Davangere: ಮಾಜಿ ಸಚಿವೆ ನಾಗಮ್ಮ ಕೇಶವಮೂರ್ತಿ ವಿಧಿವಶ
Team Udayavani, Mar 16, 2024, 8:46 PM IST
ದಾವಣಗೆರೆ: ಮಾಜಿ ಸಚಿವೆ ನಾಗಮ್ಮ ಕೇಶವಮೂರ್ತಿ (90) ಶನಿವಾರ ಸಂಜೆ ನಿಧನರಾದರು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಪುತ್ರ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ನಾಗಮ್ಮ ಅವರು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವೆಯಾಗಿ, ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರಾಗಿ, ವಿಧಾನಸಭೆ ಉಪಸಭಾಪತಿಯಾಗಿ ಕಾರ್ಯನಿರ್ವಹಿಸಿದ್ದರು. ಶಿಕ್ಷಣ ಕ್ಷೇತ್ರದಲ್ಲಿ ಅಪಾರ ಕೊಡುಗೆ ನೀಡಿದ್ದ ಅವರು, 1 ರಿಂದ 4 ನೇ ತರಗತಿವರೆಗೂ ಕನ್ನಡ ಮಾಧ್ಯಮ ಕಡ್ಡಾಯ ಮಾಡಿದ್ದರು. ಪ್ರಾಥಮಿಕ ಶಾಲಾ ಹಂತದಲ್ಲಿ ಬಾಲಕಿಯರಿಗೆ ಶೇ. 50 ರಷ್ಟು ಮೀಸಲಾತಿ ನೀಡಲು ಕ್ರಮವಹಿಸಿದ್ದರು. ರಾಜ್ಯ ಮಟ್ಟದ, ವಲಯ ಮಟ್ಟದ ಹತ್ತಾರು ಬೊಧಕ ಮಂಡಳಿ ಸಲಹೆಗಾರರಾಗಿ ಕಾರ್ಯನಿರ್ವಹಿಸಿದ್ದರು.
ಕಾಂಗ್ರೆಸ್ ಪಕ್ಷದಲ್ಲಿ ರಾಜ್ಯ ಉಪಾಧ್ಯಕ್ಷರಾಗಿ, ಪ್ರಧಾನ ಕಾರ್ಯದರ್ಶಿಯಾಗಿ, ಮಹಿಳಾ ಘಟಕದ ರಾಜ್ಯಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ವನಿತಾ ಸಮಾಜ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಮೂಲಕ ಸಮಾಜಸೇವೆಯಲ್ಲಿ ತೊಡಗಿದ್ದರು. ನಾಗಮ್ಮ ಕೇಶವಮೂರ್ತಿ ನಿಧನಕ್ಕೆ ಜಿಲ್ಲೆಯ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.