Bangalore: ನಮಾಜ್ ವೇಳೆ ಹನುಮಾನ್ ಚಾಲೀಸ ಹಾಕಿದ ಮೊಬೈಲ್ ಅಂಗಡಿ ಮಾಲೀಕನಿಗೆ ಥಳಿತ?
Team Udayavani, Mar 18, 2024, 10:15 AM IST
ಬೆಂಗಳೂರು: ನಮಾಜ್ ಮಾಡುವ ಸಮಯದಲ್ಲಿ ಹನುಮಾನ್ ಚಾಲೀಸ್ ಹಾಕಿದಕ್ಕೆ ಮೊಬೈಲ್ ಶಾಪ್ ಮಾಲೀಕನ ಮೇಲೆ ಐವರು ಅನ್ಯ ಕೋಮಿನ ಯುವಕರು ಹಲ್ಲೆ ನಡೆಸಿರುವ ಘಟನೆ ಹಲಸೂರು ಗೇಟ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮುಖೇಶ್ ಹಲ್ಲೆಗೊಳಗಾದ ಯುವಕ. ಘಟನೆ ಸಂಬಂಧ ಐವರು ಅನ್ಯ ಕೋಮಿನ ಯುವಕ ರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.
ನಗರತ್ಪೇಟೆಯಲ್ಲಿ ಮುಖೇಶ್ ಮೊಬೈಲ್ ಸರ್ವೀಸ್ ಅಂಗಡಿ ಹೊಂದಿದ್ದಾನೆ. ಭಾನುವಾರ ಸಂಜೆ ಅಂಗಡಿಯಲ್ಲಿ ಹನುಮಾನ್ ಚಾಲೀಸ್ ಹಾಕಿದ್ದು, ಜೋರು ಶಬ್ಧ ಕೊಟ್ಟಿದ್ದ ಎಂದು ಹೇಳಲಾಗಿದೆ. ಅದೇ ವೇಳೆ ಅನ್ಯಕೋವಿನ ಯುವಕರು ನಮಾಜ್ ಮಾಡುತ್ತಿದ್ದರು ಎನ್ನಲಾಗಿದೆ. ನಮಾಜ್ ಮಾಡುವಾಗ ಜೋರು ಶಬ್ಧ ಕೇಳಿದ್ದರಿಂದ ಆಕ್ರೋಶಗೊಂಡ ಐವರು ಯುವಕರು, ಮುಖೇಶ್ ಅಂಗಡಿಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ.
ಬಳಿಕ ಆತನನ್ನು ಅಂಗಡಿಯಿಂದ ಹೊರ ಎಳೆದು ಮನಸೋ ಇಚ್ಚೆ ಹಲ್ಲೆ ನಡೆಸಿದ್ದಾರೆ. ಅದರಿಂದ ಮುಖೇಶ್ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಘಟನೆ ಸಂಬಂಧ 5 ಯುವಕರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು. ಹಲಸೂರುಗೇಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.