Udupi: ಖಜಾನೆ ಖಾಲಿಯಾಗಿಲ್ಲ ,ಬಹಿರಂಗ ಚರ್ಚೆಗೆ ಸಿದ್ಧ: ಸಿಎಂ ಸಿದ್ದರಾಮಯ್ಯ
Team Udayavani, Mar 14, 2024, 1:37 AM IST
ಉಡುಪಿ: ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಖಜಾನೆ ಖಾಲಿಯಾಗಿಲ್ಲ. ಈ ಬಗ್ಗೆ ಬಹಿರಂಗ ಚರ್ಚೆಗೆ ಸಿದ್ಧರಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಪಕ್ಷಗಳಿಗೆ ಸವಾಲು ಹಾಕಿದ್ದಾರೆ.
ಜಿಲ್ಲಾಡಳಿತ, ಜಿ.ಪಂ. ವತಿಯಿಂದ ಎಂಜಿಎಂ ಕಾಲೇಜು ಮೈದಾನದಲ್ಲಿ ಬುಧವಾರ ಹಮ್ಮಿ ಕೊಂಡಿದ್ದ ಗ್ಯಾರಂಟಿ ಯೋಜನೆಯ ಫಲಾನುಭವಿಗಳ ಸಮಾವೇಶ, ಜಿಲ್ಲೆಯ ವಿವಿಧ ಕಾಮ ಗಾರಿಗಳನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು.
ಕಾಂಗ್ರೆಸ್ ಸರಕಾರ ತನ್ನ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡುವ ಮೂಲಕ ಬಡವರ ಕಲ್ಯಾಣ ಮಾಡು ತ್ತಿದೆ. ಇದರಿಂದ ಸರಕಾರದ ಬೊಕ್ಕಸ ಬರಿದಾಗಿಲ್ಲ ಎಂದರಲ್ಲದೇ, ಬಿಜೆಪಿ ನಾಯಕರು ಗ್ಯಾರಂಟಿ ಯೋಜನೆಗಳ ಬಗ್ಗೆ ಜನರಿಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ. ಗ್ಯಾರಂಟಿ ಯೋಜನೆ ಎಲ್ಲರಿಗೂ ತಲುಪಿಸಲು ಅನುಷ್ಠಾನ ಸಮಿತಿಗಳನ್ನು ರಚಿಸಿದ್ದೇವೆ. ಗ್ಯಾರಂಟಿಗಳಿಂದ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದ್ದರು. ಎಲ್ಲಿ ಹಾಳಾಗಿದೆ? ಅದು ಸುಳ್ಳು. ನಾವು ಅಭಿವೃದ್ಧಿಗೆ 1.20 ಲಕ್ಷ ಕೋಟಿ ರೂ.ಗಳನ್ನು ಬಜೆಟ್‌ನಲ್ಲಿ ಇಟ್ಟಿದ್ದೇವೆ ಎಂದರು.
ಅಚ್ಛೇದಿನ್ ಎಲ್ಲಿದೆ?
ರಾಜ್ಯದಿಂದ 4.30 ಲಕ್ಷ ಕೋಟಿ ರೂ.ಗಳನ್ನು ತೆರಿಗೆ ರೂಪದಲ್ಲಿ ನೀಡಿದರೆ, ರಾಜ್ಯಕ್ಕೆ ಮರಳಿ ಬರುವುದು ಕೇವಲ 50,257 ಕೋಟಿ ರೂ. ಮಾತ್ರ. ಪ್ರಧಾನಿ ಮೋದಿ ಕಾಲದಲ್ಲಿ ಕರ್ನಾಟಕಕ್ಕೆ ದೊಡ್ಡ ಅನ್ಯಾಯವಾಗಿದ್ದು, ಇಲ್ಲಿನ ಸಂಸದೆ ಶೋಭಾ ಕರಂದ್ಲಾಜೆ ಈ ಬಗ್ಗೆ ಎಂದೂ ಕೇಂದ್ರವನ್ನು ಪ್ರಶ್ನಿಸಿಲ್ಲ. ಇಂತಹ ಸಂಸದರನ್ನು ಇಲ್ಲಿನ ಜನ ಮರು ಆಯ್ಕೆ ಮಾಡಬೇಕೆ? ಅಚ್ಛೇ ದಿನ್ ಆಯೆಂಗೆ, ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎಂದ ಪ್ರಧಾನಿ ಮೋದಿಯವರು ಕೇಂದ್ರದಲ್ಲಿ ಕೊಟ್ಟ ಮಾತಿನಂತೆ ನಡೆದಿಲ್ಲ ಎಂದು ಟೀಕಿಸಿದರು.
ಕಾಂಗ್ರೆಸ್ ಸರಕಾರ ನೀಡಿದ ಭರವ ಸೆಗಳನ್ನು ಈಡೇರಿಸಿದೆ. ಕಳೆದ ಬಾರಿ ನಾವು ಶೇ. 98ರಷ್ಟು ಭರವಸೆಗಳನ್ನು ಈಡೇರಿಸಿದ್ದರೆ, ಬಿಜೆಪಿಯವರು ಕೇವಲ ಶೇ. 10ರಷ್ಟು ಮಾತ್ರ ಈಡೇರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ದೇಶದ ಎಲ್ಲ ಜನರ ಖಾತೆಗೆ ಹಣ ಹಾಕುವುದಾಗಿ ಹಾಗೂ ಉದ್ಯೋಗ ನೀಡುವುದಾಗಿ ಸುಳ್ಳು ಹೇಳಿದ್ದಾರೆ ಎಂದು ಆಪಾದಿಸಿದರು.
ಮೋದಿಯವರು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟಿಸಿದರೆ ಅಂದೇ ರಾಜ್ಯದಲ್ಲಿ ನಾನು ಆಂಜ ನೇಯ ದೇಗುಲ ಉದ್ಘಾಟಿಸಿದೆ. ಇಲ್ಲಿನ ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗಾಗಿ 100 ಕೋ.ರೂ. ಅನುದಾನವನ್ನು ಮೀಸಲಿಟ್ಟಿದ್ದೇವೆ. ಆದರೂ ಸಿದ್ದರಾಮಯ್ಯ ಹಿಂದೂ ವಿರೋಧಿ ಎಂದು ಮೂದಲಿಸುತ್ತಾರೆ. ಈ ರೀತಿ ಜನರ ದಾರಿ ತಪ್ಪಿಸಿ ಅಧಿಕಾ ರಕ್ಕೆ ಬರುತ್ತಿರುವ ಬಿಜೆಪಿಗೆ ಗೋಬ್ಯಾಕ್ ಎಂದು ಹೇಳಬೇಕು. ಹಾಗೆ ಹೇಳಲು ಇದು ಸಕಾಲ ಎಂದು ಜನರಿಗೆ ಕರೆ ನೀಡಿದರು.
ಅಭಿವೃದ್ಧಿಗೆ ಬದ್ಧ: ವೈದ್ಯ
ಕೇಂದ್ರ ಸರಕಾರ ಮೀನು ಗಾರರ ಡೀಸೆಲ್ ಸಬ್ಸಿಡಿ ನಿಲ್ಲಿಸಿದೆ. ಆದರೆ ನಾವು ನಾಡದೋಣಿಗಳಿಗೆ ಸೀಮೆ ಎಣ್ಣೆ ನೀಡುತ್ತಿದ್ದು, ಬಜೆಟ್ ನಲ್ಲಿ ಮೀನುಗಾರಿಕೆಗೆ 3 ಸಾವಿರ ಕೋಟಿ ರೂ. ಮೀಸಲಿಟ್ಟಿದ್ದೇವೆ. ಕರಾವಳಿ ಜಿಲ್ಲೆಗಳ ಮೇಲೆ ಕಾಳಜಿಯಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಕೈಗೊಳ್ಳುವುದಾಗಿ ಮೀನುಗಾರಿಕೆ ಸಚಿವ ಮಂಕಾಳ ವೈದ್ಯ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.