Shimoga ಇಂದು ಮೋದಿ ಮತಬೇಟೆ: 2 ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರು ಪಾಲ್ಗೊಳ್ಳುವ ನಿರೀಕ್ಷೆ
ಮಧ್ಯ ಕರ್ನಾಟಕದ 4 ಕ್ಷೇತ್ರಗಳನ್ನೊಳಗೊಂಡ ಬೃಹತ್ ರ್‍ಯಾಲಿ
Team Udayavani, Mar 18, 2024, 7:15 AM IST
ಶಿವಮೊಗ್ಗ: ಎರಡು ದಿನಗಳ ಹಿಂದೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತವರು ಕಲಬುರಗಿಯಲ್ಲಿ ರಣಕಹಳೆ ಮೊಳಗಿಸಿದ್ದ ಪ್ರಧಾನಿ ನರೇಂದ್ರ ಮೋದಿಯವರು ಸೋಮವಾರ ಶಿವಮೊಗ್ಗದಲ್ಲಿ ಬಿಜೆಪಿ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳುವ ಮೂಲಕ ಕರುನಾಡ ಕಣವನ್ನು ರಂಗೇರಿಸಲಿದ್ದಾರೆ.
ಸೋಮವಾರ ಮಧ್ಯಾಹ್ನ 1.15ಕ್ಕೆ ವಿಶೇಷ ವಿಮಾನದ ಮೂಲಕ ಆಗಮಿಸುವ ಪ್ರಧಾನಿ ಅವರು 40 ಎಕರೆ ವಿಸ್ತೀರ್ಣವಿರುವ ನಗರದ ಅಲ್ಲಮಪ್ರಭು ಮೈದಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗ ವಹಿಸಲಿದ್ದಾರೆ. ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಬಿ.ವೈ. ವಿಜಯೇಂದ್ರ, ಆರಗ ಜ್ಞಾನೇಂದ್ರ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಉಡುಪಿ- ಚಿಕ್ಕಮಗಳೂರು, ದಕ್ಷಿಣ ಕನ್ನಡ ಜಿಲ್ಲೆಯ ಅಭ್ಯರ್ಥಿಗಳು ಮೋದಿ ಜತೆ ವೇದಿಕೆ ಹಂಚಿಕೊಳ್ಳಲಿದ್ದಾರೆ.
ಮಧ್ಯ ಕರ್ನಾಟಕದ ಎಲ್ಲ ಕ್ಷೇತ್ರಗಳಲ್ಲೂ ಬಿಜೆಪಿ ಪ್ರಾಬಲ್ಯ ಹೊಂದಿದ್ದು, ಈ ಬಾರಿಯೂ ಗೆಲುವಿನ ನಿರೀಕ್ಷೆಯಲ್ಲಿದೆ. ನಾಲ್ಕು ಲೋಕಸಭಾ ಕ್ಷೇತ್ರದ 2 ಲಕ್ಷಕ್ಕೂ ಅಧಿಕ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ ಇದೆ.
ಪ್ರತೀ ಬಾರಿ ರ್‍ಯಾಲಿ ವೇಳೆ ನೇರವಾಗಿ ವೇದಿಕೆಗೆ ಆಗಮಿಸುತ್ತಿದ್ದ ಮೋದಿ ಅವರನ್ನು ಈ ಬಾರಿ ಬೃಹತ್ ಪೆಂಡಾಲ್‌ನ ಮಧ್ಯಭಾಗದಿಂದ ಕರೆತರಲು ಸಿದ್ಧತೆ ಮಾಡಲಾಗಿದೆ. ವೇದಿಕೆಯ ವರೆಗೂ ಕಾರಿನಲ್ಲಿ ಬರುವ ಮೋದಿ ತೆರೆದ ವಾಹನದಲ್ಲಿ ಮಧ್ಯ ಭಾಗದಿಂದ ವೇದಿಕೆಗೆ ಆಗಮಿಸಲಿದ್ದಾರೆ. ಕಾರ್ಯಕರ್ತರು ಹತ್ತಿರದಿಂದ ಮೋದಿ ಅವರನ್ನು ನೋಡಲು ಸಾಧ್ಯವಾಗುವಂತೆ ವ್ಯವಸ್ಥೆ ಮಾಡಲಾಗಿದೆ.
ಸಿದ್ಧತೆ, ಬಂದೋಬಸ್ತ್
ಪ್ರಧಾನಿ ಮೋದಿ ಸಂಚರಿಸುವ ರಸ್ತೆಯ ಸ್ವತ್ಛತೆ, ಗುಂಡಿ ಮುಚ್ಚುವ ಕಾರ್ಯ ಕೈಗೊಳ್ಳಲಾಗಿದ್ದು, ಅವೈಜ್ಞಾನಿಕ ಹಂಪ್ ಗಳನ್ನು ತೆರವು ಮಾಡಲಾಗಿದೆ. ಮೋದಿ ಸಂಚರಿಸುವ ಮಾರ್ಗವನ್ನು 3 ತಾಸು ಕಾಲ ಬಂದ್ ಮಾಡಲಾಗುತ್ತಿದೆ. 12.30ರೊಳಗೆ ಎಲ್ಲ ಕಾರ್ಯಕರ್ತರು ಕಾರ್ಯಕ್ರಮದ ಸ್ಥಳದಲ್ಲಿ ಸೇರಿಕೊಳ್ಳಲು ಸೂಚನೆ ನೀಡಲಾಗಿದೆ. ಬೇರೆ ಜಿಲ್ಲೆಗಳಿಂದ ಬರುವವರಿಗೆ ಬಿ.ಎಚ್. ರಸ್ತೆಯ ಸೈನ್ಸ್ ಮೈದಾನ, ಎಪಿಎಂಸಿ ಯಾರ್ಡ್, ಬೊಮ್ಮನಕಟ್ಟೆ ಭಾಗದಲ್ಲಿ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ. ಭದ್ರತೆಗೆ ಮೂವರು ಎಸ್‌ಪಿ, ಐವರು ಎಎಸ್‌ಪಿ, 19 ಡಿವೈಎಸ್‌ಪಿ, 64 ಸಿಪಿಐ, 156 ಪಿಎಸ್‌ಐ ಹಾಗೂ ಒಂದು ಸಾವಿರ ಪೊಲೀಸ್ ಸಿಬಂದಿ ನಿಯೋಜಿಸಲಾಗಿದೆ.
ಬಂಡಾಯದ ಬಿಸಿ
ಪ್ರಧಾನಿ ಮೋದಿ ಆಗಮಿಸುತ್ತಿದ್ದರೂ ಪಕ್ಷೇತರವಾಗಿ ಸ್ಪರ್ಧಿಸುವೆ ಎಂದಿರುವ ಕೆ.ಎಸ್. ಈಶ್ವರಪ್ಪ ನಿರ್ಧಾರ ರಾಜ್ಯ ನಾಯಕರಿಗೆ ಬಿಸಿತುಪ್ಪವಾಗಿದೆ. ಅವರು ಸಂಧಾನಕ್ಕೆ ಬಗ್ಗುತ್ತಿಲ್ಲ. ರಾಜ್ಯ, ರಾಷ್ಟ್ರ ಮಟ್ಟದ ನಾಯಕರೇ ಬಂದರೂ ತಮ್ಮ ನಿಲುವಿನಿಂದ ಹಿಂದೆ ಸರಿದಿಲ್ಲ. ಇದು ಚುನಾವಣೆಯ ವೇಳೆ ಪಕ್ಷಕ್ಕೆ ಹಾನಿ ತರುವ ಆತಂಕದಲ್ಲಿ ನಾಯಕರಿದ್ದಾರೆ. ಮೋದಿ ಆಗಮನದ ಒಳಗೆ ಈಶ್ವರಪ್ಪ ಮುನಿಸು ಶಮನವಾಗುವುದೇ ಎಂದು ಕಾದು ನೋಡಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!
CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.