Drought ನಿರ್ವಹಣೆಗೆ ನೀತಿ ಸಂಹಿತೆ ಅಡ್ಡಿಯಿಲ್ಲ, ಜನಪ್ರತಿನಿಧಿಗಳು ಭಾಗಿಯಾಗುವಂತಿಲ್ಲ: ಮೀನಾ
ತಹಶೀಲ್ದಾರ್, ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿಯೇ ಉಳಿದೆಲ್ಲ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು
Team Udayavani, Mar 16, 2024, 10:46 PM IST
ಬೆಂಗಳೂರು: ಲೋಕಸಭಾ ಚುನಾವಣೆ ಘೋಷಣೆಯಾದ ಶನಿವಾರ ಮಧ್ಯಾಹ್ನದಿಂದಲೇ ಎಲ್ಲೆಡೆ ನೀತಿ ಸಂಹಿತೆ ಜಾರಿಗೆ ಬಂದಿದ್ದು, ಬರ ನಿರ್ವಹಣೆ ಸಹಿತ ಕೆಲವು ತುರ್ತು ಕಾಮಗಾರಿಗಳನ್ನಷ್ಟೇ ಕೈಗೊಳ್ಳಬಹುದಾಗಿರುತ್ತದೆ. ಅದರಲ್ಲೂ ಜನಪ್ರತಿನಿಧಿಗಳು ಯಾವುದೇ ಪಾತ್ರ ವಹಿಸುವಂತಿಲ್ಲ. ತಹಶೀಲ್ದಾರ್, ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿಯೇ ಉಳಿದೆಲ್ಲ ಅಧಿಕಾರಿಗಳು ಕಾರ್ಯನಿರ್ವಹಣೆ ಮಾಡಬೇಕು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಈ ಕುರಿತು ಸ್ಪಷ್ಟನೆ ನೀಡಿರುವ ಅವರು, ಅಧಿಕಾರಿಗಳು ಸರಕಾರದ ನಿಗದಿತ ಕಾರ್ಯಕ್ರಮಗಳನ್ನು ಮುಂದುವರಿಸಲು ನೀತಿ ಸಂಹಿತೆ ಅಡ್ಡಿಯಾಗುವುದಿಲ್ಲ. ಆದರೆ ಜನಪ್ರತಿನಿಧಿಗಳು ಸರಕಾರದ ಸಭೆ, ಕಾರ್ಯಕ್ರಮಗಳಲ್ಲಿ ಭಾಗಿಯಾಗುವಂತಿಲ್ಲ ಎಂದು ಸ್ಪಷ್ಪಪಡಿಸಿದರು.
ಬರ ನಿರ್ವಹಣೆಯ ಸಂದರ್ಭದಲ್ಲಿ ಕುಡಿಯುವ ನೀರು ಪೂರೈಕೆ ಮುಂತಾದ ಚಟುವಟಿಕೆಗಳ ಮೂಲಕ ಜನಪ್ರತಿನಿಧಿಗಳು ಮತದಾರರಿಗೆ ಆಮಿಷವೊಡ್ಡುವಂತಿಲ್ಲ. ಒಂದು ವೇಳೆ ಇಂತಹ ಪ್ರಕರಣಗಳು ಕಂಡುಬಂದರೆ ಚುನಾವಣ ಆಯೋಗಕ್ಕೆ ದೂರು ಸಲ್ಲಿಸಬಹುದು ಎಂದು ಮುಖ್ಯ ಚುನಾವಣಾಧಿಕಾರಿಗಳು ಹೇಳಿದರು.
ಸರಕಾರಿ ವಾಹನಗಳ ಬಳಕೆ, ಖಾಸಗಿ ಕಾರ್ಯಕ್ರಮಗಳಲ್ಲಿ ಮತಯಾಚನೆಗೆ ನಿರ್ಬಂಧ ಇರಲಿದೆ ಎಂದು ತಿಳಿಸಿದ್ದಾರೆ.
ಏನೇನು ಕಟ್ಟುಪಾಡುಗಳು?
*ಸರಕಾರ ಹಾಗೂ ವಿಪಕ್ಷದಲ್ಲಿನ ಪ್ರತಿನಿಧಿಗಳು ಸರಕಾರಿ ವಾಹನ ಬಳಸುವಂತಿಲ್ಲ.
*ಸರಕಾರಿ ಕಟ್ಟಡ, ದೇವಸ್ಥಾನ, ಚರ್ಚ್, ಮಸೀದಿ ಸಹಿತ ಧಾರ್ಮಿಕ ಕ್ಷೇತ್ರಗಳನ್ನು ಮತಪ್ರಚಾರಕ್ಕೆ ಬಳಸುವಂತಿಲ್ಲ.
*ಜನಪ್ರತಿನಿಧಿಗಳು ಮತದಾರರಿಗೆ ಯಾವುದೇ ರೀತಿಯ ಆಸೆ-ಆಮಿಷ ಒಡ್ಡುವಂತಿಲ್ಲ.
*ಹಣಬಲ, ತೋಳ್ಬಲ ಅಥವಾ ಇನ್ಯಾವುದೇ ಬಲಗಳನ್ನೂ ಪ್ರದರ್ಶಿಸುವಂತಿಲ್ಲ.
*ಮತದಾರರನ್ನು ಸೆಳೆಯಲು ಯಾವುದೇ ಉಡುಗೊರೆಗಳನ್ನೂ ಕೊಡುವಂತಿಲ್ಲ.
*ಬರಗಾಲದ ಸಂದರ್ಭ ಬಳಸಿಕೊಂಡು ಮತಪ್ರಚಾರಕ್ಕಾಗಿ ಜನರಿಗೆ ನೀರೂ ಕೊಡುವಂತಿಲ್ಲ.
*ರಾಜಕೀಯ ಪಕ್ಷ, ಅಭ್ಯರ್ಥಿಗಳು, ಕಾರ್ಯಕರ್ತರು ಹಾಗೂ ಸಾಮಾಜಿಕ ಜಾಲತಾಣಗಳ ಮೇಲೆ ಇಂದಿನಿಂದಲೇ ನಿಗಾ ಇಡಲಿದ್ದಾರೆ ಆಯೋಗದ ಸಿಬಂದಿ.
*ಚುನಾವಣೆ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ರಾಜಕಾರಣಿಗಳು ಯಾವುದೇ ಕಾರ್ಯಕ್ರಮ ನಡೆಸಿದರೂ ಅದರ ಖರ್ಚಿನ ಬಾಬ¤ನ್ನು ಆಯಾ ಪಕ್ಷ ಅಥವಾ ಅಭ್ಯರ್ಥಿಯ ಚುನಾವಣ ವೆಚ್ಚಕ್ಕೆ ಸೇರಿಕೊಳ್ಳಲಿದೆ.
*ಚುನಾವಣ ಆಯೋಗ ವಿಧಿಸಿರುವ ವೆಚ್ಚದ ಮಿತಿಯನ್ನು ಯಾವುದೇ ಪಕ್ಷ ಅಥವಾ ಅಭ್ಯರ್ಥಿ ಮೀರುವಂತಿಲ್ಲ. ಪ್ರತಿಯೊಂದರ ಲೆಕ್ಕವನ್ನೂ ಕಾಲ-ಕಾಲಕ್ಕೆ ಒಪ್ಪಿಸಲೇಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.