Stamp paper: ರೈತರು, ಜನರಿಗೆ ಛಾಪಾಕಾಗದ ದರ ಏರಿಕೆ ಬರೆ


Team Udayavani, Mar 12, 2024, 5:56 PM IST

Stamp paper: ರೈತರು, ಜನರಿಗೆ ಛಾಪಾಕಾಗದ ದರ ಏರಿಕೆ ಬರೆ

ಚನ್ನರಾಯಪಟ್ಟಣ: ಬರದಿಂದ ಬೆಂದು ಹೋಗಿರುವ ರೈತರು ಹಾಗೂ ತಾಲೂಕಿನ ಜನತೆ ಜೀವನ ನಡೆಸಲು ಹೆಣಗಾಡುತ್ತಿದ್ದಾರೆ. ಇಂತಹ ಸಂದಿಗ್ಧ ಸಂದರ್ಭದಲ್ಲಿ ಸರ್ಕಾರ ಛಾಪಾ ಕಾಗದ ದರವನ್ನು ಐದು ಪಟ್ಟು ಹೆಚ್ಚಳ ಮಾಡಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಅದರಲ್ಲೂ ದರ ಕುಸಿತದಿಂದ ಕೊಬ್ಬರಿ ಬೆಳೆಗಾರರು ಕಂಗಾಲಾಗಿದ್ದಾರೆ.

ಚುನಾವಣೆಗೂ ಮುನ್ನ ರಾಜ್ಯದ ಜನತೆಗೆ ನೀಡಿದ ಪಂಚ ಗ್ಯಾರಂಟಿಗಳನ್ನು ಈಡೇರಿಸಲು ವಿತ್ತೀಯ ಕೊರತೆ ಸರಿದೂಗಿಸಲು ರಾಜ್ಯ ಸರ್ಕಾರ ಹೆಣಗಾಡುತ್ತಿದೆ. ಆದಾಯ ಹೆಚ್ಚಿಸಿಕೊಳ್ಳಲು ಈಗಾಗಲೇ ಮುಂದ್ರಾಂಕ ಹಾಗೂ ನೋಂದಣಿ ಶುಲ್ಕ ಹೆಚ್ಚಿಸಿದೆ. ಇದೀಗ ಬಾಂಡ್‌ ಪೇಪರ್‌ (ಛಾಪಾ ಕಾಗದ) ಮೇಲೆ ರಾಜ್ಯ ಸರ್ಕಾರದ ಕಣ್ಣು ಬಿದ್ದಿದ್ದು, ಎಲ್ಲ ವಿಧದ ಗ್ರಾಹಕರು ಹಾಗೂ ಸಾರ್ವಜನಿಕರಿಗೆ ಭಾರೀ ಹೊರೆಯಾಗಿದೆ. ಮೊದಲೇ ಕೊಬ್ಬರಿ ಬೆಲೆ ನೆಲ ಕಚ್ಚಿದೆ, ಬೆಂಬಲ ಬೆಲೆಯಲ್ಲಿ ಕೊಬ್ಬರಿ ಖರೀದಿ ಮಾಡುವಲ್ಲಿ ಸಾಕಷ್ಟು ಲೋಪಗಳಾಗಿವೆ. ಇಂತಹ ವೇಳೆ ಕೃಷಿಕರು ಬದುಕುವುದೇ ಸವಾಲಾಗಿದೆ. ದಿನಸಿ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದ್ದು ಜೀವನ ವೆಚ್ಚ ದುಬಾರಿಯಾಗಿದೆ. ಈಗ ಬಾಂಡ್‌ಗೆ ಹೆಚ್ಚಿನ ತೆರಬೇಕಿದೆ.

ಸಮಸ್ಯೆ ಏನು?: ಜಿಲ್ಲೆಯಲ್ಲಿ ಹೆಚ್ಚು ಜಮೀನಿನ ವ್ಯವಹಾರ, ಬಾಡಿಗೆ, ಭೋಗ್ಯ ಸೇರಿದಂತೆ ಸಾಕಷ್ಟು ವ್ಯವಹಾರಗಳು ಛಾಪಾ ಕಾಗದದಿಂದ ನಡೆಯುತ್ತಿದೆ. 20 ರೂ. ಛಾಪಾ ಕಾಗದ ಪಡೆದು 100 ರೂ. ವೆಚ್ಚ ಮಾಡಿ ತಮ್ಮ ವ್ಯವಹಾರ ಮಾಡಿಕೊಳ್ಳುತ್ತಿದ್ದರು. ಈಗ ಛಾಪಾ ಕಾಗದಕ್ಕೆ 100 ರೂ. ಕೊಡಬೇಕು. ಇದನ್ನು ನೋಟರಿ ಮಾಡಿಸುವ ಹೊತ್ತಿಗೆ ಕನಿಷ್ಠ 300 ರೂ. ವೆಚ್ಚವಾಗಲಿದೆ.

5 ಪಟ್ಟು ದರ ಹೆಚ್ಚಳ: ಸಾಮಾನ್ಯವಾಗಿ ಚಿಕ್ಕಪುಟ್ಟ ವ್ಯವಹಾರಗಳಿಗೆ ಹಾಗೂ ಸರ್ಕಾರಿ ಯೋಜನೆಗಳ ಪಡೆಯಲು 20 ರೂ. ಸ್ಟಾಂಪ್‌ ಪೇಪರ್‌ ಬಳಸಲಾಗುತ್ತಿತ್ತು. ಇದೀಗ ಛಾಪಾ ಕಾಗದ ದರ ಕನಿಷ್ಠ 100 ರೂ. ಆಗಿದೆ. ಜತೆಗೆ ಶೇ.0.1 ರಷ್ಟಿದ್ದ ಶುಲ್ಕವನ್ನು ಶೇ.0.5ರಷ್ಟು ಹೆಚ್ಚಿಸಿದೆ. ವಿವಿಧ ಪ್ರಾಧಿಕಾರದಿಂದ ಕೇಳಲ್ಪಡುವ ಮುಚ್ಚಳಿಕೆ ಪತ್ರ, ಜನನ-ಮರಣ ಪ್ರಮಾಣ ಪತ್ರ, ಮೂಲ ದಾಖಲೆ ಪಡೆಯಲು, ಕೋರ್ಟ್‌ ಅಫಿಡವಿಟ್‌ ಸಲ್ಲಿಸಲು ಇನ್ನು ಮುಂದೆ 100 ರೂ. ಸ್ಟಾಂಪ್‌ ಕಡ್ಡಾಯವಾಗಿದೆ.

ಬಹುತೇಕ ಕೆಲಸಕ್ಕೂ 100 ರೂ. ಬಾಂಡ್‌ :

ಮುಚ್ಚಳಿಕೆ ಪತ್ರ, ಪ್ರಮಾಣ ಪತ್ರ, ಮಾಸಾಶನ, ಶಿಷ್ಯವೇತನ, ವಸತಿ ಶಾಲೆಗಳ ಪ್ರವೇಶ, ಕಾರ್ಮಿಕ ಇಲಾಖೆಯಲ್ಲಿ ಕಟ್ಟಡ ಕಾರ್ಮಿಕರು ಪಡೆಯುವ ಸವಲತ್ತುಗಳು, ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ರೈತರು ಪಡೆಯುವ ಸಾಲ, ಪಡೆದ ಸಾಲ ನವೀಕರಣ ಹಾಗೂ ಬೀದಿ ಬದಿ ವ್ಯಾಪಾರಸ್ಥರು ಸಣ್ಣ ಪುಟ್ಟ ಬ್ಯಾಂಕ್‌ ಲೋನ್‌ ಪಡೆಯಲು, ಮನೆಯ ಬಾಡಿಗೆ, ಭೋಗ್ಯ ಸೇರಿದಂತೆ ಹಲವು ಕೆಲಸಗಳಿಗೆ ಈ ಮೊದಲು ಛಾಪ ಕಾಗದಕ್ಕೆ 20 ರೂ..ನಿಂದ 50 ರೂ. ಪಾವತಿಸಬೇಕಿತ್ತು. ಇದೀಗ ಅವುಗಳ ಮೂಲ ದರ 100 ರೂ., ನಿಂದ 500 ಕ್ಕೇರಿದ್ದು, ಚಿಕ್ಕಪುಟ್ಟ ಕೆಲಸಕ್ಕೂ 100 ರೂ. ಮುಖಬೆಲೆಯ ಬಾಂಡ್‌ ಖರೀದಿಸಬೇಕಾದ ಅನಿವಾರ್ಯತೆ ಎದುರಾಗಿದೆ.

ಛಾಪಾ ಕಾಗದ ದರ ಐದು ಪಟ್ಟು ಹೆಚ್ಚಳ ಮಾಡಿರುವುದು ಸಾರ್ವಜನಿಕರಿಗೆ ಭಾರೀ ಹೊರೆಯಾಗಿದೆ. ರಾಜ್ಯ ಸರ್ಕಾರ ಮುದ್ರಾಂಕ, ನೋಂದಣಿ ಶುಲ್ಕ ಏರಿಕೆ ಮರುಪರಿಶೀಲನೆ ನಡೆಸಿ ಜನಸಾಮಾನ್ಯರಿಗೆ ಕಡಿಮೆ ದರ ನಿಗದಿ ಮಾಡಬೇಕು. -ಕೇಶವಮೂರ್ತಿ, ವೆಂಡರ್‌

ಕೃಷಿಕರ ಸುಲಭ ವ್ಯವಹಾರಕ್ಕೆ 20 ರೂ. ಸ್ಟಾಂಪ್‌ ಅವಶ್ಯವಿದ್ದವು. ಇದೀಗ ಕನಿಷ್ಠ 100 ರೂ.ಗೆ ಏರಿಕೆ ಮಾಡಿರುವುದು ಖಂಡನೀಯ, ರೈತರಿಗಾದರೂ ಪರ್ಯಾಯ ವ್ಯವಸ್ಥೆ ಮೂಲಕ ಈ ಮೊದಲಿನಂತೆ 20 ರೂ.ಗೆ ಸ್ಟಾಂಪ್‌ ದೊರಕುವ ವ್ಯವಸ್ಥೆ ಮಾಡಬೇಕು. ನಗರದಲ್ಲಿ ಲಕ್ಷಾಂತರ ಹಣ ಕೊಟ್ಟು ನಿವೇಶನ ಮನೆ ಭೋಗ್ಯ ಮಾಡಿಸಿಕೊಳ್ಳುವವರಿಗೆ ತೊಂದರೆ ಇಲ್ಲ. ಕೃಷಿಕರು ಸಣ್ಣ ಪುಟ್ಟ ವ್ಯವಹಾರಕ್ಕೆ ತೊಂದರೆ ಆಗುತ್ತಿದೆ. -ಕಾಂತರಾಜು, ಕೃಷಿಕ, ಕುರುವಂಕ ಗ್ರಾಮ 

-ಶಾಮಸುಂದರ್‌ ಕೆ. ಅಣ್ಣೇನಹಳ್ಳಿ 

ಟಾಪ್ ನ್ಯೂಸ್

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Stock-market-Exchange

NSE, BSE; ಷೇರು ಮಾರುಕಟ್ಟೆಗೆ ನವೆಂಬರ್‌ 20 ರಂದು ರಜೆ ಘೋಷಣೆ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Women-Mesure

Proposes: ಪುರುಷ ಟೈಲರ್‌ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

Hasanmbe

Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!

ಹಾಸನಾಂಬೆ ದರ್ಶನಕ್ಕೆ ವಿಧ್ಯುಕ್ತ ತೆರೆ; 9 ದಿನದಲ್ಲಿ 19 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ

ಹಾಸನಾಂಬೆ ದರ್ಶನಕ್ಕೆ ವಿಧ್ಯುಕ್ತ ತೆರೆ; 9 ದಿನದಲ್ಲಿ 19 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ

Hasanamabe

Devi Temple: ಹಾಸನಾಂಬೆ ದೇವಿ ದರ್ಶನ ಅವ್ಯವಸ್ಥೆ, ಭಕ್ತರ ಆಕ್ರೋಶ: ವಿಶೇಷ ಪಾಸ್‌ ರದ್ದು

HD-Revanna

Hasanambe Temple: ಇಂಥ ಹಲವು ಡಿಸಿಗಳನ್ನು ನೋಡಿದ್ದೇನೆ: ಎಚ್‌.ಡಿ.ರೇವಣ್ಣ ಕಿಡಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

4

Mangaluru: ಗಾಂಜಾ ಮಾರಾಟ; ಇಬ್ಬರು ಯುವಕರ ಬಂಧನ

3

Uppinangady: ಕಬ್ಬಿಣದ ರಾಡಿನಿಂದ ಹಲ್ಲೆ; ದೂರು ದಾಖಲು

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.