ಶ್ರೀವಡಭಾಂಡ ಬಲರಾಮ ದೇಗುಲ: ಶೃಂಗಾರಗೊಂಡಿದೆ ಮಲ್ಪೆಯ ವಡಭಾಂಡೇಶ್ವರ

ಪಾರ್ಕಿಂಗ್‌ ಹಾಗೂ ಸ್ವಚ್ಛತೆಗೆ ಎಲ್ಲ ವ್ಯವಸ್ಥೆಯನ್ನು ಮಾಡಲಾಗಿದೆ

Team Udayavani, Mar 18, 2024, 10:04 AM IST

ಶ್ರೀವಡಭಾಂಡ ಬಲರಾಮ ದೇಗುಲ: ಶೃಂಗಾರಗೊಂಡಿದೆ ಮಲೆಯ ವಡಭಾಂಡೇಶ್ವರ

ಮಲ್ಪೆ: ಇಲ್ಲಿನ ವಡಭಾಂಡೇಶ್ವರ ಶ್ರೀ ವಡಭಾಂಡ ಬಲರಾಮ ದೇವಸ್ಥಾನದಲ್ಲಿ ಮಾ. 19ರಿಂದ 29ರವರೆಗೆ ನಡೆಯಲಿರುವ ಪುನಃ
ಪ್ರತಿಷ್ಠೆ, ಅಷ್ಟಬಂಧ ಬ್ರಹ್ಮಕಲಶೋತ್ಸವ, ಶ್ರೀ ಮನ್ಮಹಾರಥೋತ್ಸದ ಅಂಗವಾಗಿ ದೇವಸ್ಥಾನ ಸೇರಿದಂತೆ ನಗರದ ಸುತ್ತಮುತ್ತ ಪ್ರದೇಶವನ್ನು ಪತಾಕೆ ಮತ್ತು ವಿದ್ಯುತ್‌ದೀಪಗಳಿಂದ ಅಲಂಕರಿಸಲಾಗಿದೆ.

ಸ್ವಯಂ ಸೇವಕರೂ ಸೇರಿದಂತೆ ಆಡಳಿತ ಸಮಿತಿ ರಸ್ತೆಗಳ ಇಕ್ಕೆಲಗಳಲ್ಲೂ ಬ್ಯಾನರ್‌, ಬಂಟಿಂಗ್ಸ್‌, ಕಟೌಟ್‌ಗಳನ್ನು ಹಾಕಿದ್ದು ವಡಭಾಂಡೇಶ್ವರ ಅಕ್ಷರಶಃ ಮದುವಣಗಿತ್ತಿಯಂತೆ ಕಾಣುತ್ತಿದೆ. ಈಗಾಗಲೇ ದೇಗಲದ ಬ್ರಹ್ಮಕಲಶೋತ್ಸವ ಸಿದ್ಧತೆಗಳು ಬಹುತೇಕ ಎಲ್ಲ ಪೂರ್ಣಗೊಂಡಿವೆ.

ಪಾರ್ಕಿಂಗ್‌, ಸ್ವಚ್ಛತೆಗೆ ವ್ಯವಸ್ಥೆ ಪಾರ್ಕಿಂಗ್‌ ಹಾಗೂ ಸ್ವಚ್ಛತೆಗೆ ಎಲ್ಲ ವ್ಯವಸ್ಥೆಯನ್ನು ಮಾಡಲಾಗಿದೆ. ವಿಶಾಲವಾದ ಸ್ಕಂದ ಬಲರಾಮ ವೇದಿಕೆ, ಅನ್ನ ಬ್ರಹ್ಮ, ಅನ್ನಛತ್ರಗಳನ್ನು ನಿರ್ಮಿಸಲಾಗಿದೆ. ಸುಮಾರು 50 ಸಾವಿರ ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಅಭಿವೃದ್ದಿ ಸಮಿತಿಯ ಅಧ್ಯಕ್ಷ ನಾಗರಾಜ್‌ ಮೂಲಿಗಾರ್‌, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಸಾಧು ಸಾಲ್ಯಾನ್‌ ತಿಳಿಸಿದ್ದಾರೆ.

ಮಹಿಳೆಯರಿಂದ ನಿತ್ಯ ಕರಸೇವೆ ಮಹಿಳೆಯರು ಬ್ರಹ್ಮಕಲಶ ಸಂಭ್ರಮದಲ್ಲಿ ಕರಸೇವೆಯ ಮೂಲಕ ಕಾರ್ಯಗಳಲ್ಲಿ ತೊಡಗಿಕೊಂಡಿ ರುವುದು ವಿಶೇಷತೆಯಾಗಿದೆ. ಕರಸೇವೆ ಮಾತ್ರವಲ್ಲದೆ ಊರೂರು ಅಮಂತ್ರಣ ಪತ್ರಿಕೆ ವಿತರಣೆ, ಭಜನೆ ಹೀಗೆ ಹಲವು ರೀತಿಯಲ್ಲಿ ತಮ್ಮನ್ನು ನಿರಂತರವಾಗಿ ತೊಡಗಿಸಿಕೊಂಡಿದ್ದಾರೆ.

ನಾಳೆ ಹೊರೆಕಾಣಿಕೆ
ಮಾ. 19ರಂದು ಸಂಜೆ 4ರಿಂದ ಹಸುರು ಹೊರೆ ಕಾಣಿಕೆ ಮೆರವಣಿಗೆಯು ಕೊಡವೂರು ಶಂಕರನಾರಾಯಣ ದೇವಸ್ಥಾನದಿಂದ 101 ಚೆಂಡೆ ಸೇರಿದಂತೆ ವಿವಿಧ ವೇಷಭೂಷಣದೊಂದಿಗೆ ವೈಭವದ ಶೋಭಾಯಾತ್ರೆಯಲ್ಲಿ ವಡಭಾಂಡ ಬಲರಾಮ ದೇವಸ್ಥಾನಕ್ಕೆ ಸಾಗಿ ಬರಲಿದೆ. ಬೆಳಗ್ಗೆ ದೇವತಾ ಪ್ರಾರ್ಥನೆ, ತೋರಣ ಮುಹೂರ್ತ ಉಗ್ರಾಣ ಮುಹೂರ್ತ, ಸಂಜೀವಿನಿ ಮೃತ್ಯುಂಜಯ ಹೋಮ, ಸಂಜೆ ವಾಸ್ತು ಹೋಮಾದಿ ಸೇರಿದಂತೆ ವಿವಿಧ ಧಾರ್ಮಿಕ ಪ್ರಕ್ರಿಯೆಗಳು ನಡೆಯಲಿದೆ. ಮಾ. 19ರಿಂದ ಮಾ. 29ರ ವರೆಗೆ ಬೆಳಗ್ಗೆ ಮತ್ತು ಸಂಜೆ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನಗಳು ಜರಗಲಿರುವುದು.

ಸಾಂಸ್ಕೃತಿಕ ಕಾರ್ಯಕ್ರಮ
ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಮಾ. 19ರಂದು ರಾತ್ರಿ 8ರಿಂದ ವಿದುಷಿ ಸುನೀತ ಗಿರೀಶ್‌ ಕೆದ್ಲಾಯ ಅವರಿಂದ ವೀಣಾ ವಾದನ, ಮಂದಾರ್ತಿ ಸಮರ್ಪಣ ಮತ್ತು ತಂಡದವರಿಂದ ಭರತನಾಟ್ಯ, 20ರಂದು ವಿದುಷಿ ಸಹನಾ ಕೃಷ್ಣರಾಜ್‌ ಭಟ್‌ ಮತ್ತು ಬಳಗ, ವಿದುಷಿ ಶರ್ಮಿಳಾ ರಾವ್‌ ಮತ್ತು ಶಿಷ್ಯವೃಂದದವರಿಂದ ವಯಲಿನ್‌ ವಾದನ ನಡೆಯಲಿದೆ.

21 ರಂದು ರಾತ್ರಿ ಬನ್ನಂಜೆ ಶ್ರೀಧರ್‌ ರಾವ್‌ ಬಳಗದವರಿಂದ ಭರತನಾಟ್ಯ, 22ರಂದು ತೊಟ್ಟಂ ಗಜಾನನ ಯಕ್ಷಗಾನ ಕಲಾಸಂಘ ಮತ್ತು ಅತಿಥಿ ಕಲಾವಿದರ ಕೂಡುವಿಕೆಯಿಂದ ಶ್ರೀ ವಡಭಾಂಡೇಶ್ವರ ಕ್ಷೇತ್ರ ಮಹಾತ್ಮೆ ಯಕ್ಷಗಾನ, 23ರಂದು ಸುಮನಸಾ ಕೊಡವೂರು ತಂಡದವರಿಂದ ಶಿಕಾರಿ ತುಳು ನಾಟಕ, 24ರಂದು ನವಸುಮ ರಂಗಮಂಚ ಕೊಡವೂರು ತಂಡದಿಂದ ಗಿಡ್ಡಿ ತುಳು ನಾಟಕ, 25ರಂದು ಸೃಷ್ಟಿ ನೃತ್ಯಕಲಾ ಕುಟೀರ ಉಡುಪಿ ತಂಡದವರಿಂದ ಶ್ರೀ ಕೃಷ್ಣ ಸಂದರ್ಶನಂ ನೃತ್ಯರೂಪಕ, 26ರಂದು ಸ್ಥಳಿಯರಿಂದ ವಿವಿಧ ವಿನೋದಾವಳಿ ನಡೆಯಲಿರುವುದು.

ಟಾಪ್ ನ್ಯೂಸ್

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Gold-saffron

Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

KSA-Nia-Arrest

Operation: ಕಾಸರಗೋಡಿನಲ್ಲಿ ಎನ್‌.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

byndoor

Malpe: ತೀವ್ರ ಆಸ್ವಸ್ಥಗೊಂಡ ವ್ಯಕ್ತಿ ಸಾವು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Gold-saffron

Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

KSA-Nia-Arrest

Operation: ಕಾಸರಗೋಡಿನಲ್ಲಿ ಎನ್‌.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.