Poll: ಬೆಂಗಳೂರು ಉತ್ತರ ಲೋಕಸಭಾ ಜನತೆಗೆ ಅಂತರಾಳದ ಧನ್ಯವಾದ: ಡಿವಿಎಸ್ ಟ್ವೀಟ್!
ನಾನು ನಿಮ್ಮೆಲ್ಲರಿಗೂ ಚಿರಋಣಿ...
Team Udayavani, Mar 13, 2024, 6:09 PM IST
ಬೆಂಗಳೂರು: 2024ನೇ ಸಾಲಿನ ಲೋಕಸಭಾ ಚುನಾವಣೆಯಲ್ಲಿ ಕೆಲವು ಹಾಲಿ ಸಂಸದರಿಗೆ ಟಿಕೆಟ್ ಕೈತಪ್ಪಲಿದೆ ಎಂಬ ಊಹಾಪೋಹದ ನಡುವೆಯೇ ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಜನತೆಗೆ ಧನ್ಯವಾದ ಸಲ್ಲಿಸಿ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ:Arms License Case: ಗ್ಯಾಂಗ್ ಸ್ಟರ್, ರಾಜಕಾರಣಿ ಮುಖ್ತಾರ್ ಅನ್ಸಾರಿಗೆ ಜೀವಾವಧಿ ಶಿಕ್ಷೆ
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಕ್ಕೆ ಈ ಬಾರಿ ಡಿವಿಎಸ್ ಗೆ ಟಿಕೆಟ್ ನಿರಾಕರಿಸಲಾಗಿದೆ ಎಂಬ ವದಂತಿಯ ನಡುವೆ ಸದಾನಂದ ಗೌಡರು ತಮ್ಮ ಎಕ್ಸ್ ಖಾತೆಯಲ್ಲಿ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ನನ್ನೆಲ್ಲಾ ಪ್ರೀತಿಯ ಬಂಧುಗಳೇ, ನನಗೆ ಕಳೆದ 10 ವರ್ಷಗಳ ಕಾಲ ಈ ಕ್ಷೇತ್ರದ ಲೋಕಸಭಾ ಸದಸ್ಯನಾಗಿ, ನಿಮ್ಮ ಕೆಲಸ ಮಾಡುವ ಅವಕಾಶವನ್ನು ಮಾಡಿಕೊಟ್ಟು ಆಶೀರ್ವಾದ ಮಾಡಿದ್ದೀರಿ. ನಾನು ನನ್ನ ಶಕ್ತಿ ಮೀರಿ ನಿಮ್ಮ ಸೇವೆಯನ್ನು ಮಾಡುವ ಪ್ರಯತ್ನವನ್ನು ಮಾಡಿದ್ದೇನೆ. ನಿಮ್ಮ ಆಶೀರ್ವಾದದಿಂದ ಕೇಂದ್ರದಲ್ಲಿ ನಮ್ಮೆಲ್ಲರ ಪ್ರೀತಿಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜತೆ 7 ವರ್ಷಗಳ ಕಾಲ ಕ್ಯಾಬಿನೆಟ್ ಮಂತ್ರಿಯಾಗಿ ಕೆಲಸ ಮಾಡುವ ಅವಕಾಶವನ್ನು ಕೂಡಾ ಕಲ್ಪಿಸಿದ್ದೀರಿ. ನಾನು ನಿಮ್ಮೆಲ್ಲರಿಗೂ ಚಿರಋಣಿ. ಎಲ್ಲರಿಗೂ ಅಂತರಾಳದ ಹೃದಯ ತುಂಬಿದ ಧನ್ಯವಾದಗಳು” ಎಂದು ತಿಳಿಸಿದ್ದಾರೆ.
ಮೂಲಗಳ ಪ್ರಕಾರ, ಡಿ.ವಿ.ಸದಾನಂದ ಗೌಡರನ್ನು ದೂರವಾಣಿ ಮೂಲಕ ಸಂಪರ್ಕಿಸಿರುವ ಬಿಜೆಪಿ ಹೈಕಮಾಂಡ್ ಈ ಬಾರಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಕ್ಕೆ ಬೇರೆ ಅಭ್ಯರ್ಥಿಯನ್ನು ಆಯ್ಕೆ ಮಾಡಿರುವುದಾಗಿ ತಿಳಿಸಿರುವುದಾಗಿ ವರದಿ ಹೇಳಿದೆ.
— Sadananda Gowda ( Modi Ka Parivar ) (@DVSadanandGowda) March 13, 2024
ವದಂತಿ ಹಾಗೂ ಡಿವಿ ಎಸ್ ಟ್ವೀಟ್ ಬಳಿಕ ಇದೀಗ ರಾಜಕೀಯ ವಲಯದಲ್ಲಿ ಬಹುತೇಕ ಊಹಾಪೋಹದಂತೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಕ್ಕೆ ಶೋಭಾ ಕರಂದ್ಲಾಜೆ ಅಭ್ಯರ್ಥಿಯಾಗುವ ಸಾಧ್ಯತೆ ಇದ್ದು, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಅಚ್ಚರಿಯ ಹೆಸರು ಘೋಷಣೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.