ರಾಜ್ಯ ಮಟ್ಟದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಸ್ವೀಕರಿಸಿದ ಸವಣೂರಿನ ಶಾರದಾ ಮಾಲೆತ್ತಾರು
Team Udayavani, Mar 13, 2024, 9:39 AM IST
ಸವಣೂರು: ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ನೀಡುವ ರಾಜ್ಯ ಮಟ್ಟದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ದ.ಕ.ಜಿಲ್ಲೆಯ ಕಡಬ ತಾಲೂಕಿನ ಸವಣೂರು ಗ್ರಾಮದ ಮಾಲೆತ್ತಾರಿನ ಶಾರದಾ ಎಂ.ಭಾಜನರಾಗಿದ್ದಾರೆ.
ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಸಲ್ಲಿಸಿರುವ ಅಮೋಘ ಸೇವೆಯನ್ನು ಪರಿಗಣಿಸಿ ರಾಜ್ಯ ಸರ್ಕಾರ ಪ್ರಶಸ್ತಿ ನೀಡುತ್ತಿದೆ. ಮಾರ್ಚ್ 12 ರಂದು ಬೆಂಗಳೂರಿನ ಕಬ್ಬನ್ ಉದ್ಯಾನವನದ ಜವಾಹರ್ ಬಾಲ ಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಪ್ರಶಸ್ತಿ ಪ್ರದಾನ ಮಾಡಿದರು. 25,000 ರೂ. ನಗದು, ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.
ಸರ್ಕಾರ ಪ್ರತಿ ವರ್ಷ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಸಾಧಕ ಮಹಿಳೆಯರಿಗೆ ರಾಜ್ಯ ಮಟ್ಟದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ನೀಡಿ ಗೌರವಿಸುತ್ತದೆ. 26 ಪ್ರಶಸ್ತಿಗಳನ್ನು 7 ವಿಭಾಗದಲ್ಲಿ ನೀಡಲಾಗುತ್ತದೆ. ಮಹಿಳಾ ಅಭಿವೃದ್ಧಿಗಾಗಿ ಉತ್ತಮ ಸೇವೆ ಸಲ್ಲಿಸುತ್ತಿರುವ ಸಂಸ್ಥೆಗಳಿಗೆ 6, ಮಹಿಳಾ ಅಭಿವೃದ್ಧಿಗೆ ಶ್ರಮಿಸುತ್ತಿರುವ ವ್ಯಕ್ತಿಗಳಿಗೆ 8, ಕಲೆಯಲ್ಲಿ ಸಾಧನೆ 5, ಸಾಹಿತ್ಯದಲ್ಲಿ ಸಾಧನೆ 3, ಕ್ರೀಡೆಯಲ್ಲಿ ಸಾಧನೆ 2 ಹಾಗೂ ಶಿಕ್ಷಣ, ವೀರ ಮಹಿಳೆ ವಿಭಾಗದಲ್ಲಿ ತಲಾ 1 ಪ್ರಶಸ್ತಿ ನೀಡಲಾಗಿದೆ.
ಸವಣೂರು ಗ್ರಾ.ಪಂ.ನ ಗ್ರಂಥಪಾಲಕರಾಗಿರುವ ಶಾರದಾ ಕಲಾ ವಿಭಾಗದಲ್ಲಿ ಮಾಡಿರುವ ಸೇವೆಗೆ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಶಾರದಾ ಮಾಲೆತ್ತಾರು ಸವಣೂರಿನ ಪದ್ಮಶ್ರೀ ಯುವತಿ ಮಂಡಲದ ಅಧ್ಯಕ್ಷರಾಗಿ ತಮ್ಮ ತಂಡವನ್ನು ತಾಲೂಕು ಮಟ್ಟದಿಂದ ರಾಜ್ಯಮಟ್ಟದವರೆಗೆ ಯುವಜನ ಮೇಳದಲ್ಲಿ ತೊಡಗಿಸುವ ಕಾರ್ಯ ಮಾಡಿದ್ದಾರೆ. ಅಲ್ಲದೆ ವಿವಿಧ ವೇದಿಕೆಗಳಲ್ಲಿ ಮಹಿಳೆಯರನ್ನು ಸೇರಿಸಿಕೊಂಡು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡಿದ್ದಾರೆ. ದ.ಕ.ಜಿಲ್ಲಾ ಗ್ರಂಥಾಲಯ ನೌಕರರ ಸಂಘದ ಅಧ್ಯಕ್ಷರಾಗಿಯೂ ಇದ್ದಾರೆ.
ಶಾರದಾ ಸವಣೂರು ಗ್ರಾಮದ ಮಾಲೆತ್ತಾರು ದಿ.ಚೆನ್ನಪ್ಪ ಗೌಡ ಮತ್ತು ಪದ್ಮಾವತಿ ದಂಪತಿಗಳ ಪುತ್ರಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
Vitla: ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ; 2 ದಿನಗಳ ಹಿಂದೆ ಮೃತಪಟ್ಟಿರುವುದಾಗಿ ಶಂಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.