Crime: ವಿವಸ್ತ್ರಗೊಳಿಸಿ ಯುವತಿ ಕೊಲೆ, ಅತ್ಯಾಚಾರ
Team Udayavani, Mar 13, 2024, 9:47 AM IST
ಚಂದಾಪುರ: ಚಂದಾಪುರದ ಸೂರ್ಯ ನಗರ ಠಾಣೆ ವ್ಯಾಪ್ತಿಯ ಹೆಡ್‌ಮಾಸ್ಟರ್ ಲೇಔಟ್‌ನಲ್ಲಿ ವಿವಸ್ತ್ರವಾದ ಸ್ಥಿತಿ ಯಲ್ಲಿ ಅಪರಿಚಿತ ಯುವತಿಯ ಕೊಳೆತ ಶವ ಪತ್ತೆಯಾಗಿದೆ.
ಮನೆಯಲ್ಲಿ ಯಾರೂ ಇಲ್ಲದ್ದನ್ನು ಕಂಡು ಭಾನುವಾರ ಸಂಜೆ ಮನೆ ಮಾಲೀಕ ಸ್ಥಳಕ್ಕೆ ತೆರಳಿದ್ದು, ದುರ್ವಾಸನೆ ಬರುತ್ತಿದ್ದರಿಂದ ಬಾಗಿಲು ತೆರೆದು ನೋಡಿದಾಗ ಯುವತಿ ಮೈ ಮೇಲೆ ಬಟ್ಟೆ ಇಲ್ಲದೆ ಕೊಳೆತ ಸ್ಥಿತಿಯಲ್ಲಿ ಶವ ಕಂಡಿದೆ. ಕೂಡಲೇ ಸೂರ್ಯನಗರ ಪೊಲೀಸರಿಗೆ ಮಾಹಿತಿ ನೀಡಿದರು.
ಸ್ಥಳಕ್ಕೆ ಬಂದ ಪೊಲೀಸರು, ಎಫ್ಎಸ್‌ಎಲ್ ತಂಡದ ನೆರವಿನೊಂದಿಗೆ ಸಾಕ್ಷ್ಯ ಕಲೆಹಾಕಿದ್ದಾರೆ. ಶವವನ್ನು ಅತ್ತಿಬೆಲೆಯ ಆಕ್ಸ್ಫರ್ಡ್ ಆಸ್ಪತ್ರೆಗೆ ರವಾನೆ ಮಾಡಿದ್ದು, ತಲೆ ಮರೆಸಿಕೊಂಡಿರುವ ಇಬ್ಬರ ಬಂಧನಕ್ಕೆ ಬಲೆ ಬೀಸಿದ್ದಾರೆ.
ಯುವತಿ ಕೊಲೆಯಾದ ಮನೆ ಬಳಿ ಎಫ್.ಎಸ್.ಎಲ್.ತಂಡ ಪರಿಶೀಲನೆ ನಡೆಸಿದೆ. ಕೃತ್ಯ ನಡೆದ ಸ್ಥಳದ ಸಮೀಪದಲ್ಲಿ ನೆಲೆಸಿದ್ದ ಇಬ್ಬರು ವ್ಯಕ್ತಿಗಳ ಮೊಬೈಲ್ ಸ್ವಿಚ್ಡ್ ಆಫ್ ಆಗಿದೆ. ಇಬ್ಬರು ಸೇರಿ ಅತ್ಯಾಚಾರ ಎಸಗಿ ಕೊಲೆ ಮಾಡಿ, ಪರಾರಿಯಾಗಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ. ಇವರಿಗೆ ಮನೆ ಮಾಲೀಕರು ದಾಖಲೆ ಪಡೆಯದೆ ಬಾಡಿಗೆಗೆ ನೀಡಿದ್ದರು.
ಶವದ ಪಕ್ಕವೇ ಸಿಕ್ಕ ಇಂಜೆಕ್ಷನ್ ಟ್ಯೂಬ್: ಯುವತಿ ಶವದ ಪಕ್ಕದಲ್ಲಿ ಇಂಜೆಕ್ಷನ್ ಟ್ಯೂಬ್ ಸಿಕ್ಕಿದ್ದು, ಮಾದಕ ವಸ್ತು ಇರುವ ಚಚ್ಚುಮದ್ದು ನೀಡಿ ಯುವತಿ ಮೇಲೆ ಅತ್ಯಾಚಾರ ನಡೆಸಿ ಬಳಿಕ ಕೊಲೆ ಮಾಡಿ ಇಬ್ಬರೂ ಪರಾರಿ ಆಗಿರುವ ಸಾಧ್ಯತೆ ಇದೆ ಎಂದು ಶಂಕೆ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ
ಸಿನೆಮಾ ಪೋಸ್ಟರ್ ಗಳ ಕೋಣೆಯಲ್ಲಿ-ಹಾಲಿವುಡ್ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ
Vijay Hazare Trophy;ಕೃಷ್ಣನ್ ಶ್ರೀಜಿತ್ ಅಮೋಘ ಶತಕ:ಬಲಿಷ್ಠ ಮುಂಬೈ ಎದುರು ಕರ್ನಾಟಕ ಜಯಭೇರಿ
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.