![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Mar 12, 2024, 9:57 PM IST
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಲೋಕಸಭಾ ಚುನಾವಣಾ ಹೊತ್ತಲ್ಲೇ ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ.38.75ರಿಂದ ಶೇ.42.5ಕ್ಕೆ ಹೆಚ್ಚಿಸಿ ಆದೇಶ ಹೊರಡಿಸಿದೆ.
2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ ಜನವರಿ 1ರಿಂದಲೇ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇ.38.75ರಿಂದ ಶೇ.42.5ಕ್ಕೆ ಪರಿಷ್ಕರಿಸಿ ಅಂದರೆ ಶೇ.3.75ರಷ್ಟು ಹೆಚ್ಚಳ ಮಾಡಿ ಆದೇಶಿಸಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾಲತಾಣ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.
ಕೇಂದ್ರೀಯ ವೇತನ ಶ್ರೇಣಿಯಲ್ಲಿರುವವರಿಗೆ ಇದು ಶೇ.46ರಿಂದ ಶೇ.50ಕ್ಕೆ (ಶೇ.4) ಹೆಚ್ಚಳವಾಗಿದೆ. ಈ ಬದಲಾವಣೆ ಪ್ರತಿ ವರ್ಷ 1792.71 ಕೋಟಿ ರೂ.ಗಮನಾರ್ಹ ಆರ್ಥಿಕ ಬದ್ಧತೆಯನ್ನು ಪ್ರತಿನಿಧಿಸುತ್ತದೆ. ನಮ್ಮ ಉದ್ಯೋಗಿಗಳಿಗೆ ನಮ್ಮ ಸಮರ್ಪಣೆಯನ್ನು ಪುನರುಚ್ಚರಿಸುತ್ತದೆ ಎಂದು ಸಿಎಂ ಕಚೇರಿ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.
ರಾಜ್ಯ ಸರ್ಕಾರದ ನಿವೃತ್ತಿ ವೇತನದಾರರು ಅಥವಾ ಕುಟುಂಬ ನಿವೃತ್ತಿ ವೇತನವನ್ನು ಪಡೆಯುತ್ತಿರುವಂತಹ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು ಅಥವಾ ಕುಟುಂಬ ನಿವೃತ್ತಿ ವೇತನದಾರರಿಗೂ ಜ.1ರಿಂದ ಜಾರಿಗೆ ಬರುವಂತೆ ಹಾಲಿ ಲಭ್ಯವಿರುವ ತುಟ್ಟಿಭತ್ಯೆಯ ದರಗಳನ್ನು ಮೂಲ ನಿವೃತ್ತಿ ವೇತನ ಅಥವಾ ಕುಟುಂಬ ನಿವೃತ್ತಿ ವೇತನದ ಪ್ರಸಕ್ತ ಶೇ.38.75ರಿಂದ ಶೇ.42.5ಕ್ಕೆ ಹೆಚ್ಚಿಸಲಾಗಿದೆ.
ಯುಜಿಸಿ, ಎಐಸಿಟಿಇ, ಐಸಿಎಆರ್ ವೇತನ ಶ್ರೇಣಿಗಳ ನಿವೃತ್ತ ವೇತನದಾರರಿಗೂ ಈ ಆದೇಶ ಅನ್ವಯಿಸುತ್ತದೆ. ಸರ್ಕಾರದ ಮತ್ತು ಜಿಲ್ಲಾ ಪಂಚಾಯತ್‌ಗಳ ಪೂರ್ಣಾವಧಿ ನೌಕರರಿಗೆ, ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ವರ್ಕ್ ಚಾರ್ಜ್ ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯಾನುದಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ವಿಶ್ವವಿದ್ಯಾಲಯಗಳಲ್ಲಿ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ನೌಕರರಿಗೆ ಈ ಆದೇಶ ಅನ್ವಯಿಸಲಿದೆ ಎಂದು ಆದೇಶದಲ್ಲಿ ಹೇಳಿದ್ದಾರೆ.
ಯುಜಿಸಿ, ಎಐಸಿಟಿಇ, ಐಸಿಎಆರ್ ವೇತನ ಶ್ರೇಣಿಗಳಲ್ಲಿ ಹಾಲಿ ವೇತನ ಪಡೆಯುತ್ತಿರುವ ನೌಕರರಿಗೆ ಮತ್ತು ಎನ್‌ಜೆಪಿಸಿ ವೇತನ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಆದೇಶ ಹೊರಡಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
5.20 ಲಕ್ಷ ಸರ್ಕಾರಿ ನೌಕರರಿಗೆ ಅನುಕೂಲ
ರಾಜ್ಯ ಸರ್ಕಾರಿ ನೌಕರರಿಗೆ ಶೇ.3.75 ರಷ್ಟು ತುಟ್ಟಿಭತ್ಯೆ ಬಿಡುಗಡೆ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ರಾಜ್ಯ ಸರ್ಕಾರಿ ನೌಕರರ ಪರವಾಗಿ ಅಭಿನಂದನೆ ಸಲ್ಲಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಂಘದ ಮನವಿಗೆ ಸರ್ಕಾರ ಸ್ಪಂದಿಸಿದೆ. ಸರ್ಕಾರದ ಈ ಆದೇಶದಿಂದಾಗಿ ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸುಮಾರು 5.20ಲಕ್ಷ ಸರ್ಕಾರಿ ನೌಕರರಿಗೆ, ನಿಗಮ- ಮಂಡಳಿ-ಅನುದಾನಿತ ಸಂಸ್ಥೆಗಳ ಸುಮಾರು 3 ಲಕ್ಷ ನೌಕರರು, ಸುಮಾರು 4.5 ಲಕ್ಷ ನಿವೃತ್ತ ನೌಕರರಿಗೆ ಅನುಕೂಲವಾಗಲಿದೆ ಎಂದಿದ್ದಾರೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.