Sheikh Shahjahan ಬಂಧನದ ಬೆನ್ನಲ್ಲೇ ಸಂದೇಶಖಾಲಿಯ ಹಲವೆಡೆ ಜಾರಿ ನಿರ್ದೇಶನಾಲಯ ದಾಳಿ
Team Udayavani, Mar 14, 2024, 8:56 AM IST
ಪಶ್ಚಿಮ ಬಂಗಾಳ: ಭೂಕಬಳಿಕೆ ಆರೋಪದ ಮೇಲೆ ತೃಣಮೂಲ ಕಾಂಗ್ರೆಸ್‌ನ ಪ್ರಬಲ ನಾಯಕ ಶೇಖ್ ಷಹಜಹಾನ್ ಬಂಧನವಾದ ಕೆಲವೇ ದಿನಗಳ ಅಂತರದಲ್ಲಿ ಜಾರಿ ನಿರ್ದೇಶನಾಲಯ ಶೇಖ್ ಷಹಜಹಾನ್ ಅವರ ಸಹಚರರ ನಿವಾಸ ಸೇರಿದಂತೆ ಪಶ್ಚಿಮ ಬಂಗಾಳದ ಸಂದೇಶಖಾಲಿಯಲ್ಲಿ ಹಲವು ಸ್ಥಳಗಳಲ್ಲಿ ದಾಳಿ ನಡೆಸಿತು.
ಈ ವೇಳೆ ತನಿಖಾ ಸಂಸ್ಥೆಯ ಅಧಿಕಾರಿಗಳು ಮಹಿಳಾ ಪಡೆಗಳು ಸೇರಿದಂತೆ ಅರೆಸೇನಾ ಪಡೆಗಳ ಜೊತೆಗಿರುತ್ತಾರೆ.
ಬೆಳಗ್ಗೆ 6:30ರ ಸುಮಾರಿಗೆ ಸಂದೇಶಖಾಲಿ ತಲುಪಿದ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ತಂಡದಲ್ಲಿ ಒಂದು ತಂಡ ಶೇಖ್ ಷಹಜಹಾನ್ ಅವರ ಇಟ್ಟಿಗೆ ಗೂಡಿನ ಮೇಲೆ ದಾಳಿ ನಡೆಸಿದರೆ ಮತ್ತೊಂದು ತಂಡ ಸಂದೇಶಖಾಲಿಯ ಧಮಾಖಾಲಿ ಪ್ರದೇಶದಲ್ಲಿ ಶೋಧ ಕಾರ್ಯ ನಡೆಸಲು ಮುಂದಾಗಿದೆ.
ಜನವರಿ 5 ರಂದು ಸಂದೇಶಖಾಲಿಯಲ್ಲಿ ಜಾರಿ ನಿರ್ದೇಶನಾಲಯ ತಂಡದ ಮೇಲೆ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಶೇಖ್ ಷಹಜಹಾನ್ ಪ್ರಸ್ತುತ ಮಾರ್ಚ್ 14 (ಗುರುವಾರ) ವರೆಗೆ ಕೇಂದ್ರೀಯ ತನಿಖಾ ದಳದ (ಸಿಬಿಐ) ಕಸ್ಟಡಿಯಲ್ಲಿದ್ದಾರೆ.
ಜನವರಿ 5 ರಂದು ಪಡಿತರ ವಿತರಣೆ ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಏಜೆನ್ಸಿಯ ತನಿಖೆಗೆ ಸಂಬಂಧಿಸಿದಂತೆ ಶೇಖ್ ಷಹಜಹಾನ್ ಅವರ ನಿವಾಸದ ಮೇಲೆ ದಾಳಿ ನಡೆಸಲು ಹೋದ ಅಧಿಕಾರಿಗಳ ಮೇಲೆ ಸುಮಾರು 1000 ಜನರ ಗುಂಪೊಂದು ತನಿಖಾ ಸಂಸ್ಥೆ ಅಧಿಕಾರಿಗಳ ಮೇಲೆ ದಾಳಿ ಮಾಡಿತ್ತು, ಈ ಘಟನೆಗಳಿಗೆ ಸಂಬಂಧಿಸಿದ ಮೂರು ಪ್ರಕರಣಗಳ ತನಿಖೆಯನ್ನು ಸಿಬಿಐ ವಹಿಸಿಕೊಂಡಿದೆ.
ಪ್ರಕರಣಕ್ಕೆ ಸಂಬಂಧಿಸಿ ಎರಡು ತಿಂಗಳುಗಳಿಂದ ತಲೆಮರೆಸಿಕೊಂಡಿದ್ದ ಶೇಖ್ ಷಹಜಹಾನ್‌ನನ್ನು ಫೆಬ್ರವರಿ 29 ರಂದು ಪಶ್ಚಿಮ ಬಂಗಾಳ ಪೊಲೀಸರು ಬಂಧಿಸಿದ್ದರು.
ಇದನ್ನೂ ಓದಿ: ಬಿಗ್ ಬಾಸ್ ಸ್ಪರ್ಧಿ ತುಕಾಲಿ ಸಂತೋಷ್ ಕಾರು ಅಪಘಾತ… ರಿಕ್ಷಾ ಚಾಲಕ ಮೃತ್ಯು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ
NCB ನಿರಂತರ ಕಾರ್ಯಾಚರಣೆ: ಡ್ರಗ್ಸ್ ಜಾಲ ಮುರಿಯಲು ಆಪರೇಷನ್ ಸಾಗರ ಮಂಥನ
J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ
Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ
Maharashtra: ಕಾಂಗ್ರೆಸ್ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.