Firefly; ಶಿವಣ್ಣ ಮಗಳ ಮೊದಲ ಚಿತ್ರ ‘ಫೈರ್ ಫ್ಲೈ’: ದೀಪಾವಳಿಗೆ ಚಿತ್ರ ತೆರೆಗೆ
Team Udayavani, Mar 14, 2024, 4:04 PM IST
ಶಿವರಾಜ್ಕುಮಾರ್ ಪುತ್ರಿ ನಿವೇದಿತಾ ಶಿವರಾಜ್ ಕುಮಾರ್ ನಿರ್ಮಿಸುತ್ತಿರುವ “ಫೈರ್ ಫ್ಲೈ’ ಚಿತ್ರ ದೀಪಾವಳಿಗೆ ಬಿಡುಗಡೆಯಾಗಲಿದೆ. ಈ ಬಗ್ಗೆ ಚಿತ್ರತಂಡ ಸುದ್ದಿಗೋಷ್ಠಿ ಆಯೋಜಿಸಿತ್ತು.
ಚಿತ್ರದ ಬಗ್ಗೆ ಮಾತನಾಡಿದ ನಿರ್ಮಾಪಕಿ ನಿವೇದಿತಾ ಶಿವರಾಜ್ ಕುಮಾರ್, “ವೆಬ್ ಸೀರಿಸ್ ಮಾಡಿದ ಮೇಲೆ ಸಿನಿಮಾ ಮಾಡಬೇಕು ಅಂತಾ ತುಂಬಾ ಆಸಕ್ತಿ ಇತ್ತು. ವಂಶಿ ಅವರು ಕಥೆ ಹೇಳಿದಾಗ ನನಗೆ ತುಂಬಾ ಇಷ್ಟವಾಯಿತು. ಒಳ್ಳೆಯ ಟೆಕ್ನಿಕಲ್ ಟೀಂ ಜೊತೆಗೆ ಸಿನಿಮಾ ಮಾಡಬೇಕು ಎಂದು ಚಿತ್ರ ಮಾಡಿದ್ದೇವೆ. ಕಥೆ ತುಂಬಾ ಸರಳವಾಗಿದ್ದರೂ, ಅವರು ಕಥೆ ಹೇಳಿದ ರೀತಿ ತುಂಬಾ ಇಷ್ಟವಾಯ್ತು. ಹೊಸ ಪ್ರಯೋಗ ಮಾಡಿದ್ದೇನೆ. ಕೊನೆಯ ಹಂತದ ಚಿತ್ರೀಕರಣ ಶುರು ಮಾಡುತ್ತಿದ್ದೇವೆ. ದೀಪಾವಳಿ ಸಿನಿಮಾ ಬಿಡುಗಡೆಯಾಗಲಿದೆ’ ಎಂದರು.
ನಟ ಕಂ ನಿರ್ದೇಶಕ ವಂಶಿ ಮಾತನಾಡಿ, “ಎಲ್ಲರ ಜೀವನದಲ್ಲಿಯೂ ಒಂದು ಪಾಯಿಂಟ್ ಇರುತ್ತದೆ. ನಾವು ಡೆಂಡ್ ಎಂಡ್ ಅಂದುಕೊಂಡಿರುತ್ತೇವೆ. ಒಂದು ಭರವಸೆ ಹಾಗೂ ಪ್ರೇರಣೆಗೆ ಕಾಯುತ್ತಾ ಇರುತ್ತೇವೆ. ಆ ಟೈಮ್ನಲ್ಲಿ ಹೋಪ್ ಎಂಬ ಬೆಳಕು ಎಲ್ಲಿಂದಲೋ ಬರಲ್ಲ, ಅದು ನಮ್ಮಿಂದಲೇ ಬರಬೇಕು ಎಂಬುದೇ ಫೈರ್ ಫ್ಲೈ. ಅದಕ್ಕೆ ಈ ಟೈಟಲ್ ಇಟ್ಟಿದ್ದೇವೆ. ನಿವೇದಿತಾ ಅವರಿಗೆ ಧನ್ಯವಾದ. ಇದಕ್ಕಿಂತ ಮೊದಲು ಎರಡು ಮೂರು ಕಥೆ ಚರ್ಚೆ ಮಾಡಿದ್ದೇವು. ಆದರೆ ಅವರು ರಿಜೆಕ್ಟ್ ಮಾಡಿದರು. ಈ ಕಥೆ ಒಪ್ಪಿಕೊಂಡಿದ್ದಕ್ಕೆ ನನಗೆ ಖುಷಿಯಾಯ್ತು. ಯಾಕೆಂದರೆ ನನ್ನಲ್ಲಿ ಕೆಲ ಬದಲಾವಣೆ ಆಯ್ತು. ಟೆಕ್ನಿಕಲ್ ಸ್ಟ್ರಾಂಗ್ ಹಾಗೂ ಸಿಂಪಲ್ ಸಿನಿಮಾದೊಂದಿಗೆ ಬರುತ್ತಿದ್ದೇವೆ. ಇದೇ ದೀಪಾವಳಿಗೆ ಚಿತ್ರ ಬರುತ್ತಿದೆ. ಇಡೀ ಸಿನಿಮಾದಲ್ಲಿ ನಾನು ಒಬ್ಬನೇ ಹೊಸುಬ. ಆದರೆ ಆ ರೀತಿ ಫೀಲ್ ನನಗೆ ಬಂದೇ ಇಲ್ಲ. ಇಷ್ಟು ಜನ ಸಿಕ್ಕಿದ್ದು, ಶ್ರೀಮುತ್ತು ಸಿನಿ ಸರ್ವೀಸ್ ನಿಂದ’ ಎಂದರು.
ಈ ಚಿತ್ರದಲ್ಲಿ ವಂಶಿ ಹೀರೋ ಆಗಿ ನಟಿಸುತ್ತಿದ್ದಾರೆ. ನಿರ್ದೇಶನದ ಜವಾಬ್ದಾರಿ ಕೂಡ ಅವರದ್ದೇ ಎಂಬುದು ವಿಶೇಷ. ಚಿತ್ರಕ್ಕೆ ಅಭಿಲಾಷ್ ಕಳತ್ತಿ ಛಾಯಾಗ್ರಹಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಚರಣ್ ರಾಜ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ರಘು ನಿಡುವಳ್ಳಿ ಅವರು ಸಂಭಾಷಣೆಯ ಬರೆದಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.