಡಿಸಿದ್ದಾರೆ. ಸಿನಿಮಾದಲ್ಲಿ ವರುಣ್ ಧವನ್ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Marco: ಕೋಟಿ ಕೋಟಿ ಗಳಿಕೆ ಕಾಣುತ್ತಿರುವ ʼಮಾರ್ಕೊʼಗೆ ಪೈರಸಿ ಕಾಟ; ಹೆಚ್ ಡಿ ಪ್ರಿಂಟ್ ಲೀಕ್
ಕೋಮಾದಲ್ಲಿದ್ದ ನನ್ನ ಮಗನ ನೆನಪಿನ ಶಕ್ತಿ ಮರಳಲು ದಳಪತಿ ವಿಜಯ್ ಕಾರಣವೆಂದ ಖ್ಯಾತ ನಟ
Mollywood: 13 ವರ್ಷದ ಬಳಿಕ ರೀ- ರಿಲೀಸ್ ಆಗಲಿದೆ ಸೂಪರ್ ಹಿಟ್ ʼಉಸ್ತಾದ್ ಹೊಟೇಲ್ʼ
Malayalam; ಹೋಟೆಲ್ ರೂಂನಲ್ಲಿ ಶ*ವವಾಗಿ ಪತ್ತೆಯಾದ ಖ್ಯಾತ ನಟ ದಿಲೀಪ್ ಶಂಕರ್
Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.