Arrested: ಚಿನ್ನಾಭರಣ ದರೋಡೆಗೆ ಯತ್ನಿಸಿದ್ದ ನಾಲ್ವರ ಬಂಧನ
Team Udayavani, Mar 18, 2024, 10:22 AM IST
ಬೆಂಗಳೂರು: ಕೊಡಿಗೇಹಳ್ಳಿಯ ದೇವಿ ನಗರದ ಲಕ್ಷ್ಮೀ ಬ್ಯಾಂಕರ್ಸ್ ಆ್ಯಂಡ್ ಜ್ಯುವೆಲರ್ಸ್ ಅಂಗಡಿಗೆ ನುಗ್ಗಿ ಮಾಲೀಕನ ಮೇಲೆ ಗುಂಡಿನ ದಾಳಿ ನಡೆಸಿ ಚಿನ್ನಾಭರಣ ದೋಚಲು ಯತ್ನಿಸಿದ್ದ ನಾಲ್ವರು ಆರೋಪಿಗಳನ್ನು ಕೊಡಿಗೇಹಳ್ಳಿ ಪೊಲೀಸರು ಮಧ್ಯ ಪ್ರದೇಶದಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ.
ಮಧ್ಯಪ್ರದೇಶದ ಖಾನಾ ಪಂಡಿತ್, ಮೋಸೆ ಅಲಿಯಾಸ್ ಬಂಟಿ, ಆಶು ಪಂಡಿತ್ ಹಾಗೂ ಸೂರಜ್ ಎಂಬವರನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ಮಾ.14ರಂದು ಬೆಳಗ್ಗೆ 11 ಗಂಟೆಗೆ ಮಳಿಗೆಗೆ ನುಗ್ಗಿದ್ದ ಆರೋಪಿಗಳು, ಮಾಲೀಕ ಹಾಪುರಾಮ್ (38) ಹಾಗೂ ಅನಂತ ರಾಮ್ (21) ಎಂಬುವರ ಮೇಲೆ ಎರಡು ಸುತ್ತು ಗುಂಡು ಹಾರಿಸಿ, ಚಿನ್ನಾಭರಣ ದೋಚಲು ಯತ್ನಿಸಿದ್ದರು. ಆದರೆ, ಸಾರ್ವಜನಿಕರು ಜಮಾವಣೆ ಗೊಂಡಿದ್ದರಿಂದ ಆರೋಪಿಗಳು ಸ್ಥಳದಲ್ಲೇ ಪಿಸ್ತೂಲ್ ಬಿಟ್ಟು ಪರಾರಿಯಾಗಿದ್ದರು ಎಂದು ಪೊಲೀಸರು ಹೇಳಿದರು.
ಪ್ರಕರಣ ದಾಖಲಾದ ಬಳಿಕ ಆರೋಪಿ ಗಳ ಪತ್ತೆಗೆ ವಿಶೇಷ ತಂಡ ರಚಿಸಲಾಗಿತ್ತು. ಆರೋಪಿಗಳು ಯಾವುದೇ ಚಿನ್ನಾಭರಣ ದೋಚಿಕೊಂಡು ಹೋಗಿರಲಿಲ್ಲ. ಜತೆಗೆ ಪ್ರಕರಣದಲ್ಲಿ ಸಾಕಷ್ಟು ಅನುಮಾನಗಳು ಇದ್ದವು. ಹೀಗಾಗಿ ಕೆಲ ಸಾಂದರ್ಭಿಕ ಪುರಾವೆಗಳನ್ನು ಆಧರಿಸಿ ಆರೋಪಿಗಳನ್ನು ಪತ್ತೆ ಮಾಡಿದ್ದ ವಿಶೇಷ ತಂಡ ಮಧ್ಯ ಪ್ರದೇಶಕ್ಕೆ ಹೋಗಿತ್ತು. ಅಲ್ಲಿಯೇ ನಾಲ್ವರು ಆರೋಪಿಗಳನ್ನು ಸ್ಥಳೀಯ ಪೊಲೀಸರ ಸಹಾಯದಿಂದ ವಶಕ್ಕೆ ಪಡೆದದ್ದಾರೆ. ಸದ್ಯದಲ್ಲೇ ನಗರಕ್ಕೆ ಕರೆತರಲಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದರು.
ವಶಕ್ಕೆ ಪಡೆದುಕೊಂಡಿರುವ ಆರೋಪಿಗಳು ಮಧ್ಯಪ್ರದೇಶ, ಮಹಾರಾಷ್ಟ್ರದಲ್ಲೂ ದರೋಡೆ ಮಾಡಿರುವ ಮಾಹಿತಿ ಇದೆ. ಬೆಂಗಳೂರಿನಲ್ಲಿ ನಡೆದ ದರೋಡೆಯಲ್ಲೂ ಸ್ಥಳೀಯ ವ್ಯಕ್ತಿ ಸಹಾಯ ಮಾಡಿದ್ದು, ಆತನ ಮಾಹಿತಿ ಕಲೆಹಾಕಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Organ Donation; ಸಾವಿನ ನಂತರವೂ ನೆರವಾದ ಜೀವ: 5 ಜೀವ ಉಳಿಸಿದ ಅಂಗಾಂಗ ದಾನ
Cancer: ಎಳೆಯ ಮಕ್ಕಳಲ್ಲಿ ಹೆಚ್ಚುತ್ತಿದೆ ಕ್ಯಾನ್ಸರ್ ಸಮಸ್ಯೆ
Bengaluru: ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಗೆ ಯುವಕನಿಂದ ಲೈಂಗಿಕ ಕಿರುಕುಳ; ದೂರು
Theft: ವಿದ್ಯಾಗಣಪತಿ, ಸುಬ್ರಹ್ಮಣ್ಯ ದೇಗುಲಗಳ ಹುಂಡಿ ಹಣ, 5 ಚಿನ್ನದ ತಾಳಿ ಬೊಟ್ಟು ಕಳವು
Underpass: ಅಪಾಯ ಆಹ್ವಾನಿಸುತ್ತಿದೆ ಅಂಡರ್ಪಾಸ್ ಫಾಲ್ಸ್ ಸೀಲಿಂಗ್
MUST WATCH
ಹೊಸ ಸೇರ್ಪಡೆ
WPL Auction: ಎಲ್ಲಾ ಆರು ತಂಡಗಳು ಉಳಿಸಿಕೊಂಡ ಆಟಗಾರರ ಪಟ್ಟಿ ಇಲ್ಲಿದೆ
Udupi: ಮುನಿಯಾಲ್ ಅಯುರ್ವೇದ ಕಾಲೇಜಿಗೆ ರಾಷ್ಟ್ರ ಮಟ್ಟದಲ್ಲಿ “ಎ’ ಗ್ರೇಡ್
ಜೀವನ ಪರ್ಯಂತ ವೀಲ್ ಚೇರ್ನಲ್ಲೇ ಇರುವ ಪುತ್ರನಿಗೆ ಅದ್ಧೂರಿಯಾಗಿ ಮದುವೆ ಮಾಡಿಸಿದ ಖ್ಯಾತ ನಟ
WPL 2025: ಆರ್ ಸಿಬಿ ಆಟಗಾರರ ರಿಟೆನ್ಶನ್ ಪಟ್ಟಿ ಬಿಡುಗಡೆ; ಪ್ರಮುಖ ಆಟಗಾರ್ತಿ ಔಟ್
Madras: ಮರಿಕೋತಿಗೆ ಚಿಕಿತ್ಸೆ ನೀಡಿದ್ದ ಪಶುವೈದ್ಯರು ಮತ್ತೆ ಭೇಟಿ ಮಾಡಬಹುದು: ಹೈಕೋರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.