BJP ನಡತೆಗೆ ಜೆಡಿಎಸ್ ಅತೃಪ್ತಿ: ಪ್ರಧಾನಿ ಸಭೆಗಳಿಗೆ ಆಹ್ವಾನ ನೀಡದ್ದಕ್ಕೂ ಗರಂ
ವಿಶ್ವಾಸಕ್ಕೆ ತೆಗೆದುಕೊಳ್ಳದ ಬಗ್ಗೆ ಅಸಮಾಧಾನ ವ್ಯಕ್ತ
Team Udayavani, Mar 19, 2024, 12:43 AM IST
ಬೆಂಗಳೂರು: ಬಿಜೆಪಿ- ಜೆಡಿಎಸ್ ಮೈತ್ರಿ ಗಟ್ಟಿಯಾಗುವ ಹಂತ ದಲ್ಲೇ ಬಿರುಕು ಕಾಣಿಸಿಕೊಂಡಿದೆ. ನಂಬಿಕೆ-ವಿಶ್ವಾಸದ ಮಾತು ಗಳೂ ಕೇಳಿ ಬಂದಿವೆ. ಮೈತ್ರಿ ವಿಚಾರವಾಗಿ ಬಿಜೆಪಿ ತಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವ ಬಗ್ಗೆ ಜೆಡಿಎಸ್ ಶಾಸಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿ ರುವ ಬೆನ್ನಲ್ಲೇ ಅದಕ್ಕೆ ಧ್ವನಿಗೂಡಿಸಿರುವ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ಮಿತ್ರ ಪಕ್ಷ ಬಿಜೆಪಿಯು ಜೆಡಿಎಸ್ ಪಕ್ಷವನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂದು ಆರೋಪದ ಬಾಣ ಬಿಟ್ಟಿದ್ದಾರೆ.
ಕೋಲಾರ ಕ್ಷೇತ್ರ ಬಿಟ್ಟುಕೊಡುವ ವಿಚಾರದಲ್ಲಿ ಮೀನಮೇಷ ಎಣಿಸುತ್ತಿರುವ ಬಿಜೆಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ರುವ ಅವರು ಮಂಡ್ಯ, ಹಾಸನದ ಜತೆ ಕೋಲಾರದಲ್ಲಿ ಜೆಡಿಎಸ್ ಸ್ಪರ್ಧೆ ಮಾಡಲಿದೆ ಎಂದು ಘೋಷಿಸಿದ್ದಾರೆ. ಸೋಮವಾರ ಜೆಡಿಎಸ್‌ನ ರಾಜ್ಯ ಕಚೇರಿಯಲ್ಲಿ ಕರೆಯಲಾಗಿದ್ದ ಕೋರ್ ಕಮಿಟಿ ಸಭೆ ಹಾಗೂ ಚುನಾವಣ ಉಸ್ತುವಾರಿಗಳ ಸಭೆಗಳು ಬಿಜೆಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸುವ ವೇದಿಕೆಯಾಗಿ ಮಾರ್ಪಟ್ಟಿತ್ತು.
ಪಕ್ಷ ಒತ್ತೆ ಇಟ್ಟು
ಮೈತ್ರಿ ಅಗತ್ಯವಿಲ್ಲ
ಪಕ್ಷವನ್ನು ಒತ್ತೆ ಇಟ್ಟು ಮೈತ್ರಿ ಅಗತ್ಯವಿಲ್ಲ. ನಮಗೆ ಮೋದಿ ಅವರ ಬಗ್ಗೆ ಅಪಾರ ಗೌರವ ಇದೆ. ಆದರೆ ಬಿಜೆಪಿಯಿಂದ ಇಂಥ ನಡವಳಿಕೆ ನಿರೀಕ್ಷಿಸಿರಲಿಲ್ಲ. ಕೇವಲ 2 ಸೀಟಿಗಾಗಿ ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳಬೇಕಿತ್ತೇ? ಇವತ್ತೇ ಕೋಲಾರ ಅಭ್ಯರ್ಥಿಯನ್ನು ಘೋಷಣೆ ಮಾಡಿ. ಇಂತಹ ಅನಿಶ್ಚಿತತೆಯಿಂದ ಪಕ್ಷಕ್ಕೆ ನಷ್ಟ ಆಗುತ್ತದೆ ಎಂದು ಮುಖಂಡರು ನೇರವಾಗಿ ಹೇಳಿದರು.
ಪ್ರಧಾನಿ ಬಂದಾಗಲೂ ನಿರ್ಲಕ್ಷ್ಯ
ರಾಜ್ಯಕ್ಕೆ ಪ್ರಧಾನಿ ಬರುತ್ತಿದ್ದಾರೆ, ಭಾಷಣ ಮಾಡಿ ಹೋಗುತ್ತಿದ್ದಾರೆ. ಪ್ರಧಾನಿಗಳ ಸಭೆಗಳಿಗೆ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರನ್ನು ಕರೆಯಬೇಕಲ್ಲವೇ? ಕಲಬುರಗಿ ಸಭೆಗೂ ಕರೆದಿಲ್ಲ. ಶಿವಮೊಗ್ಗ ಸಭೆಗೂ ದೇವೇಗೌಡರು, ಕುಮಾರಸ್ವಾಮಿ ಅವರನ್ನು ಕರೆಯಬಹುದಿತ್ತು, ಕರೆದಿಲ್ಲ ಎಂದು ಮುಖಂಡರು ಸಿಟ್ಟು ಹೊರಹಾಕಿದರು.
ನಾನೇ ದಿಲ್ಲಿಗೆ ಹೋಗುತ್ತೇನೆ: ಎಚ್‌ಡಿಡಿ
ಮುಖಂಡರ ಮಾತುಗಳನ್ನು ಆಲಿಸಿದ ದೇವೇಗೌಡ ಹಾಗೂ ಎಚ್.ಡಿ. ಕುಮಾರಸ್ವಾಮಿಯವರು ಮುಖಂಡರಿಗೆ ಸಮಾಧಾನ ಹೇಳಿದರು. ಇನ್ನೊಮ್ಮೆ ಅಮಿತ್ ಶಾ, ನಡ್ಡಾ ಜತೆ ಮಾತನಾಡುವಂತೆ ಕುಮಾರಸ್ವಾಮಿ ಅವರಿಗೆ ಸೂಚನೆ ನೀಡಿದ ಮಾಜಿ ಪ್ರಧಾನಿ, ಇಲ್ಲವಾದರೆ ನಾನೇ ದಿಲ್ಲಿಗೆ ಹೋಗಿ ಬರುತ್ತೇನೆ. ಯಾವುದೇ ಕಾರಣಕ್ಕೂ ಪಕ್ಷದ ಹಿತಕ್ಕೆ ವಿರುದ್ಧವಾಗಿ ಹೆಜ್ಜೆಇಡುವುದಿಲ್ಲ. ಇದು ಬಿಜೆಪಿ ನಾಯಕರಿಗೂ ಗೊತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Love Reddy: ತೆರೆಗೆ ಬಂತು ʼಲವ್ ರೆಡ್ಡಿʼ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.