Dharwad; ಪುನೀತ್ ಹೃದಯ ಜ್ಯೋತಿ 2ನೇ ಹಂತದ ಯೋಜನೆಗೆ ಸಚಿವ ದಿನೇಶ್ ಗುಂಡೂರಾವ್ ಚಾಲನೆ


Team Udayavani, Mar 15, 2024, 2:29 PM IST

Dharwad; ಪುನೀತ್ ಹೃದಯ ಜ್ಯೋತಿ 2ನೇ ಹಂತದ ಯೋಜನೆಗೆ ಸಚಿವ ದಿನೇಶ್ ಗುಂಡೂರಾವ್ ಚಾಲನೆ

ಧಾರವಾಡ: ರಾಜ್ಯ ಸರ್ಕಾರ ಡಾ.ಪುನೀತ್ ರಾಜಕುಮಾರ್ ಅವರ ಹೆಸರಿನಲ್ಲಿ ಹೃದಯ ಜ್ಯೋತಿ ಯೋಜನೆ ಜಾರಿಗೆ ತಂದಿದ್ದು, ಎರಡನೇ ಹಂತದ ಈ ಯೋಜನೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ನಗರದ  ಡಾ.ವೀರೇಂದ್ರ ಹೆಗ್ಗಡೆ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಚಾಲನೆ ನೀಡಿದರು.

ಹೃದಯಾಘಾತವಾದ ತಕ್ಷಣ ಬಡವರಿಗೂ ಲಭ್ಯವಾಗುವ ರೀತಿಯಲ್ಲಿ ಎಲ್ಲ ತಾಲೂಕು ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ 28 ಸಾವಿರ ರೂಪಾಯಿ ಮೌಲ್ಯದ ಯೋಜನೆ ಇದಾಗಿದೆ. ಹೃದಯಾಘಾತವಾದ ತಕ್ಷಣ ಇಸಿಜಿ ಮಾಡುವ ಸ್ಟೆಮಿ ಕಿಟ್ ನೂ ಈ ಯೋಜನೆಯಡಿ ನೀಡಲಾಗುತ್ತಿದೆ. ಇಡೀ ದೇಶದಲ್ಲೇ ಇದೇ ಮೊದಲ ಬಾರಿಗೆ ಕರ್ನಾಟಕ ಸರ್ಕಾರದಿಂದ ಈ ಯೋಜನೆ ಜಾರಿ ಮಾಡಲಾಗಿದೆ. ಈಗಾಗಲೇ ರಾಜ್ಯದ 15 ಜಿಲ್ಲೆ ಹಾಗೂ 71 ತಾಲೂಕಾ ಆಸ್ಪತ್ರೆಯಲ್ಲಿ ಈ ಯೋಜನೆ ಜಾರಿ ಮಾಡಲಾಗಿದೆ. ಎರಡನೇ ಹಂತದಲ್ಲಿ ದಕ್ಷಿಣ ಕನ್ನಡ, ಬೆಳಗಾವಿ, ದಾವಣಗೆರೆ, ಶಿವಮೊಗ್ಗ, ಧಾರವಾಡ, ಬಾಗಲಕೋಟೆ ಸೇರಿದಂತೆ 36 ತಾಲೂಕು ಆಸ್ಪತ್ರೆಗಳಲ್ಲಿ ಈ ಯೋಜನೆ ಜಾರಿಗೊಳಿಸಲಾಗಿದ್ದು, ಬರುವ ದಿನಗಳಲ್ಲಿ ರಾಜ್ಯಾದ್ಯಂತ ಈ ಯೋಜನೆ ಜಾರಿಯಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಹೃದಯಾಘಾತವಾದ ವ್ಯಕ್ತಿಗೆ ಇಂಜೆಕ್ಷನ್ ನೀಡಿದರೆ ಹೃದಯದ ಬ್ಲಾಕ್‌ ಗಳನ್ನು ಈ ಇಂಜೆಕ್ಷನ್‌ ತೆಗೆದು ಹಾಕಿ ವ್ಯಕ್ತಿ ಬದುಕುವಂತೆ ಮಾಡುತ್ತದೆ. ಆನಂತರ ಆ ವ್ಯಕ್ತಿಗೆ ಚಿಕಿತ್ಸೆ ನೀಡಬೇಕಾಗುತ್ತದೆ. ಇಂತಹ ಇಂಜೆಕ್ಷನ್ ಬಡವರಿಗೂ ಸಿಗಲಿ ಎಂದು ಈ ಯೋಜನೆ ಜಾರಿ ಮಾಡಲಾಗಿದೆ. ಬರುವ ದಿನಗಳಲ್ಲಿ ಈ ಇಂಜೆಕ್ಷನ್ ನ್ನು ರೈಲು ನಿಲ್ದಾಣ, ವಿಮಾನ ನಿಲ್ದಾಣಗಳಲ್ಲೂ ಇಡುವ ಯೋಜನೆ ಸರ್ಕಾರದ ಮುಂದೆ ಇದೆ ಎಂದು ಆರೋಗ್ಯ ಸಚಿವರು ತಿಳಿಸಿದರು.

ಇಂತಹ ಎರಡನೇ ಹಂತದ ಯೋಜನೆಗೆ ಧಾರವಾಡದಿಂದ ಚಾಲನೆ ಸಿಕ್ಕಿದೆ. ಈ ಸಮಾರಂಭಕ್ಕೆ ಕಾರ್ಮಿಕ ಸಚಿವ ಸಂತೋಷ್ ಲಾಡ್, ಶಾಸಕ ಎನ್.ಎಚ್. ಕೋನರಡ್ಡಿ, ಜಿಲ್ಲಾಧಿಕಾರಿ ದಿವ್ಯ ಪ್ರಭು, ಹೃದಯ ಸಂಬಂಧಿ ವೈದ್ಯರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Sanganna-Kardi

BJPಯಲ್ಲಿ ಆರೆಸ್ಸೆಸ್‌ ಮಾತು ನಡೆಯಲ್ಲ: ಸಂಗಣ್ಣ ಕರಡಿ

Surathkal: ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ: ಮೂವರು ಆರೋಪಿಗಳು ಪರಾರಿ

Surathkal: ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ: ಮೂವರು ಆರೋಪಿಗಳು ಪರಾರಿ

Kharajola

MUDA Scam; ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಸಂಸದ ಕಾರಜೋಳ

Dravid–gavskar

Indian Cricket; ರಾಹುಲ್‌ ದ್ರಾವಿಡ್‌ಗೆ ಭಾರತ ರತ್ನ ಕೊಡಿ: ಗವಾಸ್ಕರ್‌

rain 21

Heavy Rain; ಉತ್ತರ ಕನ್ನಡ ಜಿಲ್ಲೆಯ 5 ತಾಲೂಕುಗಳಲ್ಲಿ ಜುಲೈ 8 ರಂದು ಪಿಯುಸಿವರೆಗೆ ರಜೆ

Bhatkal ಮುಂದುವರಿದ ವರುಣನ ಆರ್ಭಟ; ತಗ್ಗು ಪ್ರದೇಶಗಳು ಜಲಾವೃತ

Bhatkal ಮುಂದುವರಿದ ವರುಣನ ಆರ್ಭಟ; ತಗ್ಗು ಪ್ರದೇಶಗಳು ಜಲಾವೃತ

1-wqwewewq

T20 ಸರಣಿ ಸಮಬಲ: ಜಿಂಬಾಬ್ವೆ ವಿರುದ್ಧ 100 ರನ್ ಗಳ ಅಮೋಘ ಜಯ ಸಾಧಿಸಿದ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; CM-DCM issue not to be debated on sidewalks: RB Thimmapura

Hubli; ಸಿಎಂ-ಡಿಸಿಎಂ ವಿಚಾರ ಹಾದಿಬೀದಿಯಲ್ಲಿ ಚರ್ಚೆ ಮಾಡುವುದಲ್ಲ: ಆರ್.ಬಿ ತಿಮ್ಮಾಪುರ

ಪ್ರಹ್ಲಾದ ಜೋಶಿ

Hubli; ಸಿದ್ದರಾಮಯ್ಯ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ: ಪ್ರಹ್ಲಾದ ಜೋಶಿ

Prahalad-Joshi

MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

ತರಾತುರಿಯ ಡಿಸಿ ವರ್ಗಾವಣೆಯು ಸಿಎಂ ಭ್ರಷ್ಟಾಚಾರವನ್ನು ಸಾಬೀತುಪಡಿಸಿದೆ: ಪ್ರಹ್ಲಾದ ಜೋಶಿ

Hubli;ತರಾತುರಿಯ ಡಿಸಿ ವರ್ಗಾವಣೆಯು ಸಿಎಂ ಭ್ರಷ್ಟಾಚಾರವನ್ನು ಸಾಬೀತುಪಡಿಸಿದೆ: ಪ್ರಹ್ಲಾದಜೋಶಿ

prahlad-joshi

Mahadayi ಪ್ರವಾಹ್ ಸಮಿತಿ ಭೇಟಿ ಬಗ್ಗೆ ಬೇರೆ ಅರ್ಥ ಕೊಡಬಾರದು: ಜೋಶಿ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Sanganna-Kardi

BJPಯಲ್ಲಿ ಆರೆಸ್ಸೆಸ್‌ ಮಾತು ನಡೆಯಲ್ಲ: ಸಂಗಣ್ಣ ಕರಡಿ

Karadi sanganna

Mining; ಸಂಡೂರ ಪ್ರದೇಶದಲ್ಲಿ ಗಣಿಗಾರಿಕೆಗೆ ನಮ್ಮ ವಿರೋಧವಿದೆ: ಕರಡಿ ಸಂಗಣ್ಣ

Yellapur ಒಂದೇ ಮೊಗ್ಗಲ್ಲಿ ಹೂವೆರಡು; ಇದು ಪ್ರಕೃತಿಯ ಸೊಬಗು

Yellapur ಒಂದೇ ಮೊಗ್ಗಲ್ಲಿ ಹೂವೆರಡು; ಇದು ಪ್ರಕೃತಿಯ ಸೊಬಗು

Surathkal: ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ: ಮೂವರು ಆರೋಪಿಗಳು ಪರಾರಿ

Surathkal: ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ: ಮೂವರು ಆರೋಪಿಗಳು ಪರಾರಿ

Kharajola

MUDA Scam; ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಸಂಸದ ಕಾರಜೋಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.