ಹೆರಿಗೆ ಬಳಿಕ ಸರ್ಕಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಬಾಣಂತಿ ಸಾವು, ನಾಲ್ವರು ಸಿಬ್ಬಂದಿ ಸಸ್ಪೆಂಡ್
Team Udayavani, Mar 19, 2024, 11:01 PM IST
ವಿಜಯಪುರ : ಹೆರಿಗೆ ಬಳಿಕ ಬಾಣಂತಿಗೆ ಕಾಣಿಸಿಕೊಂಡ ರಕ್ತದ ಸಮಸ್ಯೆಯಿಂದ ಮೃತಪಟ್ಟಿದ್ದು, ಕರ್ತವ್ಯ ನಿರ್ಲಕ್ಷ್ಯದ ಆರೋಪದಲ್ಲಿ ಸರ್ಕಾರಿ ಜಿಲ್ಲಾ ಆಸ್ಪತ್ರೆಯ ನಾಲ್ವರನ್ನು ಅಮಾನತು ಮಾಡಿರುವ ಘಟನೆ ಜರುಗಮಾಡು ಬಬಲೇಶ್ವರ ತಾಲೂಕಿನ ದದಾಮಟ್ಟಿ ಗ್ರಾಮದ ಶಾರದಾ ದೊಡಮನಿ ಮೃತ ಮಹಿಳೆ.
ಗರ್ಭಿಣಿಯಾಗಿದ್ದ ಶಾರದಾ ಹೆರಿಗೆಗಾಗಿ ವಿಜಯಪುರ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದಳು. ಗಂಡು-ಹೆಣ್ಣು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಳು.
ಆದರೆ ಹೆರಿಗೆ ಬಳಿಕ ಬಾಣಂತಿ ಶಾರದಾ ಅವರಿಗೆ ತೀವ್ರ ರಕ್ತಸ್ರಾವ ಸಮಸ್ಯೆ ಎದುರಾಗಿತ್ತು. ಇದರಿಂದ ಅಸ್ವಸ್ಥಳಾದ ಶಾರದಾಳಿಗೆ ರಕ್ತದ ಕೊರತೆ ನೀಡುವಲ್ಲಿ ಯಡವಟ್ಟು ಮಾಡಿಕೊಂಡಿದ್ದಾರೆ.
ಬಾಣಂತಿ ಶಾರದಾಗೆ ಎ ಪಾಸಿಟಿವ್ ರಕ್ತದ ಬದಲಾಗಿ ಬಿ ಪಾಸಿಟಿವ್ ರಕ್ತ ನೀಡಿದ್ದೇ ಸಮಸ್ಯೆಗೆ ಕಾರಣ ಎಂದು ದೂರಲಾಗಿದೆ.
ಕೂಡಲೇ ಸರ್ಕಾರಿ ಆಸ್ಪತ್ರೆಯಲ್ಲಿ ಜೀವನ್ಮರಣದೊಂದಿಗೆ ಹೋರಾಡುತ್ತಿದ್ದ ಶಾರದಾಳನ್ನು ಅತ್ಯಾಧುನಿಕ ಸೌಲಭ್ಯ ಇರುವ ಬಿ.ಎಲ್.ಡಿ.ಇ. ಆಸ್ಪತ್ರೆಗೆ ದಾಖಲಿಸಲಾಗಿದೆ.
ಫೆ.23 ರಿಂದಲೇ ಬಿ.ಎಲ್.ಡಿ.ಇ. ಆಸ್ಪತ್ರೆ ವೈದ್ಯರ ಸತತ 26 ದಿನಗಳ ಪ್ರಯತ್ನ ಬಳಿಕವೂ ಚಿಕಿತ್ಸೆ ಫಲಿಸದೇ ಶಾರದಾ ಮೃತಪಟ್ಟಿದ್ದಾಳೆ.
ಮೃತಳ ಅನಾಥ ಅವಳಿ ಶಿಶುಗಳನ್ನು ಬಿ.ಎಲ್.ಡಿ.ಇ. ಆರೈಕೆ ಮಾಡಲಾಗುತ್ತಿದೆ.
ಸರ್ಕಾರಿ ಆಸ್ಪತ್ರೆ ವೈದ್ಯರು, ಸಿಬ್ಬಂದಿ ನಿರ್ಲಕ್ಷವೇ ಶಾರದಾಳ ಸಾವಿಗೆ ಕಾರಣ ಎಂದು ಕುಟುಂಬ ಸದಸ್ಯರು ದೂರಿದ್ದಾರೆ.
ಸದರಿ ಪ್ರಕರಣದಲ್ಲಿ ಲ್ಯಾಬ್ ಟೆಕ್ನೀಸಿಯನ್ ಈರಪ್ಪ ಜಂಬಗಿ, ಸ್ಟಾಪ್ ನರ್ಸ್ ಸುರೇಖಾ, ಲಕ್ಷ್ಮೀ, ಸವಿತಾ ಎಂಬವರನ್ನು ಸೇವೆಯಿಂದ ಅಮಾನತು ಮಾಡಿ ಸರ್ಕಾರಿ ಜಿಲ್ಲಾ ಆಸ್ಪತ್ರೆಯ ಸರ್ಜನ್ ಡಾ.ಶಿವಾನಂದ ಮಾಸ್ತಿಹೊಳಿ ಆದೇಶ ಹೊರಡಿಸಿದ್ದಾರೆ.
ಬಾಣಂತಿ ಶಾರದಾ ಸಾವಿಗೆ ಸರ್ಕಾರಿ ಆಸ್ಪತ್ರೆ ಸಿಬ್ಬಂದಿ ಆಕೆಯ ರಕ್ತದ ಗುಂಪಿನ ಬದಲಾಗಿ ಬೇರೆ ಗುಂಪಿನ ರಕ್ತ ಹಾಕಿರುವುದೇ ಕಾರಣ . ಪ್ರಕರಣದ ತನಿಖೆ ನಡೆಸಬೇಕು. ಮೃತಳ ಕುಟುಂಬಸ್ಥರಿಗೆ ಪರಿಹಾರ ನೀಡಬೇಕು ಎಂದು ಕುಟುಂಬ ಸದಸ್ಯರು ಹಾಗೂ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಇಡೀ ಪ್ರಕರಣದ ತನಿಖೆಯ ಬಳಿಕ ಶಾರದಾಳ ಸಾವಿಗೆ ನಿಖರ ಕಾರಣ ತಿಳಿಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
MUST WATCH
ಹೊಸ ಸೇರ್ಪಡೆ
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.