Chennai Super Kings ಸೇರಿಕೊಂಡ ಖುಷಿಯಲ್ಲಿ ಶಾರ್ದೂಲ್ ಠಾಕೂರ್
Team Udayavani, Mar 16, 2024, 6:25 AM IST
ಮುಂಬಯಿ: ಮುಂಬಯಿ ತಂಡದ ರಣಜಿ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಆಲ್‌ರೌಂಡರ್ ಶಾರ್ದೂಲ್ ಠಾಕೂರ್ ಈಗ 2024ನೇ ಐಪಿಎಲ್ ಪಂದ್ಯಾವಳಿಯನ್ನು ಎದುರು ನೋಡುತ್ತಿದ್ದಾರೆ. ಮರಳಿ ಚೆನ್ನೈ ಸೂಪರ್ ಕಿಂಗ್ಸ್ ಸೇರಿಕೊಳ್ಳುವ ಸಡಗರದಲ್ಲಿದ್ದಾರೆ. ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಹೆಚ್ಚಿನ ಬೆಳವಣಿಗೆ ಕಾಣುವ ನಿರೀಕ್ಷೆ ಠಾಕೂರ್ ಅವರದು.
“ಮಹೀ ಭಾಯ್ ನೇತೃತ್ವದಲ್ಲಿ ಆಡಲು ನಾನು ಬಹಳ ಉತ್ಸುಕನಾಗಿದ್ದೇನೆ. ಸ್ಟಂಪ್ ಹಿಂದೆ ನಿಲ್ಲುವ ಅವರು ಸದಾ ಕಾಲ ನಮಗೆ ಮಾರ್ಗದರ್ಶನ ಮಾಡುತ್ತಿರುತ್ತಾರೆ. ಅವರು ಆಟಗಾರರಿಗೆ ನೀಡುವ ಸ್ವಾತಂತ್ರ್ಯ ಅಮೋಘ. ಹೀಗಾಗಿ ಕುಟುಂಬದಂತಿರುವ ಚೆನ್ನೈ ತಂಡವನ್ನು ಮರಳಿ ಸೇರಿಕೊಳ್ಳುವ ಕಾತರ ನನ್ನದು’ ಎಂಬುದಾಗಿ ಶಾದೂìಲ್ ಠಾಕೂರ್ ಹೇಳಿದರು.
4 ಕೋಟಿ ರೂ. ಸಂಭಾವನೆ
2018ರಿಂದ 2021ರ ತನಕ ಶಾರ್ದೂಲ್ ಠಾಕೂರ್ ಚೆನ್ನೈ ತಂಡದ ಪರ ಆಡಿದ್ದರು. 2022ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ 2023ರಲ್ಲಿ ಕೋಲ್ಕತಾ ನೈಟ್‌ರೈಡರ್ ಪರ ಆಡಿದರು. ಈ ಬಾರಿ 4 ಕೋಟಿ ರೂ.ಗಳ ದೊಡ್ಡ ಮೊತ್ತಕ್ಕೆ ಚೆನ್ನೈ ಸೂಪರ್ ಕಿಂಗ್ಸ್ ಪಾಲಾಗಿದ್ದಾರೆ.
“ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಕಳೆದ ಐಪಿಎಲ್ ಸೀಸನ್‌ನಲ್ಲಿ ನನ್ನ ಆಟ ನಿರೀಕ್ಷಿತ ಮಟ್ಟದಲ್ಲಿರಲಿಲ್ಲ. ಈ ಬಾರಿ ಉತ್ತಮ ಪ್ರದರ್ಶನ ನೀಡುವ ಗುರಿ ಹೊಂದಿದ್ದೇನೆ’ ಎಂದರು. ತಮಿಳುನಾಡು ವಿರುದ್ಧದ ರಣಜಿ ಸೆಮಿಫೈನಲ್‌ನಲ್ಲಿ ಶತಕ ಬಾರಿಸಿದ ಠಾಕೂರ್, ವಿದರ್ಭ ಎದುರಿನ ಫೈನಲ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ 75 ರನ್ ಬಾರಿಸಿ ತಂಡದ ನೆರವಿಗೆ ನಿಂತಿದ್ದರು.
“ನಾನು ಈ ಬಾರಿ ರಣಜಿ ಪ್ರವೇಶಿಸುವಾಗ ಬಹಳ ವಿಳಂಬವಾಗಿತ್ತು. ವಿಜಯ್ ಹಜಾರೆ ಟ್ರೋಫಿಯಲ್ಲಿ ಆಡುತ್ತಿದ್ದೆ. ರಣಜಿಗೆ ಬರುವಾಗ ಆಗಲೇ 5 ಲೀಗ್ ಪಂದ್ಯಗಳು ಮುಗಿದಿದ್ದವು’ ಎಂದರು.
2023ರಲ್ಲಿ ಆಡಿದ 11 ಐಪಿಎಲ್ ಪಂದ್ಯಗಳಲ್ಲಿ ಶಾರ್ದೂಲ್ ಠಾಕೂರ್ ಕೇವಲ 7 ವಿಕೆಟ್ ಉರುಳಿಸಿದ್ದರು. ಬ್ಯಾಟಿಂಗ್ ಸರಾಸರಿ ಕೇವಲ 14.13 ಆಗಿತ್ತು.ಯುವ ಬೌಲರ್ ಸಮೀರ್ ರಿಜ್ವಿ, ನ್ಯೂಜಿಲ್ಯಾಂಡ್ ಆಲ್‌ರೌಂಡರ್ ಡ್ಯಾರಿಲ್ ಮಿಚೆಲ್, ರಚಿನ್ ರವೀಂದ್ರ ಅವರನ್ನೊಳಗೊಂಡ ಈ ಬಾರಿಯ ಚೆನ್ನೈ ತಂಡ ಹೆಚ್ಚು ವೈವಿಧ್ಯಮಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
IPL Mega Auction: ಮೂರನೇ ಸೆಟ್ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
IPL Mega Auction: ಸ್ಪಿನ್ನರ್ ಚಾಹಲ್ ಗೆ ಭಾರೀ ಬೇಡಿಕೆ; ಮಿಲ್ಲರ್ ಲಕ್ನೋಗೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.