ಯರಡಾಲ ಗ್ರಾಮ; ಇಲ್ಲಿ ‌ಮೂಲ ಸೌಕರ್ಯಗಳದ್ದೇ ಕೊರತೆ

Team Udayavani, Mar 19, 2024, 5:34 PM IST

ಯರಡಾಲ  ಗ್ರಾಮ; ಇಲ್ಲಿ ‌ಮೂಲ ಸೌಕರ್ಯಗಳದ್ದೇ ಕೊರತೆ

ಉದಯವಾಣಿ ಸಮಾಚಾರ
ಬೈಲಹೊಂಗಲ: ಬೈಲವಾಡ ಗ್ರಾಪಂ ವ್ಯಾಪಿಯಲ್ಲಿ ಬರುವ ಯರಡಾಲ ಗ್ರಾಮದಲ್ಲಿ ಮೂಲಸೌಕರ್ಯಗಳ ಕೊರತೆ ಕಾಡುತ್ತಿದೆ.
ಸುಮಾರು 4500 ಜನಸಂಖ್ಯೆ ಹೊಂದಿದ ಈ ಗ್ರಾಮದಲ್ಲಿ ಕುಡಿಯುವ ನೀರಿನ ಕೊರತೆ ಇದೆ.

ನೀರಿಗಾಗಿ ಮೈಲುಗಟ್ಟಲೇ ಕೊಡ ಹಿಡಿದು ಅಲೆಯುವ ಪರಿಸ್ಥಿತಿ ಇದೆ. ಈ ಊರಿನಲ್ಲಿರುವ ಗಟಾರುಗಳು ಗಬ್ಬೆದ್ದು ನಾರುತ್ತಿವೆ. ಕೊಳಚೆ ನೀರು ಗಬ್ಬೆದ್ದು ನಾರುತ್ತಿದೆ. ರಸ್ತೆ ಅಗೆದು ಹಾಗೇ ಬಿಡಲಾಗಿದೆ. ಇಂಥ ಅನೇಕ ಸಮಸ್ಯೆಗಳ ಜತೆ ಜನರು ಬದುಕು ನಡೆಸಬೇಕಿರುವುದು ಅನಿವಾರ್ಯವಾಗಿದೆ.

2021-22 ನೇ ಸಾಲಿನಲ್ಲಿ ಗ್ರಾಮದಲ್ಲಿ ಅನುಷ್ಠಾನಗೊಳಿಸಿದ ಜಲಜೀವನ ಮಿಷನ್‌ ಕಾಮಗಾರಿ ಅಡಿಯಲ್ಲಿ ಗ್ರಾಮದ ಸುಮಾರು 492 ಮನೆಗಳಿಗೆ 1.34 ಕೋಟಿ ರೂ. ಅಂದಾಜು ವೆಚ್ಚದಲ್ಲಿ 7-10-2022ಕ್ಕೆ ಯೋಜನೆಯನ್ನು ಕಡ್ಡಾಯವಾಗಿ ಪೂರ್ಣಗೊಳಿಸಬೇಕಿತ್ತು. ಆದರೆ ಗುತ್ತಿಗೆದಾರರ ಅಸಡ್ಡೆ,ಅಧಿಕಾರಿಗಳ ಸೂಕ್ತ ಮಾರ್ಗದರ್ಶನ ಕೊರತೆಯಿಂದ
ಕಾಮಗಾರಿ ನನೆಗುದಿಗೆ ಬಿದ್ದಿದ್ದು, ಮನೆಗೆ ನೀರು ಯಾವಾಗ ಬರುವುದೋ ಎಂದು ಚಾತಕ ಪಕ್ಷಿಯಂತೆ ಕಾಯಬೇಕಾದ ಅನಿವಾರ್ಯತೆ ಎದುರಾಗಿದೆ.

ಮುಂದಿನ ತಿಂಗಳು ಗ್ರಾಮದಲ್ಲಿ ಗ್ರಾಮದೇವಿ ಜಾತ್ರೆ ನಡೆಯಲಿದ್ದು, ಬಹುಸಂಖ್ಯೆಯ ಭಕ್ತರು ಆಗಮಿಸುವ ನಿರೀಕ್ಷೆಯಿದೆ. ಹೀಗಾಗಿ ಆಡಳಿತ ಕೂಡಲೇ ಜೆಜೆಎಂ ಯೋಜನೆ ಪೂರ್ಣಗೊಳಿಸಿ ಜನರಿಗೆ ಸಮರ್ಪಕ ನೀರೊದಗಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಬೈಲಹೊಂಗಲ ತಾಲೂಕಿನ ಯರಡಾಲ ಗ್ರಾಮದಲ್ಲಿ ಜಲಜೀವನ ಮಿಷನ್‌ ಯೋಜನೆ ಆರಂಭಿಸಲಾಗಿದ್ದು, ಕೆಲ ಸಮಸ್ಯೆಗಳು
ಎದುರಾದ ಕಾರಣ ವಿಳಂಬವಾಗಿದೆ. ಕೂಡಲೇ ಕಾಮಗಾರಿ ಪೂರ್ಣಗೊಳಿಸಿ ಜನರಿಗೆ ಅನುಕೂಲ ಮಾಡಿಕೊಡಲಾಗುವುದು.
ಶಿವನಗೌಡಾ ಪಾಟೀಲ, ಸಹಾಯಕ ಅಭಿಯಂತರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಬೈಲಹೊಂಗಲ

ಯರಡಾಲ ಗ್ರಾಮವು ಹಲವು ವರ್ಷಗಳಿಂದ ಕುಡಿಯುವ ನೀರಿನ ಬವಣೆ ಎದುರಿಸುತ್ತಿದ್ದು ಜಲ ಜೀವನ ಮಿಷನ್‌ ನನೆಗುದಿಗೆ ಬಿದ್ದ ಕಾರಣ ಜನರು ಸಂಕಷ್ಟ ಎದುರಿಸಬೇಕಿದೆ. ಬೇಗನೆ ಮನೆಗಳಿಗೆ ನೀರು ಹರಿಸಬೇಕಿರುವುದು ಅವಶ್ಯವಾಗಿದೆ.
*ಶ್ರೀಶೈಲ ಮಲ್ಲಪ್ಪ ರಾಜಗೋಳಿ,
ಸಾಮಾಜಿಕ ಕಾರ್ಯಕರ್ತ, ಯರಡಾಲ.

ಟಾಪ್ ನ್ಯೂಸ್

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-huliraya

Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ

ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

CT RAVI 2

C T Ravi; ಸನಾತನ ಧರ್ಮ ಉಳಿದರೆ ದೇಶದ ಉಳಿವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.