Koppala: ಬೇರೆ ಪಕ್ಷಕ್ಕೆ ಹೋಗುವುದಿಲ್ಲ: ಸಂಗಣ್ಣ ಕರಡಿ ಸ್ಪಷ್ಟನೆ
Team Udayavani, Mar 14, 2024, 2:40 PM IST
ಕೊಪ್ಪಳ: ನಾನು ಬೇರೆ ಪಕ್ಷಕ್ಕೆ ಹೋಗುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ನ ಕೆಲವರು ನನ್ನ ಜೊತೆ ಸೌಜನ್ಯಕ್ಕಾಗಿ ಮಾತನಾಡಿದ್ದಾರೆ. ಆದರೆ ಪಕ್ಷ ಸೇರುವ ಬಗ್ಗೆ ಮಾತನಾಡಿಲ್ಲ. ನಾನು ಪಕ್ಷದಲ್ಲಿಯೇ ಇರುತ್ತೇನೆ. ಕೆಆರ್ಪಿಪಿ ಪಕ್ಷಕ್ಕೆ ಹೋಗುವೆ ಎನ್ನುವ ವಿಚಾರ ಎಲ್ಲವೂ ಊಹಾಪೋಹ. ನಾನು ಈಗಲೇ ಎಲ್ಲವೂ ನಿರ್ಧಾರ ಮಾಡಿಲ್ಲ ಎಂದು ಕೊಪ್ಪಳದಲ್ಲಿ ಬಿಜೆಪಿ ಸಂಸದ ಸಂಗಣ್ಣ ಕರಡಿ ಹೇಳಿದರು.
ಮುಂದಿನ ಲೋಕಸಭೆ ಚುನಾವಣೆಗೆ ಅವರಿಗೆ ಟಿಕೆಟ್ ತಪ್ಪಿದ ಬಳಿಕ ಬೆಂಬಲಿಗರು ಪಕ್ಷದ ಅಭ್ಯರ್ಥಿಗೆ ಮುತ್ತಿಗೆ ಹಾಕಿದ ಘಟನೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಕಾರ್ಯಕರ್ತರು ಬಿಜೆಪಿ ಕಚೇರಿ ಧ್ವಂಸ ಮಾಡುವುದು ಸರಿಯಲ್ಲ. ಅಭ್ಯರ್ಥಿಯ ಮೇಲೆ ಹಲ್ಲೆಗೆ ಯತ್ನಿಸುವುದು ಸರಿಯಲ್ಲ. ನಾವು ವರಿಷ್ಠ ನಿರ್ಧಾರಕ್ಕೆ ಬದ್ದವಾಗಿರೋಣ ಎಂದು ನಾನು ಅವರಿಗೆ ಮನವಿ ಮಾಡಿಕೊಳ್ಳುತ್ತೇನೆ ಎಂದರು.
ನಾನು ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕೆ ಹೋಗುತ್ತೇನೆ. ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಲಿದೆ. ಅವರು (ಬಸವರಾಜ) ಇಂದು ನನ್ನ ಭೇಟಿ ಮಾಡಲು ಆಗಮಿಸಿದ್ದರು. ಏಕಾಏಕಿ ಬಂದಿದ್ದರಿಂದ ಕಾರ್ಯಕರ್ತರು ಗೊಂದಲ ಮಾಡಿದ್ದಾರೆ. ಒಂದಡರೆಡು ದಿನದಲ್ಲಿ ಅವರನ್ನು ಸಮಾಧಾನ ಪಡಿಸುತ್ತೇನೆ ಎಂದು ಕರಡಿ ಸಂಗಣ್ಣ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
ಕೊಪ್ಪಳ: ಫ್ಲೈಟ್ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.